Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮುಂಬೈ ಬಸ್ಸಿನಲ್ಲಿ ತರುತಿದ್ದ 18 ಲಕ್ಷ...

ಮುಂಬೈ ಬಸ್ಸಿನಲ್ಲಿ ತರುತಿದ್ದ 18 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ;ಒಂದೇ ವಾರದಲ್ಲಿ ನಾಲ್ವರು ಆರೋಪಿಗಳ ಸೆರೆ

ಚಿನ್ನಾಭರಣ ವಶ

ವಾರ್ತಾಭಾರತಿವಾರ್ತಾಭಾರತಿ23 Jun 2022 6:52 PM IST
share
ಮುಂಬೈ ಬಸ್ಸಿನಲ್ಲಿ ತರುತಿದ್ದ 18 ಲಕ್ಷ ರೂ.ಮೌಲ್ಯದ ಚಿನ್ನಾಭರಣ ಕಳವು ಪ್ರಕರಣ;ಒಂದೇ ವಾರದಲ್ಲಿ ನಾಲ್ವರು ಆರೋಪಿಗಳ ಸೆರೆ

ಉಡುಪಿ : ಮುಂಬೈಯಿಂದ ಮಂಗಳೂರಿನಲ್ಲಿ ಮಾರಾಟ ಮಾಡುವುದಕ್ಕೆ ಖಾಸಗಿ ಬಸ್‌ನಲ್ಲಿ ತರುತಿದ್ದ 466.960 ಗ್ರಾಂ ತೂಕದ ಅಂದಾಜು 18 ಲಕ್ಷ ರೂ. ಮೌಲ್ಯದ ಚಿನ್ನಾಭರಣವನ್ನು ಶಿರೂರು ಸಮೀಪ ಜೂ.16ರಂದು ಬೆಳಗಿನ ಉಪಾಹಾರಕ್ಕೆಂದು ಬಸ್ ನಿಲ್ಲಿಸಿದ್ದಾಗ ಕಳವು ಮಾಡಿದ್ದ ನಾಲ್ವರು ಆರೋಪಿಗಳನ್ನು ಬೈಂದೂರು ವೃತ್ತ ನಿರೀಕ್ಷಕರಾದ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ಪೊಲೀಸ್ ತಂಡ ಮಹಾರಾಷ್ಟ್ರದಲ್ಲಿ ಪತ್ತೆ ಹಚ್ಚಿ ಬಂಧಿಸಿದ್ದು, ಆರೋಪಿಗಳಿಂದ ಸಂಪೂರ್ಣ ಚಿನ್ನವನ್ನು ವಶಪಡಿಸಿಕೊಂಡಿದೆ.

ಸಂತೋಷ್ ಕಾಯ್ಕಿಣಿ ನೇತೃತ್ವದ ತಂಡ ತನಿಖೆ ನಡೆಸಿ ಆರೋಪಿಗಳ ಜಾಡು ಹಿಡಿದು ಮಹಾರಾಷ್ಟ್ರಕ್ಕೆ ತೆರಳಿ ಜೂ.19ರಂದು ಮಹಾರಾಷ್ಟ್ರದ ದುಲೆ ಜಿಲ್ಲೆಯ ಸೋನ್‌ಗಿರ್ ಟೋಲ್‌ಗೇಟ್‌ನಲ್ಲಿ ಗಂಗೊಳ್ಳಿ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಪಿಎಸ್‌ಐ ವಿನಯ ಎಂ.ಕೊರ್ಲಹಳ್ಳಿ ಅವರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತರಿಂದ ಒಟ್ಟು 18 ಲಕ್ಷರೂ.ಮೌಲ್ಯದ 466.960 ಗ್ರಾಂ ಚಿನ್ನಾಭರಣ ಅಲ್ಲದೇ ಅವರು ಬಳಸಿದ್ದ ಎಂಟು ಲಕ್ಷ ರೂ. ಮೌಲ್ಯದ ಬ್ರೀಜಾ ಕಾರು ಹಾಗೂ ಎರಡು ಮೊಬೈಲ್ ಫೋನ್‌ಗಳನ್ನು ಸಹ ಸ್ವಾಧೀನ ಪಡಿಸಿಕೊಂಡಿದ್ದಾರೆ. ಬಂಧಿತರೆಲ್ಲರೂ ಮೂಲತ: ಮಧ್ಯಪ್ರದೇಶ ರಾಜ್ಯದ ಬೇರೆ ಬೇರೆ ಜಿಲ್ಲೆಗಳ ನಿವಾಸಿಗಳಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಮಧ್ಯಪ್ರದೇಶ ಧಾರ್ ಜಿಲ್ಲೆ ಧರ್ಮಪುರಿ ತಾಲೂಕಿನ ಸಿಂಧಿ ಮೊಹಲ್ಲಾದ ಅಲಿಖಾನ್ (೩೧), ಸಿಂಧಿ ಮೊಹಲ್ಲಾದವರೇ ಆದ ಅಮ್ಜದ್ ಖಾನ್ (೩೩), ಧಾರ್ ಜಿಲ್ಲೆ ಮನವೂರು ತಾಲೂಕು ಖೇರ್ವಜಾಗೀರ್ ಗ್ರಾಮದ ಇಕ್ರಾರ್ ಖಾನ್ (೩೦) ಹಾಗೂ ಮರವೂರು ತಾಲೂಕು ಬ್ರಾಹ್ಮರಿ ಗ್ರಾಮದ ಗೋಪಾಲ್ ಅಮ್ಲಾವಾರ್ (೩೫) ಎಂದು ಗುರುತಿಸಲಾಗಿದೆ.

ಘಟನೆ ಹಿನ್ನೆಲೆ: ಮುಂಬೈ ನಿವಾಸಿ ಈಶ್ವರ ದಾಲಿಚಂದ್  ಅವರು ಚಿನ್ನದ ವ್ಯಾಪಾರಿಯಾಗಿದ್ದು, ಮುಂಬೈಯಲ್ಲಿ ಚಿನ್ನ ಖರೀದಿಸಿ ಮಂಗಳೂರು, ಹೈದರಾಬಾದ್ ಮುಂತಾದ ಕಡೆಗಳಲ್ಲಿ ವಿವಿಧ ಚಿನ್ನಾಭರಣ ಅಂಗಡಿಗಳಿಗೆ ಅವುಗಳನ್ನು ಮಾರಾಟ ಮಾಡುತಿದ್ದರು. ಜೂ.೧೪ರಂದು ಅವರು  ಮುಂಬೈಯಿಂದ ಮಂಗಳೂರಿಗೆ ಚಿನ್ನ ಮಾರಾಟಕ್ಕಾಗಿ 18 ಲಕ್ಷರೂ.ಮೌಲ್ಯದ ೪೬೬.೯೬೦ಗ್ರಾಂ ಚಿನ್ನವನ್ನು ಸೂಟ್‌ಕೇಸ್ ಒಂದರಲ್ಲಿ ಹಾಕಿ ಭದ್ರಪಡಿಸಿಕೊಂಡು ಖಾಸಗಿ ಬಸ್‌ನಲ್ಲಿ ಮಂಗಳೂರಿಗೆ ಬರುತಿದ್ದಾಗ ಜೂ.೧೬ರ ಮುಂಜಾನೆ ಶಿರೂರು ಬಳಿ ಬೆಳಗಿನ ಉಪಹಾರಕ್ಕಾಗಿ ೭:೧೫ಕ್ಕೆ ಬಸ್ ನಿಲ್ಲಿಸಿದ್ದ ವೇಳೆ ಘಟನೆ ನಡೆದಿದೆ.

ಪ್ರಯಾಣಿಕರೆಲ್ಲರೂ ತಿಂಡಿ ತಿನ್ನಲು ಇಳಿದಿದ್ದು, ಈ ವೇಳೆ ಬಸ್ಸಿನಲ್ಲಿ ಯಾರೂ ಇಲ್ಲದ ಸಮಯ ನೋಡಿ ಅಪರಿಚಿತರು ಕಾರಿನಲ್ಲಿ ಬಂದು ಸೂಟ್‌ಕೇಸ್‌ನ್ನು ತೆಗೆದುಕೊಂಡು ಹೋಗಿ ಬಸ್‌ನ ಹಿಂಭಾಗದಲ್ಲಿ ಸೂಟ್‌ಕೇಸ್‌ನ್ನು ಒಡೆದು ಚಿನ್ನವನ್ನು ಕಳವು ಮಾಡಿಕೊಂಡು ಹೋಗಿದ್ದರು. ಈ ಬಗ್ಗೆ ಈಶ್ವರ ದಾಲಿಚಂದ್ ಅವರು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿಷ್ಣುವರ್ಧನ್ ಅವರ ಮಾರ್ಗದರ್ಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ಧಲಿಂಗಪ್ಪ ಹಾಗೂ ಕುಂದಾಪುರ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಶ್ರೀಕಾಂತ್ ಕೆ. ಇವರ ಸೂಚನೆಯಂತೆ ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಿಣಿ ನೇತೃತ್ವದಲ್ಲಿ ತನಿಖೆ ಕೈಗೊಂಡು ಒಂದು ವಾರದೊಳಗೆ ಆರೋಪಿಗಳನ್ನು ಬಂಧಿಸ ಲಾಗಿದೆ.

ಗಂಗೊಳ್ಳಿ ಪಿಎಸ್‌ಐ ವಿನಯ ಎಂ.ಕೊರ್ಲಹಳ್ಳಿ ಅವರೊಂದಿಗೆ ಕಾರ್ಯಾಚ ರಣೆಯಲ್ಲಿ ಬೈಂದೂರು ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ಪಿಎಸ್‌ಐ ಪವನ ನಾಯಕ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ಕೃಷ್ಣ ದೇವಾಡಿಗ, ಸುಜಿತ್, ಫ್ರಿನ್ಸ್, ಶ್ರೀನಿವಾಸ, ರಾಘವೇಂದ್ರ ಹಾಗೂ ನಾಗೇಶ್ ಗೌಡ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X