ಜಮೀನ್ದಾರಾಗಿದ್ದ ಕೊಡ್ಗಿ ಬಡವರ, ಕಾರ್ಮಿಕರ ಧ್ವನಿಯಾಗಿದ್ದರು: ಶೋಭಾ ಕರಂದ್ಲಾಜೆ
ಉಡುಪಿ : ಬಿಜೆಪಿ ಉಡುಪಿ ಜಿಲ್ಲೆಯ ಪ್ರಥಮ ಜಿಲ್ಲಾಧ್ಯಕ್ಷರಾಗಿ ಪಕ್ಷವನ್ನು ಸಂಘಟಿಸಿದ್ದ ಅಪ್ರತಿಮ ಸಂಘಟಕ ಎ.ಜಿ. ಕೊಡ್ಗಿ, ಜಮೀನ್ದಾರರಾಗಿ ದ್ದರೂ ಬಡವರ, ಕಾರ್ಮಿಕರ ಪರ ಧ್ವನಿ ಎತ್ತುತ್ತಿದ್ದರು. ಬ್ರಾಹ್ಮಣ್ಯರಾದರೂ ಜಾತಿಯತೆ ಎಂಬುದು ಅವರಲ್ಲಿ ಇರಲಿಲ್ಲ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಆಯೋಜಿಸಲಾದ ದಿವಂಗತ ಎ.ಜಿ.ಕೋಡ್ಗಿ ಶ್ರದ್ಧಾಂಜಲಿ ಸಭೆಯಲ್ಲಿ ಅವರು ನುಡಿ ನಮನ ಸಲ್ಲಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ನಾಯಕ್ ಕುಯಿಲಾಡಿ ಅಧ್ಯಕ್ಷತೆ ವಹಿಸಿದ್ದರು. ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ, ಕಾಪು ಶಾಸಕ ಲಾಲಾಜಿ ಮೆಂಡನ್, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಕಿದಿ ಯೂರು, ಶಿವಮೊಗ್ಗ ವಿಭಾಗ ಸಂಘಟನಾ ಕಾರ್ಯದರ್ಶಿ ಗಣೇಶ್ ರಾವ್ ಉಪಸ್ಥಿತರಿದ್ದರು.