ಮಂಗಳೂರು: ಚಿನ್ನ ಅಕ್ರಮ ಸಾಗಾಟ ಪತ್ತೆ

ಮಂಗಳೂರು: ದುಬೈಯಿಂದ ಮಂಗಳೂರಿಗೆ ಬಂದ ಭಟ್ಕಳ ಮೂಲದ ಪ್ರಯಾಣಿಕನಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಿ ಆರೋಪಿಯ ವಿರುದ್ಧ ಕ್ರಮ ಜರಗಿಸಿದ್ದಾರೆ.
೨೪ ಕ್ಯಾರೆಟ್‌ನ ೩೬೪.೫೦೦ ಗ್ರಾಂ ತೂಕದ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಮಹಿಳೆಯರು ಬಳಸುವ ಒಳ ಉಡುಪಿನೊಳಗೆ ಇರಿಸಿಕೊಂಡು ಈ ಪ್ರಯಾಣಿಕ ತಂದಿದ್ದ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬುಧವಾರ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನನ್ನು ತಪಾಸಣೆ ನಡೆಸಿದಾಗ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದುದು ಪತ್ತೆಯಾಗಿದೆ. ಇದರ ಮೌಲ್ಯ 18,95,400 ರೂ. ಎಂದು ಅಂದಾಜಿಸಲಾಗಿದೆ.
Next Story