ಮಂಗಳೂರು: ದ.ಕ.ಜಿಲ್ಲಾ ಎಸ್‌ಡಿಪಿಐಯಿಂದ ಸಂಸ್ಥಾಪನಾ ದಿನಾಚರಣೆ
ಮಂಗಳೂರು: ಎಸ್‌ಡಿಪಿಐ ಪಕ್ಷದ ೧೩ನೇ ವರ್ಷದ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಮಂಗಳವಾರ ನಗರದ ಸ್ಟೇಟ್‌ಬ್ಯಾಂಕ್ ನೆಲ್ಲಿಕಾಯಿ ರಸ್ತೆಯ ಪಕ್ಷದ ಜಿಲ್ಲಾ ಕಛೇರಿ ಮುಂಭಾಗ ಪಕ್ಷದ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಧ್ವಜಾರೋಹಣಗೈದು ಸಂದೇಶ ನೀಡಿದರು.
ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಜಲೀಲ್ ಕೃಷ್ಣಾಪುರ ಹಾಗೂ ಅಕ್ಬರ್ ಪೊನ್ನೋಡಿ ಪಕ್ಷವು ನಡೆದ ಬಂದ ಹಾದಿ ಹಾಗೂ ಪಕ್ಷದ ಪ್ರಾಮುಖ್ಯತೆ ಬಗ್ಗೆ ವಿವರಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಪಾಧ್ಯಕ್ಷೆ ಮಿಸ್ರಿಯಾ ಕಣ್ಣೂರು, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್, ಜಿಲ್ಲಾ ಕೋಶಾಧಿಕಾರಿ ಇಕ್ಬಾಲ್ ಐ.ಎಂ.ಆರ್ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.
ಎಸ್‌ಡಿಪಿಐ ದ.ಕ. ಜಿಲ್ಲಾ ಕಾರ್ಯದರ್ಶಿ ಶಾಕಿರ್ ಅಳಕೆಮಜಲು ಸ್ವಾಗತಿಸಿದರು. ಜಿಲ್ಲಾ ಸಮಿತಿ ಸದಸ್ಯ ಖಾದರ್ ಅಮ್ಮೆಮ್ಮಾರ್ ಕಾರ್ಯಕ್ರಮ ನಿರೂಪಿಸಿದರು.
Next Story