ಸಾಲ ಸೌಲಭ್ಯ: ಅರ್ಜಿ ಆಹ್ವಾನ
ಉಡುಪಿ : ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ ಹಾಗೂ ಅರಿವು ಶೈಕ್ಷಣಿಕ ಸಾಲ ಯೋಜನೆ ಸೌಲಭ್ಯಕ್ಕೆ ಮೊಗವೀರ, ಬೆಸ್ತ, ಕೋಳಿ, ಕಬ್ಬಲಿಗ ಇತ್ಯಾದಿ ಜಾತಿ ಅಥವಾ ಉಪಜಾತಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ -suvidha.karnataka.gov.in- ಸುವಿಧಾ ತಂತ್ರಾಂಶದಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜು.೧೪ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‌ಸೈಟ್ -https://ambigaradevelopment.karnataka.gov.in- ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಥವಾ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ರಜತಾದ್ರಿ, ಮಣಿಪಾಲ, ಸಹಾಯವಾಣಿ ಸಂಖ್ಯೆ:೦೮೦-೨೨೮೬೪೦೯೯ ಅನ್ನು ಸಂಪರ್ಕಿಸ ಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story