ಕೂಳೂರು ನದಿ ತೀರದಲ್ಲಿ ಬಿದಿರು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ
ಮಂಗಳೂರು, ಜೂ.೨೨: ಪರಿಸರ ಮಾಲಿನ್ಯ, ನದಿ, ಸಮುದ್ರ ದಂಡಗಳ ಅತಿಕ್ರಮಣದ ವಿರುದ್ಧ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಬಂಗ್ರ ಕೂಳೂರಿನಲ್ಲಿ ನದಿ ದಂಡೆಯ ಅತಿಕ್ರಮಣವನ್ನು ತಡೆಯುವ ಸಲುವಾಗಿ ಅರಣ್ಯ ಇಲಾಖೆಯ ವತಿಯಿಂದ ಬುಧವಾರ ಆಯೋಜಿಸಲಾದ ಬಿದಿರು ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕಾರ್ಪೊರೇಟರ್ ಕಿರಣ್ ಕುಮಾರ್ ಕೋಡಿಕಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ದಿನೇಶ್ ಕುಮಾರ್ ವೈ, ವಲಯ ಅರಣ್ಯಾಧಿಕಾರಿ ಪ್ರಶಾಂತ ಪೈ, ಸಹಾಯ ಅರಣ್ಯ ಸಂರಕ್ಷಣಾ ಅಧಿಕಾರಿ ಸುಬ್ರಹ್ಮಣ್ಯ ರಾವ್, ಟೆಕ್ನೋ ಚೈತನ್ಯ ಶಾಲೆಯ ವೆಂಕಟೇಶ್ ವರ್ಲು, ರೂಪಾ ಶೆಣೈ, ದ.ಕ.ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಚೈತನ್ಯ ಟೆಕ್ನೋ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Next Story





