Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ​ರಾಜ್ಯದಲ್ಲಿ ಶೇಂದಿ ಪುನಾರಂಭಿಸುವ ಬಗ್ಗೆ...

​ರಾಜ್ಯದಲ್ಲಿ ಶೇಂದಿ ಪುನಾರಂಭಿಸುವ ಬಗ್ಗೆ ಚರ್ಚೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ19 Jun 2022 6:59 PM IST
share
​ರಾಜ್ಯದಲ್ಲಿ ಶೇಂದಿ ಪುನಾರಂಭಿಸುವ ಬಗ್ಗೆ ಚರ್ಚೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ರಾಜ್ಯದಲ್ಲಿ ಶೇಂದಿ ಪುನಾರಂಭಿಸುವ ಅವಶ್ಯಕತೆ ಇದೆಯೇ ಮತ್ತು ಒಂದು ಕಾಲದಲ್ಲಿ ಇದ್ದ ಶೇಂದಿಗೆ ಈಗಲೂ ಅವಲಂಬನೆ ಯಾಗಿರಬೇಕೆ ಎಂಬ ಚರ್ಚೆಗಳು ನಡೆಯುತ್ತಿವೆ. ಅದರ ಬದಲು ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಬೇಕು ಎಂಬ ವಾದವೂ ಇದೆ. ಇಷ್ಟಾಗಿಯೂ ಶೇಂದಿ ಕುಲಕಸುಬು ಎಂಬ ವಾದವನ್ನು ಕೂಡ ಸರಕಾರ ಗಮನಿಸಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಶೇಂದಿ ಪುನಾರಂಭ ಮತ್ತು ನಾರಾಯಣಗುರು ನಿಗಮ ಸ್ಥಾಪನೆಯ ಬೇಡಿಕೆ ಮುಂದಿಟ್ಟು ಶ್ರೀ ಪ್ರಣವಾನಂದ ಸ್ವಾಮೀಜಿ ಗುಲ್ಬರ್ಗ ಭಾಗದಲ್ಲಿ ಅಮರಣಾಂತ ಉಪವಾಸ ಮಾಡುವ ಎಚ್ವರಿಕೆ ಹೇಳಿಕೆ ಬಗ್ಗೆ ಅವರು ಉಡುಪಿಯಲ್ಲಿಂದು ಪ್ರತಿಕ್ರಿಯಿಸಿದರು.

ಈಡಿಗ, ಬಿಲ್ಲವ, ನಾಮ್‌ದಾರಿ ಸಮಾಜಕ್ಕೆ ಸಂಬಂಧಿಸಿ ಶೇಂದಿ ಮರು ಆರಂಭಕ್ಕೆ ಸ್ವಾಮೀಜಿ ಆಗ್ರಹ ಮಾಡಿದ್ದಾರೆ. ಸ್ವಾಮೀಜಿಯ ಮನವಿ ನಮ್ಮ  ಹಾಗೂ ಸರಕಾರದ ಗಮನಕ್ಕೆ ಬಂದಿದೆ. 30 ವರ್ಷಗಳ ಹಿಂದೆ ವೀರೇಂದ್ರ ಪಾಟೀಲ್ ಸರಕಾರದಲ್ಲಿ ಆಡಳಿತದಲ್ಲಿ ಶೇಂದಿ ನಿಷೇಧ ಆಗಿತ್ತು. ಆದರೆ ಹೋರಾಟ ಮಾಡಿದ ಪರಿಣಾಮ ಉಡುಪಿ ಹಾಗೂ ದಕ್ಷಿಣ ಕನ್ನಡ ಭಾಗದಲ್ಲಿ ನಿಷೇಧ ಆಗಿರಲಿಲ್ಲ. ಈಗ ಉಳಿದ ಜಿಲ್ಲೆಯಲ್ಲೂ ಶೇಂದಿ ಪುನಾರಂಭಕ್ಕೆ ಸ್ವಾಮೀಜಿ ಮನವಿ ಮಾಡಿದ್ದಾರೆ ಎಂದರು.

ಶೇಂದಿ ಹೊರತು ಪಡಿಸಿ ನೀರಾ ಮಾರಾಟಕ್ಕೆ ಸರಕಾರವೇ ಅನುಮತಿ ನೀಡಿದೆ. ತೋಟಗಾರಿಕೆ ಇಲಾಖೆ ಮೂಲಕ ತೆಂಗಿನ ಮರದಿಂದ ತೆಗೆದ ನೀರಾ  ಮಾರಾಟಕ್ಕೆ ಮುಕ್ತ ಅವಕಾಶ ಇದೆ. ಜೊತೆಗೆ ನೀರಾವನ್ನು ಶೇಂದಿಯಾಗಿ ಮಾರ್ಪಡಿಸಿ ಮಾರಾಟ ಮಾಡುವ ಬಗ್ಗೆಯೂ ಚರ್ಚೆಯಲ್ಲಿದೆ ಎಂದು ಅವರು ಹೇಳಿದರು.

ನಾರಾಯಣಗುರು ನಿಗಮ ಸ್ಥಾಪಿಸುವ ಕುರಿತು ಮುಖ್ಯಮಂತ್ರಿಗಳು ಚರ್ಚೆ ಮಾಡುವ ಪ್ರಸ್ತಾಪ ಮಾಡಿದ್ದಾರೆ. ಬಹಳಷ್ಟು ನಿಗಮ ಮಂಡಳಿಯ ಕುರಿತು ಅವರು ಚರ್ಚೆ ಮಾಡಬೇಕೆಂದಿದ್ದಾರೆ. ಹಿಂದುಳಿದ ವರ್ಗಗಳಿಗೆ ಬಜೆಟ್‌ನಲ್ಲಿ ನೀಡಿದ 400 ಕೋಟಿ ಅನುದಾನ ಈಡಿಗ ಬಿಲ್ಲವ ಸಮುದಾಯದಕ್ಕೆ ಸಾಲದ ರೂಪದಲ್ಲಿ ನೀಡುವ ಪ್ರಸ್ತಾಪ ಇದೆ ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಈಡಿಗ, ಬಿಲ್ಲವ ಹಾಗೂ ಶೇಂದಿ ಮಾರಾಟ ಮಾಡುತ್ತಿದ್ದ ಸಮುದಾಯದ ಸ್ವಸಹಾಯ ಸಂಘಗಳಿಗೆ ಶೂನ್ಯ ಬಡ್ಡಿ ದರದ ರೂಪದಲ್ಲಿ ಸಾಲ ಪ್ರಸ್ತಾಪ ಇದೆ. ಹೀಗೆ ಹತ್ತಾರು ರೂಪದ ಯೋಜನೆ ಈಡಿಗ ಬಿಲ್ಲವ ಸಮುದಾಯಕ್ಕೆ ನಾರಾ ಯಣಗುರು ಹೆಸರಲ್ಲಿ ನೀಡುವ ಪರಂಪರೆ ಇದೆ. ಧರಣಿ, ಉಪವಾಸ ಸತ್ಯಾ ಗ್ರಹಕ್ಕೂ ಮೊದಲು ಭಿನ್ನವಾಗಿ ಆಲೋಚನೆ ಮಾಡಲು ಸರಕಾರಕ್ಕೆ ಅವಕಾಶ ಕೊಡಬೇಕು. ಶ್ರೀ ಪ್ರಣವಾನಂದ ಸ್ವಾಮೀಜಿ ಸೇರಿದಂತೆ ಅನೇಕ ಪ್ರಮುಖರನ್ನು ಮತ್ತು ಇಂಧನ ಸಚಿವ ಸುನಿಲ್ ಕುಮಾರ್ ಸಹಿತ ಮುಖ್ಯಮಂತ್ರಿ ಅವರನ್ನು ಭೇಟಿ ಬಳಿಕ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

‘ಡಿಕೆಶಿ ಪಠ್ಯ ಪುಸ್ತಕ ಹರಿದಿರುವುದು ಆತಂಕಕಾರಿ’

ಪಠ್ಯಪುಸ್ತಕ ಹರಿದ ಡಿಕೆ ಶಿವಕುಮಾರ್ ನಡೆಯನ್ನು ಖಂಡಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸರಕಾರ ಯೋಚನೆ ಮಾಡಿ ಪಠ್ಯ ಪುಸ್ತಕ ಪರಿಷ್ಕರಣೆ ಮಾಡಿದೆ. ಟೀಕೆ ಟಿಪ್ಪಣಿ ಎಲ್ಲದಕ್ಕೂ ಸರಕಾರ ಹಾಗೂ ನಾವೆಲ್ಲ ಉತ್ತರ ಕೊಡು ತ್ತಿದ್ದೇವೆ. ರಾಷ್ಟ್ರೀಯ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಡಿಕೆ ಶಿವಕುಮಾರ್ ಸಾರ್ವಜನಿಕವಾಗಿ ಪುಸ್ತಕ ಹರಿದಾಕುವ ಮಟ್ಟಕ್ಕೆ ಇಳಿದಿರುವುದು ಆತಂಕ ಉಂಟು ಮಾಡಿದೆ ಎಂದರು.

ಡಿಕೆ ಶಿವಕುಮಾರ್ ತಮ್ಮ ವರ್ತನೆ ಬಗ್ಗೆ ಪುನರಾಲೋಚನೆ ಮಾಡಬೇಕು. ಪುಸ್ತಕ ಹರಿದಾಕಿದ ವರ್ತನೆಗೆ ವಿಷಾದ ವ್ಯಕ್ತಪಡಿಸಬೇಕು. ಪ್ರತಿರೋಧಕ್ಕೆ ಸದನದ ಒಳಗೆ ಹಾಗೂ ಹೊರಗೆ ಅವಕಾಶ ಇದೆ. ಹೀಗೆ ಸಾರ್ವಜನಿಕವಾಗಿ ಪುಸ್ತಕ ಹರಿದಾಕಿರುವುದು ಖಂಡನೀಯ. ಡಿಕೆ ಶಿವಕುಮಾರ್ ಅವರ ಹುದ್ದೆಗೆ ಈ ವರ್ತನ ತಕ್ಕದಲ್ಲ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X