Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: 91ನೇ ದಿನಕ್ಕೆ ಕಾಲಿಟ್ಟ ಮೊಗೇರ್...

ಭಟ್ಕಳ: 91ನೇ ದಿನಕ್ಕೆ ಕಾಲಿಟ್ಟ ಮೊಗೇರ್ ಸಮುದಾಯದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ21 Jun 2022 10:47 PM IST
share
ಭಟ್ಕಳ: 91ನೇ ದಿನಕ್ಕೆ ಕಾಲಿಟ್ಟ ಮೊಗೇರ್ ಸಮುದಾಯದ ಪ್ರತಿಭಟನೆ

ಭಟ್ಕಳ: ಜಿಲ್ಲಾಡಳಿತ ತಮಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ತರಗತಿಗಳನ್ನು ಬಹಿಷ್ಕರಿಸಿ ಬೀದಿಗಿಳಿದ ಮೊಗೇರ್ ಸಮುದಾಯದ ವಿದ್ಯಾರ್ಥಿಗಳು ಮೂರು ದಿನದೊಳಗೆ ತಮಗೆ ಪ.ಜಾ ಪ್ರಮಾಣಪತ್ರ ನೀಡುವಂತೆ ಪಟ್ಟು ಹಿಡಿದು ಇಲ್ಲಿನ ಸಹಾಯಕ ಆಯುಕ್ತರ ಕಚೇರಿಗೆ ಮುತ್ತಿಗೆ ಪ್ರತಿಭಟಿಸಿದ ಘಟನೆ ಮಂಗಳವಾರ ಜರಗಿದೆ.

ತಮಗೆ ಸಿಗುತ್ತಿರುವ ಪ.ಜಾ.ಪ್ರಮಾಣಪತ್ರವನ್ನು ಸರ್ಕಾರ ಏಕಾಎಕಿ ನಿಲ್ಲಿಸಿದ್ದು ಅದನ್ನು ಮರುಸ್ಥಾಪಿಸುವಂತೆ ಶಾಂತಿಯುತವಾಗಿ ನಡೆಯುತ್ತಿರುವ ಮೊಗೇರ್ ಸಮುದಾಯದ ಪ್ರತಿಭಟನೆ 91ನೆ ದಿನಕ್ಕೆ ಕಾಲಿಟ್ಟಿದೆ.

ಮಂಗಳವಾರ ಬೃಹತ್ ಪ್ರತಿಭಟನೆ ನಡೆಸಿದ ಮೊಗೇರ್ ಸಮುದಾಯದ ವಿದ್ಯಾರ್ಥಿಗಳು ಮಳೆಯನ್ನೂ ಲೆಕ್ಕಿಸದೆ ಬೀದಿಗಿಳಿದು ಜಿಲ್ಲಾಡಡಳಿತ ಮತ್ತು ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು. 

ಶಮ್ಸುದ್ದೀನ್ ವೃತ್ತದ ಮೂಲಕ ಮೆರವಣೆಗೆ ನಡೆಸಿ ಮೊದಲಿಗೆ ಶಿಕ್ಷಣಾದಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ್ದು ನಂತರ ಅಲ್ಲಿಂದ ಸಹಾಯಕ ಅಯುಕ್ತರ ಕಚೇರಿ ಎದರು ಸರ್ಕಾರದ ವಿರುದ್ಧ ಘೋಷಣೆ ಕೋಗಿ ತಮ್ಮ ಅಸಹನೆಯನ್ನು ವ್ಯಕ್ತಪಡಿಸಿ, ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಹಾಯಕ ಆಯುಕ್ತರ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. 

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾರ್ಥಿ ಮುಖಂಡ ತಿಲಕ್ ಮೊಗೇರ್, ಹಲವಾರು ವರ್ಷಗಳಿಂದ ಮೊಗೇರ್ ಶಿಕ್ಷಣ ಇಲಾಖೆ ಸಮುದಾಯದ ವಿದ್ಯಾರ್ಥಿಗಳನ್ನು ವಂಚಿಸುತ್ತ ಬಂದಿದ್ದು ಪ್ರಮಾಣಿಕ ಸಿಗಬೇಕಾದ ಪ.ಜಾ. ಪ್ರಮಾಣಪತ್ರ ನೀಡದೆ ಸರ್ಕಾರಿ ಸೌಲಭ್ಯಗಳಿಂದ ನಮ್ಮನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು. ೧೯೭೬ ರಿಂದ ಕೇಂದ್ರ ಸರಕಾರದ ಅಧಿಕೃತ ಆದೇಶದಂತೆ ನಾವು ಪ.ಜಾ. ಪ್ರಮಾಣಪತ್ರ ಪಡೆಯುತ್ತಿದ್ದೇವೆ. ನಮ್ಮ ಅಜ್ಜ-ಅಜ್ಜಿ, ಅಪ್ಪ-ಅಮ್ಮ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ಪಡೆದು ಸರಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಪಡೆದುಕೊಂಡು ಬಂದಿರುತ್ತಾರೆ. ಆದರೆ ೧೪ ವರ್ಷಗಳಿಂದ ನಮಗೆ ಸಿಗಬೇಕಾದ ಪರಿಶಿಷ್ಟ ಜಾತಿ ಸೌಲಭ್ಯಗಳನ್ನು ಜಿಲ್ಲಾಡಳಿತ ತಡೆಹಿಡಿದಿರುತ್ತದೆ. ಇದರಿಂದ ನಮ್ಮ ವಿದ್ಯಾಭ್ಯಾಸಕ್ಕೆ ಪೂರಕವಾದ ಶಿಷ್ಯವೇತನ, ಸರಕಾರ ವಸತಿ ಸೌಲಭ್ಯ, ಉನ್ನತ ವ್ಯಾಸಂಗಕ್ಕೆ ಶಾಲಾ ಕಾಲೇಜುಗಳ ಆಯ್ಕೆ ಮುಂತಾದವುಗಳಿಗೆ ತೊಡಕಾಗಿದ್ದು, ಜಿಲ್ಲಾಡಳಿತದಿಂದ ನಮಗೆ ಅನ್ಯಾಯವಾಗಿದೆ ಎಂದು ಅವರು ಆರೋಪಿಸಿದರು. 

ನಮ್ಮ ಹಿರಿಯರು ಪರಿಶಿಷ್ಟ ಜಾತಿ ಪ್ರಮಾಣಪತ್ರವನ್ನು ಪಡೆದಿದ್ದು, ನಮಗೆ ಯಾವುದೇ ಕಾರಣ ನೀಡದೆ ನ್ಯಾಯಾಲಯ ಮತ್ತು ಸರ್ಕಾರಿ ಆದೇಶ ಇದ್ದರೂ ಸಹ ಪ್ರಮಾಣ ಪತ್ರ ನೀಡುವುದನ್ನು ತಡೆಹಿಡಿದಿರುವುದು ನಮಗೆ ಮಾಡಿದ ಘೋರ ಅನ್ಯಾಯವಾಗಿದೆ. ಈಗಾಗಲೇ ನಾವು ಶಾಲಾ ಕಾಲೇಜುಗಳಿಗೆ ಪ್ರವೇಶವನ್ನು ಪಡೆದಿರುತ್ತೇವೆ. ಸದರಿ ನಮ್ಮ ವರ್ಗಾವಣೆ ಪ್ರಮಾಣ ಪತ್ರದಲ್ಲಿ ಖಾಲಂ ನಂ. ೧೫ ರಲ್ಲಿರುವ ಪ.ಜಾತಿ/ಪ.ಪಂಗಡದ ಖಾಲಂನ್ನು ಖಾಲಿ ಬಿಟ್ಟಿದ್ದು/ಪ್ರಮಾಣ ಪತ್ರ ಲಭ್ಯವಿಲ್ಲವೆಂದು ನಮೂದಿಸಿದ್ದು ಇರುತ್ತದೆ. ಈ ಕಾರಣದಿಂದ ನಮ್ಮ ಎಲ್ಲಾ ದಾಖಲಾತಿಗಳು ಇದೇ ರೀತಿ ಹಲವು ವರ್ಷಗಳಿಂದ ಶಿಕ್ಷಣ ಇಲಾಖೆಯು ಮುಂದುವರಿಸಿಕೊAಡು ಬಂದಿದ್ದು ಇರುತ್ತದೆ. ಇದನ್ನು ನಾವು ಶಾಲಾ/ ಕಾಲೇಜುಗಳಲ್ಲಿ ಸಂಬಂಧಪಟ್ಟ ಶಿಕ್ಷಕರಲ್ಲಿ ಪ್ರಶ್ನಿಸಿದರೆ ಯಾವುದೇ ಕಾರಣ ನೀಡದೇ ನಮ್ಮನ್ನು ಇಲಾಖಾ ವರ್ಗವು ವಂಚಿಸುತ್ತಾ ಬಂದಿರುತ್ತದೆ. ಈ ರೀತಿ ಸುಳ್ಳು ಹೇಳುತ್ತಾ ನಮಗೆ ಸುಳ್ಳಿನ ಶಿಕ್ಷಣವನ್ನು ನೀಡುವ ಶಿಕ್ಷಣ ಇಲಾಖೆಯನ್ನು ನಂಬಲು ಸಾಧ್ಯವೇ? ಈ ಇಲಾಖೆಯಲ್ಲಿ ಈ ರೀತಿಯಾದ ಶಿಕ್ಷಣವನ್ನು ಪಡೆದುಕೊಂಡು ನಾವು ಈ ಸಮಾಜದಲ್ಲಿ ಬದುಕಲು ಸಾಧ್ಯವೇ? ಈ ಪ್ರಶ್ನೆ ನಮ್ಮ ವಿದ್ಯಾರ್ಥಿಗಳಲ್ಲಿ ಪ್ರತಿ ದಿನ ಕಾಡುತ್ತಿದೆ. ನಮಗೆ ಉತ್ತಮ, ಮೌಲ್ಯಯುತ ಶಿಕ್ಷಣ ನೀಡಬಯಸುತ್ತೀರೋ? ಅಥವಾ ಇಂತಹ ಸುಳ್ಳಿನ ಶಿಕ್ಷಣವನ್ನು ನೀಡಬಯಸುತ್ತೀರೋ? ಎಂದು ಮನವಿ ಪತ್ರದಲ್ಲಿ ಪ್ರಶ್ನಿಸಲಾಗಿದ್ದು, ಸ್ವಯಂ ಪ್ರೇರಿತವಾಗಿ ನಾವು ತರಗತಿಯನ್ನು ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇವೆ. ಒಂದು ವೇಳೆ ನಮಗೆ ಶೀಘ್ರವಾಗಿ ನ್ಯಾಯ ಒದಗಿಸಿಕೊಡದೇ ಹೋದಲ್ಲಿ ಮುಂದಿನ ದಿನಗಳಲ್ಲಿ ಸಂಪೂರ್ಣ ತರಗತಿ ಬಹಿಷ್ಕರಿಸಿ ನಾವೆಲ್ಲರೂ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸುತ್ತೇವೆಂದು ಎಂದು ಮನವಿ ಪತ್ರದಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X