ನಾನು ಮನಸ್ಸು ಮಾಡಿದರೆ ಯಾವಾಗ ಬೇಕಾದರೂ ಸಿಎಂ ಆಗಬಹುದು: ಗಾಲಿ ಜನಾರ್ದನ ರೆಡ್ಡಿ

ಗಾಲಿ ಜನಾರ್ದನ ರೆಡ್ಡಿ
ಬಳ್ಳಾರಿ, ಜೂ. 22: ‘ನಾನು ಮನಸ್ಸು ಮಾಡಿದರೆ ಮುಂದೊಂದು ದಿನ ಮುಖ್ಯಮಂತ್ರಿ ಆಗುತ್ತೇನೆ' ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಬುಧವಾರ ನಗರದಲ್ಲಿ ಆಯೋಜಿಸಿದ್ದ ಶಾಸಕ ಹಾಗೂ ಸಹೋದರ ಸೋಮಶೇಖರ ರೆಡ್ಡಿ ಅವರ ಹುಟ್ಟುಹಬ್ಬದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ನಾನು ಮನಸ್ಸು ಮಾಡಿದರೆ ಯಾವಾಗ ಬೇಕಾದರೂ ಮುಖ್ಯಮಂತ್ರಿಯಾಗಬಹುದು. ಆದರೆ, ನನಗೆ ಶಾಸಕ ಆಗಬೇಕು, ಮಂತ್ರಿ ಆಗಬೇಕೆಂಬ ಆಸೆಯಿಲ್ಲ. ರೆಡ್ಡಿ ಸಹೋದರರು ಹಾಗೂ ಸಚಿವ ಬಿ.ರಾಮುಲು ಅವರಿಗೆ ಯಾವುದೇ ರೀತಿಯ ಹಣದ ಅವಶ್ಯಕತೆ ಇಲ್ಲ' ಎಂದು ಹೇಳಿದರು.
‘ನನಗಂತೂ ಯಾರಿಗೂ ಕೊಡಲಾರದಷ್ಟು ಕಷ್ಟ ಕೊಟ್ಟರು. ಆದರೂ, ನಾನು ಇಂದು ನಿಮ್ಮ ಮುಂದೆ ಬಂದು ನಿಂತಿದ್ದೇನೆ. ಅಂತಹ ವಿಶೇಷ ಆಶೀರ್ವಾದವನ್ನು ಬಳ್ಳಾರಿಯ ಕನಕ ದುರ್ಗಮ್ಮ ನನಗೆ ನೀಡಿದ್ದಾಳೆ. ನನ್ನ ಜಾಗದಲ್ಲಿ ಬೇರೆಯವರು ಇದ್ದಿದ್ದರೆ ಇಂತಹ ಪರಿಸ್ಥಿತಿ ಎದುರಿಸುತ್ತಿರಲಿಲ್ಲ. ಅಷ್ಟು ತೊಂದರೆಯನ್ನು ನನಗೆ ನೀಡಿದರು' ಎಂದು ಜನಾರ್ದನ ರೆಡ್ಡಿ ಬೇಸರ ವ್ಯಕ್ತಪಡಿಸಿದರು.
Next Story





