Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ...

ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾಗಿ ಇಬ್ರಾಹೀಂ ಸಖಾಫಿ ನೇಮಕ

ವಾರ್ತಾಭಾರತಿವಾರ್ತಾಭಾರತಿ19 Jun 2022 4:55 PM IST
share
ಕೆಸಿಎಫ್ ಯುಎಇ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾಗಿ ಇಬ್ರಾಹೀಂ ಸಖಾಫಿ ನೇಮಕ

ದುಬೈ: ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಇದರ ಯುಎಇ ರಾಷ್ಟ್ರೀಯ ಸಮಿತಿಯ ನೂತನ ಅಧ್ಯಕ್ಷರಾಗಿ ಇಬ್ರಾಹಿಂ ಸಖಾಫಿ ಕೆದುಂಬಾಡಿ ಅವರನ್ನು ನೇಮಕ ಮಾಡಲಾಯಿತು.

ದುಬೈಯ ಅಬ್ಜದ್ ಗ್ಯ್ರಾನ್ಡ್ ಹೋಟೆಲ್ ನಲ್ಲಿ ನಿಕಟ ಪೂರ್ವ ಅಧ್ಯಕ್ಷರಾದ ಅಬ್ದುಲ್ ಜಲೀಲ್ ನಿಝಾಮಿ ಅಧ್ಯಕ್ಷತೆ ಯಲ್ಲಿ  ನಡೆದ ಸಮಾರಂಭದಲ್ಲಿ 2022-24ನೆ ಸಾಲಿನ ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ನೂತನ ಉಪಾಧ್ಯಕ್ಷರಾಗಿ ಝೈನುದ್ದೀನ್ ಹಾಜಿ ಬೆಳ್ಳಾರೆ ನೇಮಕಗೊಂಡರೆ ಪ್ರಧಾನ ಕಾರ್ಯದರ್ಶಿಯಾಗಿ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಮೂಸಾ ಹಾಜಿ ಬಸರಾ ಪುನರಾಯ್ಕೆಯಾದರು. ಕೋಶಾಧಿಕಾರಿಯಾಗಿ ಇಬ್ರಾಹೀಂ ಹಾಜಿ ಬ್ರೈಟ್‍ರನ್ನು ಆರಿಸಲಾಯಿತು. 

ಸಂಘಟನಾ ಸಮಿತಿಯ ಅಧ್ಯಕ್ಷರಾಗಿ ಮುಹಮ್ಮದ್ ಕುಂಞಿ ಸಖಾಫಿ, ಕಾರ್ಯದರ್ಶಿ ಹಂಝ ಎರುಮಾಡ್, ಅಡ್ಮಿನ್ ವಿಭಾಗದ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಮುಸ್ಲಿಯಾರ್, ಕಾರ್ಯದರ್ಶಿ  ಮೊಹಮ್ಮದ್ ರಜಬ್ ಉಚ್ಚಿಲ, ಪ್ರಕಾಶನ ವಿಭಾಗದ ಅಧ್ಯಕ್ಷರಾಗಿ ಅಬ್ದುರ್ರಹೀಮ್ ಕೋಡಿ,  ಕಾರ್ಯದರ್ಶಿ ಅಕ್ರಮ್ ಬಿ.ಸಿ.ರೋಡ್, ಶಿಕ್ಷಣ ವಿಭಾಗದ ಅಧ್ಯಕ್ಷರಾಗಿ ಶಾಹುಲ್ ಹಮೀದ್ ಸಖಾಫಿ, ಕಾರ್ಯದರ್ಶಿ ಅಬೂಸ್ವಾಲಿಹ್ ಸಖಾಫಿ ಇನೋಳಿ, ಸಾಂತ್ವನ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ಲ ಹಾಜಿ ನಲ್ಕ, ಕಾರ್ಯದರ್ಶಿ  ಹಕೀಂ ತುರ್ಕಳಿಕೆ, ಇಹ್ಸಾನ್ ಅಧ್ಯಕ್ಷರಾಗಿ ಅಬ್ದುಲ್ ಖಾದರ್ ಸಅದಿ, ಕಾರ್ಯದರ್ಶಿ ಅಬ್ದುಲ್ ಅಝೀಝ್ ಅಹ್ಸನಿ ನೇಮಕಗೊಂಡರು. 

ವಿತ್ತೀಯ ನಿಯಂತ್ರಕ (ಆರ್ ಒ) ಅಬ್ದುಲ್ ಹಮೀದ್ ಸಅದಿಯ ಮುಂದಾಳುತ್ವದಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕರ್ನಾಟಕ ರಾಜ್ಯ ಎಸ್‍ವೈಎಸ್ ಪ್ರಧಾನ ಕಾರ್ಯದರ್ಶಿ ಹಫೀಳ್ ಸಅದಿ ಹಾಗೂ ಕೆಸಿಎಫ್ ಐಎನ್‍ಸಿ ಪ್ರಧಾನ ಕಾರ್ಯದರ್ಶಿ ಖಮರುದ್ದೀನ್ ಗೂಡಿನಬಳಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. 

ಸಮಿತಿಯ ವರದಿ ಹಾಗೂ ಲೆಕ್ಕ ಪತ್ರವನ್ನು ಮಂಡಿಸಿ ಸಭೆಯಲ್ಲಿ ಅಂಗೀಕರಿಸಲಾಯಿತು. 

ಅಧ್ಯಕ್ಷ ಭಾಷಣ ನಡೆಸಿದ ಅಬ್ದುಲ್ ಜಲೀಲ್ ನಿಝಾಮಿ ಯವರು ಹಾಲಿ ಸಮಿತಿಯು ನಡೆಸಿದ ಕಾರ್ಯ ವೈಖರಿಗಳನ್ನು ವಿಶೇಷವಾಗಿ ದುಬೈ ಮುನಿಸಿಪಾಲಿಟಿ ಆಯೋಜಿಸಿದ ಕ್ಲೀನ್ ಅಪ್ ದ ವರ್ಲ್ಡ್ 2020 ಯಲ್ಲಿ ಪಾಲ್ಗೊಳ್ಳುವಿಕೆ, ಕೋವಿಡ್ ಸಮಯದಲ್ಲಿ ದುಬೈ ಪೊಲೀಸ್ ನೊಂದಿಗೆ ಸ್ವಯಂ ಸೇವಕರಾಗಿ ಕಾರ್ಯನಿರ್ವಹಣೆ ಹಾಗೂ ಕೋವಿಡ್ ಸಂದರ್ಭದಲ್ಲಿ 1000ಕ್ಕೂ ಹೆಚ್ಚು ಅನಿವಾಸಿ ಕನ್ನಡಿಗರನ್ನು ಊರಿಗೆ ಕಳುಹಿಸಲು ಆಯೋಜಿಸಿದ ಏಳು ಚಾರ್ಟರ್ಡ್ ವಿಮಾನ ಹೀಗೆ ಕೆ ಸಿ ಎಫ್ ನಡೆಸಿದ ಹಲವು ಕಾರ್ಯಕ್ರಮಗಳನ್ನು ವಿವರವಾಗಿ ತಿಳಿಸಿದರು. 

ಸಾಂತ್ವನ ಸಮಿತಿಯ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಘವು ಕಳೆದ ಎರಡು ವರ್ಷಗಳಲ್ಲಿ ಕೋವಿಡ್ ಸಮಯದಲ್ಲಿ ನಡೆಸಿದ ಸಾಂತ್ವನ ಕೆಲಸಗಳನ್ನು ಪರಿಗಣಿಸಿ ಸನ್ನದ್ಧ ಸಂಘದ ನಾಯಕರಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. 

ಅನಿವಾಸಿ ಕನ್ನಡಿಗರ ಸಮಸ್ಯೆಗಳಿಗೆಸದಾ ಸ್ಪಂದಿಸುತ್ತಾ ಬಂದಿರುವ ಈ ಸಂಘಟನೆಯು ಶೈಕ್ಷಣಿಕ, ಮಾನವೀಯ ಸೇವೆ, ಆರೋಗ್ಯ ಯೋಜನೆಗಳು ಎಂಬಿತ್ಯಾದಿ ಹತ್ತು ಹಲವು ಸೇವೆಗಳ ಮೂಲಕ ಕನ್ನಡಿಗರ ಮನಗಳಲ್ಲಿ ಮನೆ ಮಾತಾಗಿದೆ. 2013ರಲ್ಲಿ ದುಬೈಯಲ್ಲಿ ಸ್ಥಾಪಿಸಲಾದ ಕೆಸಿಎಫ್ ಸಂಘಟನೆಯು ಯುಎಇ, ಸೌದಿ ಅರೇಬಿಯಾ, ಬಹರೈನ್, ಕುವೈತ್, ಒಮನ್, ಕತರ್, ಮಲೇಷ್ಯಾ, ಲಂಡನ್‍ ನಲ್ಲಿ ಕಾರ್ಯಾಚರಿಸುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X