Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಂಆರ್ ಪಿಎಲ್ ಸ್ಥಳೀಯ ಗುತ್ತಿಗೆ...

ಎಂಆರ್ ಪಿಎಲ್ ಸ್ಥಳೀಯ ಗುತ್ತಿಗೆ ಕಾರ್ಮಿಕನ ಸಾವು: ಪಾರದರ್ಶಕ ತನಿಖೆ, ಪರಿಹಾರ ಒದಗಿಸಲು ಡಿವೈಎಫ್ಐ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ23 Jun 2022 3:31 PM IST
share
ಎಂಆರ್ ಪಿಎಲ್ ಸ್ಥಳೀಯ ಗುತ್ತಿಗೆ ಕಾರ್ಮಿಕನ ಸಾವು: ಪಾರದರ್ಶಕ ತನಿಖೆ, ಪರಿಹಾರ ಒದಗಿಸಲು ಡಿವೈಎಫ್ಐ ಆಗ್ರಹ

ಮಂಗಳೂರು, ಜೂ.23: ಎಂಆರ್ ಪಿಎಲ್ ಕೈಗಾರಿಕಾ ಘಟಕದಲ್ಲಿ ಸ್ಥಳೀಯ ಗುತ್ತಿಗೆ ಕಾರ್ಮಿಕ ಕೇಶವ ಕೋಟ್ಯಾನ್ ಕರ್ತವ್ಯದ ಸಂದರ್ಭ ಕ್ರೇನ್ ಅಪಘಾತದಲ್ಲಿ ಸಾವಿಗೀಡಾಗಿದ್ದು, ಸಾವಿನ ನೈಜ ಕಾರಣವನ್ನು ಕಂಪೆನಿ ಮುಚ್ಚಿಡುತ್ತಿದೆ. ಜೊತೆಗೆ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ಒದಗಿಸುವಲ್ಲೂ ಎಂಆರ್ ಪಿಎಲ್ ಆಡಳಿತ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಯತ್ನಿಸುತ್ತಿದೆ. ಇದು ಖಂಡನೀಯ ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ಹೇಳಿದ್ದಾರೆ.

 ಕೇಶವ ಕೋಟ್ಯಾನ್ ಸಾವಿನ ಕುರಿತು ಪಾರದರ್ಶಕ ತನಿಖೆ ನಡೆಯಬೇಕು ಹಾಗೂ ಕರ್ತವ್ಯದ ವೇಳೆ ಕಂಪೆನಿಯ ನಿರ್ಲಕ್ಷದಿಂದ ಸಾವಿಗೀಡಾದ ಕೇಶವ ಕೋಟ್ಯಾನ್ ಕುಟುಂಬಕ್ಕೆ ಒಂದು ಕೋಟಿ ರೂ. ಪರಿಹಾರ, ಕುಟುಂಬ ಸದಸ್ಯನಿಗೆ ಎಂಆರ್ ಪಿಎಲ್ ನಲ್ಲಿ ಖಾಯಂ ಉದ್ಯೋಗ ಒದಗಿಸಿಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕೇಶವ ಕೋಟ್ಯಾನ್ ಕರ್ತವ್ಯ ನಿರತರಾಗಿದ್ದಾಗ ಕ್ರೇನ್ ನ ಭಾರವಾದ ವಸ್ತು ಎದೆ ಹಾಗೂ ಮುಖದ ಭಾಗಕ್ಕೆ ಬಡಿದು ಸಾವಿಗೀಡಾಗಿದ್ದಾರೆ ಎಂಬುದು ಬಹಿರಂಗಗೊಂಡಿರುವ ಮಾಹಿತಿ. ಇದು ಕಂಪೆನಿಯ ಬೇಜವಾಬ್ದಾರಿತನದಿಂದ ನಡೆದ ದುರ್ಘಟನೆ‌. ಆದರೆ ಕಂಪೆನಿ ಇದನ್ನು ಮುಚ್ಚಿಟ್ಟು ಕೇಶವ ಕೋಟ್ಯಾನ್ ಅವರದ್ದು ಸ್ವಾಭಾವಿಕ ಸಾವು ಎಂದು ಹೇಳಿಕೆ ಬಿಡುಗಡೆ ಮಾಡಿದೆ. ಇದು ಆಘಾತಕಾರಿ. ತನ್ನ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಯತ್ನ ಎಂದು ಹೇಳಿಕೆಯಲ್ಲಿ ಆರೋಪಿಸಿದ್ದಾರೆ.

ಕಂಪೆನಿಯು ಪ್ರಭಾವ ಬಳಸಿ ಸೈಟ್ ಜವಾಬ್ದಾರಿ ಹೊಂದಿದ್ದ ಅಧಿಕಾರಿಗಳ ಬದಲಿಗೆ ಕಂಪೆನಿಯು ಖಾಸಗಿಯವರಿಂದ ಗುತ್ತಿಗೆ ಆಧಾರದಲ್ಲಿ ತರಿಸಿಕೊಂಡಿರುವ ಕ್ರೇನ್ ನ ಆಪರೇಟರ್ ವಿರುದ್ಧ ದೂರು ದಾಖಲಾಗುವಂತೆ ಮಾಡಿದೆ. ಖಾಸಗಿ ಉದ್ಯೋಗಿಯಾಗಿರುವ ಬಡಪಾಯಿ ಕ್ರೇನ್ ಆಪರೇಟರ್ ನನ್ನು ಬಲಿಪಶು ಮಾಡಿ ಎಂಆರ್ ಪಿಎಲ್ ಅಧಿಕಾರಿಗಳನ್ನು ರಕ್ಷಿಸುವ ಕುತಂತ್ರ ಮಾಡಲಾಗಿದೆ. ಸ್ವಾಭಾವಿಕ ಸಾವು ಆಗಿದ್ದರೆ ಕ್ರೇನ್ ಆಪರೇಟರ್ ವಿರುದ್ಧ ದೂರು ದಾಖಲಿಸಿರುವುದು ಯಾಕೆ ? ಕಂಪೆನಿ ತನ್ನ ತಪ್ಪುಗಳನ್ನು ಮರೆಮಾಚಲು ಕೇಶವ ಕೋಟ್ಯಾನ್ ಸಾವಿನ ಪ್ರಕರಣವನ್ನೇ ತಿರುಚುತ್ತಿದೆ.  ಪೋಸ್ಟ್ ಮಾರ್ಟಮ್ ನಡೆಸಲು, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲು 24 ಗಂಟೆಗೂ ಹೆಚ್ಚು ಅವಧಿ ತೆಗೆದುಕೊಂಡಿರುವುದು ಇದಕ್ಕೆ ಸಾಕ್ಷಿ. ಪ್ರಕರಣ ಮುಚ್ಚಿ ಹಾಕಲು ಒಳಗಿನಿಂದ ನಡೆಯುತ್ತಿರುವ ಪ್ರಯತ್ನಗಳನ್ನು ಈ ಬೆಳವಣಿಗೆಗಳು ಬಯಲಿಗೆಳೆದಿದೆ ಎಂದು ಹೇಳಿದ್ದಾರೆ.

 ಕೇಶವ ಕೋಟ್ಯಾನ್ ಸಾವಿಗೀಡಾಗಿ ಒಂದು ದಿನ ಕಳೆದರೂ ಕಂಪೆನಿಯು ಸಂತ್ರಸ್ತ ಕುಟುಂಬಕ್ಕೆ ಯಾವುದೇ ಪರಿಹಾರ ಘೋಷಿಸಿಲ್ಲ. ಕೇವಲ ಗುತ್ತಿಗೆದಾರ ಮಾಡಿರುವ ವಿಮೆ, ಹಾಗೂ ವರ್ಕ್ ಮೆನ್ ಕಂಪೊಂಜೇಷನ್ ಕಾಯ್ದೆ ಅಡಿಯಲ್ಲಿ ಸಿಗುವ ಪರಿಹಾರವನ್ನು ಮಾತ್ರ ಬೊಟ್ಟು ಮಾಡುತ್ತಿದೆ. ವರ್ಕ್ ಮೆನ್ ಕಂಪೊಂಜೇಷನ್ ಪ್ರಕಾರ ಕೇಶವ ಕೋಟ್ಯಾನ್ ಕುಟುಂಬಕ್ಕೆ ಸರಿ ಸುಮಾರು ಹತ್ತು ಲಕ್ಷ ರೂ.ನಷ್ಚು ಪರಿಹಾರ ಮಾತ್ರ ದೊರಕುತ್ತದೆ. ಇದೆಲ್ಲದಕ್ಕೂ ಕಂಪೆನಿಯು ಗುತ್ತಿಗೆದಾರನತ್ತ ಕೈತೋರುತ್ತಿದೆ. ಎಂಆರ್ ಪಿಎಲ್ ನಲ್ಲಿ ಗುತ್ತಿಗೆ ಆಧಾರದ ಉದ್ಯೋಗಿಗಳಿಗೂ, ಖಾಯಂ ಉದ್ಯೋಗಿಗಳಿಗೂ ವೇತನ, ಸವಲತ್ತುಗಳಲ್ಲಿ ಅಗಾಧವಾದ ತಾರತಮ್ಯವಿದೆ. ಸ್ಥಳೀಯರನ್ನು ಕಡಿಮೆ ವೇತನಕ್ಕೆ ಜೀತದಾಳುಗಳಂತೆ ದುಡಿಸಿಕೊಳ್ಳಲಾಗುತ್ತದೆ. 22 ವರ್ಷಗಳಿಂದ ಗುತ್ತಿಗೆ ಕಾರ್ಮಿಕರಾಗಿ ದುಡಿಯುತ್ತಿದ್ದರೂ ಕೇಶವ ಕೋಟ್ಯಾನ್ ಉದ್ಯೋಗ ಖಾಯಂ ಆಗದಿರುವುದು ಇದಕ್ಕೊಂದು ನಿದರ್ಶನ ಎಂದರು ತಿಳಿಸಿದ್ದಾರೆ.

 ತಿಂಗಳುಗಳ ಹಿಂದೆ ಎಂಆರ್ ಪಿಎಲ್ ನ ಖಾಯಂ ಉದ್ಯೋಗಿ ಹರೀಶ್ ಲಾಲ್ ಎಂಬವರು ಕಂಪೆನಿಯ ಒಳಗಡೆ ಸಾವಿಗೀಡಾಗಿದ್ದರು. ಅವರ ಕುಟುಂಬಕ್ಕೆ ಸರಿಸುಮಾರು ಎರಡೂವರೆ ಕೋಟಿ ರೂ. ಪರಿಹಾರಧನ ದೊರಕಿತ್ತು.‌ ಆದರೆ ಅದೇರೀತಿ ಕಂಪೆನಿಯ ಒಳಗಡೆ ಕರ್ತವ್ಯ ನಿರತರಾಗಿದ್ದಲೇ ಸಾವಿಗೀಡಾದ 22 ವರ್ಷಗಳಿಂದ ದುಡಿಯುತ್ತಿರುವ ಸ್ಥಳೀಯರಾದ ಗುತ್ತಿಗೆ ಕಾರ್ಮಿಕ ಕೇಶವ ಕೋಟ್ಯಾನ್ ರಿಗೆ ಕಂಪೆನಿಯ ವತಿಯಿಂದ ಬಿಡಿಗಾಸು ನೀಡಲೂ ಸಿದ್ದರಿರದಿರುವುದು ಖೇದಕರ. ಸ್ಥಳೀಯರ ಹಾಗೂ ಗುತ್ತಿಗೆ ಉದ್ಯೋಗಿಗಳ ಕುರಿತು ಕಂಪೆನಿಯ ಆಡಳಿತ ಹೊಂದಿರುವ ನಿಕೃಷ್ಟ ಮನೋಭಾವವನ್ನು ಇದು ಎತ್ತಿ ತೋರಿಸುತ್ತದೆ. ಸಾರ್ವಜನಿಕ ವಲಯದ ಉದ್ಯಮಗಳಲ್ಲಿ ಸಾಮಾನ್ಯವಾಗಿ ಕಾಣಸಿಗದ ಅಸಹಜ ವಂಚಕ ಗುಣಗಳು ಎಂಆರ್ ಪಿಎಲ್ ಅಳವಡಿಸಿಕೊಂಡಿದೆ ಎಂದು ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಕೇಶವ ಕೋಟ್ಯಾನ್ ರಿಗೆ ಸಂಭವಿಸಿದ ಅಪಘಾತ, ಸಾವು ಪ್ರಕರಣದ ಕುರಿತು ಪಾರದರ್ಶಕ ತನಿಖೆಯ ಅಗತ್ಯವಿದೆ. ಜಿಲ್ಲಾಡಳಿತ ಈ ಕುರಿತು ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು. ಓಎನ್ ಜಿಸಿಯ ವಿಜಿಲೆನ್ಸ್ ಕಮಿಟಿ ಪ್ರತ್ಯೇಕ ತನಿಖೆ ಕೈಗೊಳ್ಳಬೇಕು. ಅಪಘಾತ ಪ್ರಕರಣವನ್ನು ಕುಸಿದುಬಿದ್ದು ಸ್ವಾಭಾವಿಕ ಸಾವು ಎಂದು ಪ್ರಕಟನೆ ನೀಡಿ ದಾರಿತಪ್ಪಿಸಿದ, ಪ್ರಕರಣವನ್ನು ತಿರುಚಲು ಯತ್ನಿಸುತ್ತಿರುವ ಎಂಆರ್ ಪಿ ಎಲ್ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕು ಹಾಗೂ ಕೇಶವ ಕೋಟ್ಯಾನ್ ಸಂತ್ರಸ್ತ ಕುಟುಂಬಕ್ಕೆ ಕಂಪೆನಿಯ ವತಿಯಿಂದ ಒಂದು ಕೋಟಿ ರೂ. ಪರಿಹಾರ ಧನ ಹಾಗೂ ಅವರ ಕುಟುಂಬಕ್ಕೆ ಒಂದು ಖಾಯಂ ಉದ್ಯೋಗ ಒದಗಿಸಿಕೊಡಬೇಕು ಎಂದು ಡಿವೈಎಫ್ಐ ಆಗ್ರಹಿಸುತ್ತದೆ ಎಂದು  ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X