Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಅಖಿಲ ಭಾರತ ಬ್ಯಾರಿ...

ಮಂಗಳೂರು: ಅಖಿಲ ಭಾರತ ಬ್ಯಾರಿ ಪರಿಷತ್‌ನಿಂದ ಸಾಧಕರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ22 Jun 2022 8:21 PM IST
share
ಮಂಗಳೂರು: ಅಖಿಲ ಭಾರತ ಬ್ಯಾರಿ ಪರಿಷತ್‌ನಿಂದ ಸಾಧಕರಿಗೆ ಸನ್ಮಾನ

ಮಂಗಳೂರು : ಡಾಕ್ಟರೇಟ್ ಪದವಿ, ಚಿನ್ನದ ಪದಕ ಪಡೆಯುವುದು ಅಷ್ಟೊಂದು ಸುಲಭವಲ್ಲ. ಮಾಹಿತಿ ತಂತ್ರಜ್ಞಾನ ಯುಗ ಸಾಕಷ್ಟು ಮುಂದುವರಿದಿರುವ ಈ ಕಾಲದಲ್ಲಿ ವಿದ್ಯಾರ್ಥಿಗಳು ಇಂತಹ ಶೈಕ್ಷಣಿಕ ಸಾಧನೆ ಮಾಡುವುದು ಹೆಮ್ಮೆಯ ವಿಚಾರವಾಗಿದೆ. ಸತತ ಕಠಿಣ ಪರಿಶ್ರಮದಿಂದ ಇಂತಹ ಸಾಧನೆಗೈದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುವ ಮೂಲಕ ಪ್ರೋತ್ಸಾಹ ನೀಡುವುದು  ಸಂಘ ಸಂಸ್ಥೆಗಳ ಕರ್ತವ್ಯವಾಗಿದೆ ಎಂದು ಯೆನೆಪೊಯ ವಿವಿಯ ಇಸ್ಲಾಮಿಕ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಮುಖ್ಯಸ್ಥ  ಡಾ.ಜಾವೆದ್ ಜಮೀಲ್ ಹೇಳಿದರು.

ಅಖಿಲ ಭಾರತ ಬ್ಯಾರಿ ಪರಿಷತ್ (ರಿ) ಇದರ ವತಿಯಿಂದ ನಗರದ ಶ್ರೀನಿವಾಸ ಹೊಟೇಲಿನ ಸಭಾಂಗಣದಲ್ಲಿ ಬುಧವಾರ ನಡೆದ ಸಾಧಕರಿಗೆ ಗೌರವಾರ್ಪಣೆ ಕಾರ್ಯಕ್ರಮದಲ್ಲಿ ಅವರು  ಸಾಧಕರನ್ನು ಗೌರವಿಸಿದ ಬಳಿಕ ಮಾತನಾಡಿದರು.

ಅಹಿಂದ ದ.ಕ. ಜಿಲ್ಲಾಧ್ಯಕ್ಷ ವಾಸುದೇವ ಬೋಳೂರು ಮಾತನಾಡಿ ಸಿದ್ದರಾಮಯ್ಯ ಅವರ ಅಹಿಂದ ಕ್ಕಿಂತ ಐದು ವರ್ಷ ಮೊದಲೇ ನಾವು ಈ ಸಂಘಟನೆಯನ್ನು ಸ್ಥಾಪನೆ ಮಾಡಿದ್ದೆವು. ದೇಶದಲ್ಲಿ ಈ ಮೂರು ವರ್ಗದವರಲ್ಲಿ ಕೇವಲ ಶೇ 3ರಷ್ಟು ಮಾತ್ರ ಅಧಿಕಾರವಿದೆ. ಹಾಗಾಗಿ ಅಹಿಂದ ವರ್ಗದ ಅಭಿವೃದ್ಧಿಗಾಗಿ ಎಲ್ಲರೂ ಜೊತೆಯಾಗಿ ಹೋರಾಟ ಮಾಡಬೇಕಾಗಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಶಾಹುಲ್ ಹಮೀದ್ ಮೆಟ್ರೋ ಕಿರಾಅತ್ ಪಠಿಸಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಬ್ಯಾರಿ ಪರಿಷತ್‌ನ ಮಾಜಿ ಅಧ್ಯಕ್ಷ ಬಿ.ಎ.ಮುಹಮ್ಮದ್ ಹನೀಫ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭ ಮಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪಡೆದ ಡಾ.ಧರ್ಮದರ್ಶಿ ಹರಿಕೃಷ್ಣ ಪುನರೂರು, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯಿಂದ ಚಿನ್ನದ ಪದಕ ಪಡೆದ ಡಾ.ಲಿಫಾಮ್ ರೋಶನಾರ, ದ.ಕ.ಜಿಲ್ಲಾ ಲಯನ್ಸ್ ಡಿಸಿ ಡಾ.ಸುಮತಿ ಹೆಗ್ಡೆ ಅವರನ್ನು ಗೌರವಿಸಲಾಯಿತು.

ಅಖಿಲ ಭಾರತ ಬ್ಯಾರಿ ಪರಿಷತ್ ಗೌರವ ಅಧ್ಯಕ್ಷ ಯೂಸುಫ್ ವಕ್ತಾರ್, ಕಾರ್ಯದರ್ಶಿ ಹನೀಫ್ ಬಜಾಲ್ ಸನ್ಮಾನ ಪತ್ರ ಸಮರ್ಪಿಸಿದರು. ಬ್ಯಾರಿ ಪರಿಷತ್ ಉಪಾಧ್ಯಕ್ಷ ಇಬ್ರಾಹಿಂ ನಡುಪದವು, ಕಾರ್ಪೊರೇಟರ್ ಅಬ್ದುಲ್ ಲತೀಫ್ ಕಂದಕ್ ಮತ್ತಿತರರು ಉಪಸ್ಥಿತರಿದ್ದರು.

ಬ್ಯಾರಿ ಪರಿಷತ್ ಕೋಶಾಧಿಕಾರಿ ನಿಸಾರ್ ಫಕೀರ್ ಮುಹಮ್ಮದ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಹಕ್ ಕಾರ್ಯಕ್ರಮ ನಿರೂಪಿಸಿದರು. ಮಾಜಿ ಉಪಮೇಯರ್ ಮುಹಮ್ಮದ್ ಕುಂಜತ್ತಬೈಲ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X