Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಗ್ನಿಪಥ್ ಯೋಜನೆ; ಕಾಂಗ್ರೆಸ್ ಬೆಂಕಿಗೆ...

ಅಗ್ನಿಪಥ್ ಯೋಜನೆ; ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸ ಮಾಡುತ್ತಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ19 Jun 2022 11:31 PM IST
share
ಅಗ್ನಿಪಥ್ ಯೋಜನೆ; ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸ ಮಾಡುತ್ತಿದೆ ಎಂದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಜೂ. 19: ‘ರಕ್ಷಣಾ ಇಲಾಖೆಯ ಅಗ್ನಿಪಥ್ ಯೋಜನೆ ವಿರುದ್ಧ ಕಾಂಗ್ರೆಸ್ ಬೆಂಕಿಗೆ ತುಪ್ಪ ಹಾಕುವ ಕೆಲಸವನ್ನು ಇಡೀ ದೇಶದಲ್ಲಿ ಮಾಡುತ್ತಿದೆ. ಇದಕ್ಕೆ ಬೆಳಗಾವಿ ಜಿಲ್ಲೆಯ ಖಾನಾಪುರ ಕ್ಷೇತ್ರದ ಶಾಸಕಿ ಅಂಜಲಿ ನಿಂಬಾಳ್ಕರ್ ಧರಣಿ ಮಾಡುತ್ತಿರುವುದು ಸಾಕ್ಷಿ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದಿಲ್ಲಿ ತಿರುಗೇಟು ನೀಡಿದ್ದಾರೆ.

ರವಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಅಗ್ನಿಪಥ್' ಯೋಜನೆ ಒಂದು ವಿನೂತನ ಕಾರ್ಯಕ್ರಮ. ಇಡೀ ಜಗತ್ತಿನಲ್ಲಿ ಯುವಕರಿಗೆ ಮಿಲಿಟರಿ ತರಬೇತಿ ನೀಡುವ ವ್ಯವಸ್ಥೆ. 17ರಿಂದ 21 ವರ್ಷ ಉತ್ತಮ ತರಬೇತಿ ಪಡೆದರೆ, ಬೇರೆ ಅವಕಾಶಗಳು ಸಿಗುತ್ತವೆ. ಮಿಲಿಟರಿ ಹಾಗೂ ಅರೆಮಿಲಿಟರಿ ಪಡೆಗಳಲ್ಲಿ ಅವಕಾಶ ಸಿಗಲಿದೆ' ಎಂದು ನುಡಿದರು.

‘ಸಶಕ್ತ ಯುವಕರ ಜನಸಂಖ್ಯೆಯನ್ನು ಸಿದ್ದ ಮಾಡುವ ದೃಷ್ಟಿಯಿಂದ ಹಾಗೂ ಸಶಸ್ತ್ರ ಪಡೆಗಳಲ್ಲಿ ಯುವಶಕ್ತಿ ಯನ್ನು ತುಂಬುವ ಮಹತ್ವಾಕಾಂಕ್ಷೆ ಇದೆ. ಪರೀಕ್ಷೆ ಬರೆದವರಿಗೆ ಆತಂಕ ಇದೆ. ಅದನ್ನು ಕೇಂದ್ರ ಸರಕಾರ ಗಮನಿಸಿ ಪರಿಹಾರ ನೀಡುವ ವಿಶ್ವಾಸವಿದೆ. ಆದರೆ, ಈ ನೆಪದಲ್ಲಿ ರೈಲುಗಳಿಗೆ ಬೆಂಕಿ ಹಚ್ಚುವುದು, ಖಂಡಿತವಾಗಿಯೂ ಕ್ಷಮಿಸಲಾಗದ ಅಪರಾಧ. ಪ್ರಯಾಣಿಕರಿಗೆ ತೊಂದರೆ, ಆಸ್ತಿಪಾಸ್ತಿ ನಷ್ಟವಾಗಿದೆ. ಜವಾಬ್ದಾರಿ ಇರುವವರು ಯಾರೂ ಈ ರೀತಿ ಮಾಡುವುದಿಲ್ಲ. ಇದೊಂದು ರಾಜಕೀಯ ಪ್ರೇರಿತ ಕೃತ್ಯ. ಜನ ಸ್ವಲ್ಪ ದಿನಗಳಲ್ಲಿಯೇ ಅರ್ಥ ಮಾಡಿಕೊಳ್ಳುತ್ತಾರೆ' ಎಂದು ಅವರು ತಿಳಿಸಿದರು. 

ದೇಶ-ನಾಡು ಕಟ್ಟಿದವರ ಗೌರವ ಕಾಪಾಡಲು ಸಿದ್ದ: ‘ಪಠ್ಯ ಪುಸ್ತಕ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಸ್ವಾಮೀಜಿಗಳು ನೀಡಿರುವ ಮನವಿಯನ್ನು ತರಿಸಿಕೊಂಡು ಏನೆಲ್ಲಾ ಬದಲಾವಣೆ ಮಾಡಬೇಕೋ ಅದನ್ನು ಮುಕ್ತ ಮನಸ್ಸಿನಿಂದ ಕೈಗೊಳ್ಳಲಾಗುವುದು. ಇದನ್ನು ಪ್ರತಿಷ್ಟೆ ಎಂದು ಪರಿಗಣಿಸಿಲ್ಲ' ಎಂದು ಅವರು ಸ್ಪಷ್ಟಪಡಿಸಿದರು.

‘ಪಠ್ಯ ಪುಸ್ತಕಗಳ ಕುರಿತು ಆಕ್ಷೇಪವಿದ್ದರೆ, ಅದನ್ನು ನಿವಾರಿಸಲು ಸಿದ್ಧರಿದ್ದೇವೆ. ಭಾರತ ಹಾಗೂ ಕರ್ನಾಟಕ ಕಟ್ಟಲು ಶ್ರಮಿಸಿರುವ ಹಿರಿಯರು, ರಾಜಮಹಾರಾಜರು, ಸಾಹಿತಿಗಳು, ಕಲಾಕಾರರು, ಜ್ಞಾನಪೀಠ ಪ್ರಶಸ್ತಿ ಪುರಸ್ಕøತರ ಬಗ್ಗೆ ಅಪಾರ ಗೌರವವಿದೆ. ಯಾವುದೇ ಕಾರಣಕ್ಕಾಗಿ ಅವರಿಗೆ ನೀಡುವ ಗೌರವದಲ್ಲಿ ರಾಜಿ ಮಾಡಿಕೊಳ್ಳಲು ಸರಕಾರ ಸಿದ್ದವಿಲ್ಲ. ಅವರ ಗೌರವ ಉಳಿಸಲು ಹಾಗೂ ಮುಂದಿನ ಜನಾಂಗಕ್ಕೆ ಅವರ ಬಗ್ಗೆ ತಿಳಿಸಲು ಯಾವುದೇ ಮಟ್ಟಕ್ಕೊ ಹೋಗಲು ತಯಾರು' ಎಂದು ಬೊಮ್ಮಾಯಿ ನುಡಿದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X