Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಹಾರಾಷ್ಟ್ರ ಬೆಳವಣಿಗೆ ಹಿನ್ನೆಲೆ...

ಮಹಾರಾಷ್ಟ್ರ ಬೆಳವಣಿಗೆ ಹಿನ್ನೆಲೆ ಪಕ್ಷಾಂತರ ನಿಷೇಧ ಕಾಯಿದೆಗೆ ಇನ್ನಷ್ಟು ಬಲ ನೀಡಲು ಸುಪ್ರೀಂ ಕೋರ್ಟ್‌ಗೆ ಮೊರೆ

ವಾರ್ತಾಭಾರತಿವಾರ್ತಾಭಾರತಿ23 Jun 2022 3:44 PM IST
share
ಮಹಾರಾಷ್ಟ್ರ ಬೆಳವಣಿಗೆ ಹಿನ್ನೆಲೆ ಪಕ್ಷಾಂತರ ನಿಷೇಧ ಕಾಯಿದೆಗೆ ಇನ್ನಷ್ಟು ಬಲ ನೀಡಲು ಸುಪ್ರೀಂ ಕೋರ್ಟ್‌ಗೆ ಮೊರೆ

ಹೊಸದಿಲ್ಲಿ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿರುವಂತೆಯೇ 2020ರಲ್ಲಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗಿದ್ದ ಅರ್ಜಿಯೊಂದಕ್ಕೆ ಸಂಬಂಧಿಸಿದೆ ಹೊಸ ಇಂಟರ್‌ಲೊಕ್ಯೂಟರಿ ಅರ್ಜಿ ಸಲ್ಲಿಸಿರುವ ಕಾಂಗ್ರೆಸ್‌ ನಾಯಕಿ ಜಯಾ ಠಾಕುರ್‌, ಅನರ್ಹಗೊಳಿಸಲಾದ ಅಥವಾ ರಾಜೀನಾಮೆ ನೀಡಿದ ಶಾಸಕರನ್ನು ಮುಂದಿನ ಐದು ವರ್ಷಗಳ ತನಕ ಚುನಾವಣೆ ಸ್ಪರ್ಧಿಸುವುದರಿಂದ ನಿಷೇಧಿಸುವ ಮೂಲಕ ಪಕ್ಷಾಂತರ ತಡೆ ಕಾಯಿದೆಯನ್ನು ಬಲಪಡಿಸುವಂತೆ ಕೋರಿದ್ದಾರೆ.

ಅನರ್ಹಗೊಂಡ ಶಾಸಕರು ತಾವು ಮೊದಲು ಆಯ್ಕೆಯಾದ ಅವಧಿಯಲ್ಲಿ ಉಪಚುನಾವಣೆ ಸ್ಪರ್ಧಿಸುವುದಕ್ಕೆ ತಡೆ ಕೋರಿ ಈ ಅರ್ಜಿ ಸಲ್ಲಿಸಲಾಗಿತ್ತು.

ಪಕ್ಷಾಂತರದ ಆಧಾರದಲ್ಲಿ ಅನರ್ಹಗೊಳಿಸುವ ವಿಚಾರವನ್ನು ಸಂವಿಧಾನದ ಹತ್ತನೇ ಶೆಡ್ಯೂಲ್‌ನಲ್ಲಿ ಉಲ್ಲೇಖಿಸಲಾಗಿದ್ದು ಇದನ್ನು ಪಕ್ಷಾಂತರ ತಡೆ ಕಾಯಿದೆಯೆಂದೇ ಸಾಮಾನ್ಯವಾಗಿ ಬಣ್ಣಿಸಲಾಗುತ್ತದೆ.

ಠಾಕುರ್‌ ಅವರು 2020ರಲ್ಲಿ ಸಲ್ಲಿಸಿದ್ದ ಅರ್ಜಿಗೆ  ಸುಪ್ರೀಂ ಕೋರ್ಟ್‌ ಜನವರಿ 2021 ರಲ್ಲಿ ಕೇಂದ್ರ ಸರಕಾರ ಮತ್ತು ಚುನಾವಣಾ ಆಯೋಗಕ್ಕೆ ನೋಟಿಸ್‌ ಜಾರಿಗೊಳಿಸಿ ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಸೂಚಿಸಿತ್ತು. ಆದರೆ ಅಫಿಡವಿಟ್‌ಗಳನ್ನು ಇನ್ನೂ ಸಲ್ಲಿಸಲಾಗಿಲ್ಲ.

ಈ ಪ್ರಕರಣದಲ್ಲಿ ಇನ್ನೂ ಪ್ರತಿಕ್ರಿಯಿಸದೇ ಇರುವ ಕೇಂದ್ರ ಸರಕಾರ ಮತ್ತು ಚುನಾವಣಾ ಆಯೋಗವನ್ನು ಜಯ ಠಾಕುರ್‌ ತಮ್ಮ ಇಂಟರ್‌ಲೊಕ್ಯೂಟರಿ ಅರ್ಜಿಯಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.

ʻʻರಾಜಕೀಯ ಪಕ್ಷಗಳು ಪರಿಸ್ಥಿತಿಯ ಲಾಭ ಪಡೆದು ದೇಶದ ವಿವಿಧ ರಾಜ್ಯಗಳಲ್ಲಿ ಚುನಾಯಿತ ಸರಕಾರಗಳನ್ನು ಉರುಳಿಸುತ್ತಿವೆ ಮತ್ತು ಮಹಾರಾಷ್ಟ್ರದಲ್ಲೂ ಈಗ ಅದೇ ನಡೆಯುತ್ತಿದೆ, 10ನೇ ಶೆಡ್ಯೂಲ್‌ ಪ್ರಯೋಜನವಿಲ್ಲದಂತೆ ಮಾಡಲು ರಾಜಕೀಯ ಪಕ್ಷಗಳಿಂದ ದೇಶಾದ್ಯಂತ ಪ್ರಯತ್ನಗಳೂ ನಡೆಯುತ್ತಿವೆ ಎಂದು ಅರ್ಜಿಯಲ್ಲಿ ದೂರಲಾಗಿದೆ.

ಮಣಿಪುರ, ಕರ್ನಾಟಕ ಮತ್ತು ಮಧ್ಯಪ್ರದೇಶದಲ್ಲಿ ರಾಜಕೀಯ ಲಾಭಕ್ಕಾಗಿ ಶಾಸಕರು ಪಕ್ಷ ಬದಲಾಯಿಸಿರುವ ಬೆಳವಣಿಗೆ ಈಗಾಗಲೇ ನಡೆದಿರುವುದನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X