Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆರ್ಟಿಐ ಅರ್ಜಿಗೆ ಎಲ್ಲ ಮಾಹಿತಿಗಳನ್ನು...

ಆರ್ಟಿಐ ಅರ್ಜಿಗೆ ಎಲ್ಲ ಮಾಹಿತಿಗಳನ್ನು ಒದಗಿಸಿರುವ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸಿಐಸಿ ಆದೇಶ

ಚುನಾವಣಾ ಬಾಂಡ್ ಮತ್ತು ಹಣಕಾಸು ಕಾಯ್ದೆಗೆ ತಿದ್ದುಪಡಿ‌

ವಾರ್ತಾಭಾರತಿವಾರ್ತಾಭಾರತಿ22 Jun 2022 10:30 PM IST
share
ಆರ್ಟಿಐ ಅರ್ಜಿಗೆ ಎಲ್ಲ ಮಾಹಿತಿಗಳನ್ನು ಒದಗಿಸಿರುವ ಬಗ್ಗೆ ಅಫಿಡವಿಟ್ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸಿಐಸಿ ಆದೇಶ

ಹೊಸದಿಲ್ಲಿ,ಜೂ.22: ಚುನಾವಣಾ ಬಾಂಡ್ಗಳು ಮತ್ತು ಹಣಕಾಸು ಕಾಯ್ದೆಗೆ ತಿದ್ದುಪಡಿ ಕುರಿತು ತನ್ನ ಬಳಿ ಲಭ್ಯವಿದ್ದ ಎಲ್ಲ ಮಾಹಿತಿಗಳನ್ನು ಆರ್ಟಿಐ ಅಡಿ ಅರ್ಜಿದಾರರಿಗೆ ಒದಗಿಸಲಾಗಿದೆ ಎಂದು ಘೋಷಿಸಿ ಅಫಿಡವಿಟ್ ಸಲ್ಲಿಸುವಂತೆ ಕೇಂದ್ರ ಮಾಹಿತಿ ಆಯೋಗ (ಸಿಐಸಿ)ವು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಚುನಾವಣಾ ಆಯೋಗವು ಆರ್ಟಿಐ ಕಾಯ್ದೆಯಡಿ ಬಹಿರಂಗಗೊಳಿಸಬಹುದಾದ ಯಾವುದೇ ಹೆಚ್ಚಿನ ಮಾಹಿತಿಯನ್ನು ತಾನು ತಡೆಹಿಡಿದಿಲ್ಲ ಎನ್ನುವುದನ್ನು ನ್ಯಾಯಾಂಗೇತರ ಸ್ಟಾಂಪ್ ಪೇಪರ್ನಲ್ಲಿ ಸ್ಪಷ್ಟಪಡಿಸಬೇಕು ಎಂದು ಸಿಐಸಿ ತನ್ನ ಆದೇಶದಲ್ಲಿ ತಾಕೀತು ಮಾಡಿದೆ.

ಆರ್ಟಿಐ ಕಾರ್ಯಕರ್ತ ಕಮೋಡೋರ್ (ನಿವೃತ್ತ) ಲೋಕೇಶ ಬಾತ್ರಾ ಅವರು ಆರ್ಟಿಐ ಕಾಯ್ದೆಯಡಿ ಚುನಾವಣಾ ಆಯೋಗಕ್ಕೆ ಅರ್ಜಿ ಸಲ್ಲಿಸಿ,2017ರಲ್ಲಿ ಹಣಕಾಸು ಕಾಯ್ದೆಗೆ ತಿದ್ದುಪಡಿ ತಂದ ಬಳಿಕ ಚುನಾವಣಾ ಬಾಂಡ್ಗಳ ಜಾರಿಗೆ ಸಂಬಂಧಿಸಿದ ಸಂಪೂರ್ಣ ದಾಖಲೆಗಳನ್ನು ಒದಗಿಸುವಂತೆ ಕೋರಿದ್ದರು.

ಚುನಾವಣಾ ಆಯೋಗವು ತನ್ನ ದಾಖಲೆಯಲ್ಲಿದ್ದ ವಿವರವಾದ ಟಿಪ್ಪಣಿ ಹಾಳೆ ಮತ್ತು ಪತ್ರ ವ್ಯವಹಾರದೊಂದಿಗೆ ಅವರ ಅರ್ಜಿಗೆ ಉತ್ತರಿಸಿತ್ತು.

ಸಿಐಸಿ ಎದುರು ವಿಚಾರಣೆ ಸಂದರ್ಭ ಬಾತ್ರಾ ಅವರು,ಚುನಾವಣಾ ಆಯೋಗವು ಒದಗಿಸಿರುವ ದಾಖಲೆಗಳು ಉತ್ತರದಲ್ಲಿ ಒದಗಿಸಲಾಗಿರುವ ಕಡತಕ್ಕೆ ‘ಲಿಂಕ ಫೈಲ್’ವೊಂದು ಇರುವಂತೆ ತೋರಿಸುತ್ತಿವೆ ಎಂದು ಪ್ರತಿಪಾದಿಸಿದ್ದರು.
ಅವರ ವಾದವನ್ನು ನಿರಾಕರಿಸಿದ್ದ ಚುನಾವಣಾ ಆಯೋಗವು,ಬಾತ್ರಾ ಅವರು ಕೋರಿದ್ದಂತೆ ಎಲ್ಲ ಲಭ್ಯ ದಾಖಲೆಗಳನ್ನು ಈಗಾಗಲೇ ಅವರಿಗೆ ಒದಗಿಸಲಾಗಿದೆ ಎಂದು ತಿಳಿಸಿತ್ತು.

ಆರ್ಟಿಐ ಕಾಯ್ದೆಯಡಿ ಒದಗಿಸಬಹುದಾದ ಲಿಂಕ್ಡ್ ಫೈಲ್/ಭಾಗಶಃ ಫೈಲ್ ಅಥವಾ ವಿಷಯಕ್ಕೆ ಸಂಬಂಧಿಸಿದ ಹೊಸ ಕಡತದಂತಹ ಹೆಚ್ಚಿನ ಮಾಹಿತಿಗಳು ತನ್ನ ಬಳಿಯಲ್ಲಿರುವ ಅಧಿಕೃತ ದಾಖಲೆಗಳಲ್ಲಿ ಲಭ್ಯವಿಲ್ಲ ಎನ್ನುವುದನ್ನು ಸ್ಪಷ್ಟಪಡಿಸಿ ಈ ಆದೇಶವು ತಲುಪಿದ ಮೂರು ವಾರಗಳಲ್ಲಿ,ಅಂದರೆ ಜುಲೈ 15ರೊಳಗೆ ನಾನ್-ಜ್ಯುಡಿಷಿಯಲ್ ಸ್ಟಾಂಪ್ ಪೇಪರ್ನಲ್ಲಿ ಅಫಿಡವಿಟ್ ಸಲ್ಲಿಸುವಂತೆ ಮುಖ್ಯ ಮಾಹಿತಿ ಆಯುಕ್ತ ವೈ.ಕೆ.ಸಿನ್ಹಾ ಅವರು ಚುನಾವಣಾ ಆಯೋಗಕ್ಕೆ ನಿರ್ದೇಶ ನೀಡಿದ್ದಾರೆ. ಇದಕ್ಕೆ ವಿಫಲಗೊಂಡರೆ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆಯನ್ನೂ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X