ಕಾರ್ಕಳದಲ್ಲಿ ಜೂ. 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ
ಉಡುಪಿ : ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆಯುಷ್ ಇಲಾಖೆ ಮತ್ತು ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಜೂ.೨೧ರ ಬೆಳಗ್ಗೆ ೬:೪೫ಕ್ಕೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯು ಕಾರ್ಕಳದ ದಾನಶಾಲೆಯ ಭಗವಾನ್ ಶ್ರೀಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಲಿದೆ.
ರಾಜ್ಯ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಕಳದ ಜನಪ್ರತಿನಿಧಿಗಳು, ಗಣ್ಯರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story