ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ
ಮಂಗಳೂರು: ಕರಾವಳಿ ತೀರದಲ್ಲಿ ನೈರುತ್ಯ ಮುಂಗಾರು ಚುರುಕಾದ ಹಿನ್ನೆಲೆಯಲ್ಲಿ ದ.ಕ. ಜಿಲ್ಲಾದ್ಯಂತ ಬುಧವಾರವೂ ಮಳೆ ಬಿರುಸು ಪಡೆದಿದೆ. ಮುಂಜಾನೆಯಿಂದಲೇ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಸತತ ಮಳೆ ಸುರಿದಿದೆ.
ಸುಳ್ಯ, ಕಡಬ, ಬೆಳ್ತಂಗಡಿ ತಾಲೂಕಿನ ಹಲವು ಕಡೆಗಳಲ್ಲಿ ಮಳೆ ಉತ್ತಮವಾಗಿ ಸುರಿದಿದೆ. ಮಂಗಳೂರು ನಗರ, ಹೊರವಲಯದಲ್ಲೂ ನಿರಂತರ ಮಳೆಯಾಗಿದೆ.
ಕರಾವಳಿಯಲ್ಲಿ ಇನ್ನೂ ಎರಡು ದಿನ ಆರೆಂಜ್ ಅಲರ್ಟ್ ಇದೆ. ಸಮುದ್ರದಲ್ಲಿ ಗಂಟೆಗೆ ೪೦-೫೦ ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಎಚ್ಚರಿಕೆ ನೀಡಲಾಗಿದೆ. ಮಂಗಳೂರಿನಿಂದ ಕಾರವಾರದ ವರೆಗೆ ೩.೧ ಮೀ.ವರೆಗಿನ ಎತ್ತರದ ಅಲೆಗಳು ಸಮುದ್ರದಲ್ಲಿ ಏಳುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Next Story