Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನವೆಂಬರ್ ಒಳಗೆ ರಾಜ್ಯದಲ್ಲಿನ ಗ್ರಾಮಗಳ...

ನವೆಂಬರ್ ಒಳಗೆ ರಾಜ್ಯದಲ್ಲಿನ ಗ್ರಾಮಗಳ ಚರಿತ್ರೆ ಕೋಶ ಪ್ರಕಟ: ಉಮಾ ಮಹದೇವನ್

ವಾರ್ತಾಭಾರತಿವಾರ್ತಾಭಾರತಿ23 Jun 2022 7:41 PM IST
share
ನವೆಂಬರ್ ಒಳಗೆ ರಾಜ್ಯದಲ್ಲಿನ ಗ್ರಾಮಗಳ ಚರಿತ್ರೆ ಕೋಶ ಪ್ರಕಟ: ಉಮಾ ಮಹದೇವನ್

ಬೆಂಗಳೂರು, ಜೂ. 23: ‘ರಾಜ್ಯದ ಎಲ್ಲ ಜಿಲ್ಲೆಗಳ ಗ್ರಾಮಗಳ ಚರಿತ್ರೆ ಕೋಶವನ್ನು ಇದೇ ನವೆಂಬರ್ ತಿಂಗಳೊಳಗಾಗಿ ಪ್ರಕಟಿಸಲಾಗುವುದು' ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್  ತಿಳಿಸಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾದ ‘ಕರ್ನಾಟಕ ಗ್ರಾಮ ಚರಿತ್ರೆ ಕೋಶ ಯೋಜನೆ' ಕಾರ್ಯಾಗಾರದ ಉದ್ಘಾಟಿಸಿ ಮಾತನಾಡಿದ ಅವರು, ‘ಈ ಯೋಜನೆಯಡಿ ಎಲ್ಲಾ ಜಿಲ್ಲೆಗಳ ಎಲ್ಲ ಗ್ರಾಮಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಸಾಂಸ್ಕøತಿಕ, ಐತಿಹಾಸಿಕ ಹಾಗೂ ಇನ್ನಿತರ ವಿಷಯಗಳನ್ನು ಸಂಗ್ರಹಿಸಿ ಅದನ್ನು ಪುಸ್ತಕ ರೂಪದಲ್ಲಿ ಪ್ರಕಟಿಸಲಾಗುವುದು.

ಈಗಾಗಲೇ 17 ಜಿಲ್ಲೆಗಳ ಚರಿತ್ರೆ ಕೋಶ ಪ್ರಕಟಣೆಗೊಂಡಿದ್ದು, ಇನ್ನೂ 13 ಜಿಲ್ಲೆಗಳದ್ದು ಬಾಕಿಯಿದೆ. ಎಲ್ಲಾ ಕೋಶಗಳನ್ನು ಡಿಜಿಟಲ್ ಮೂಲಕ ಲಭ್ಯವಿರುವಂತೆ ಕ್ರಮ ವಹಿಸಲಾಗುವುದು. ಈ ಮಾಹಿತಿ ಕೋಶ ಪ್ರಮುಖ ಸರಕಾರ ಗ್ರಂಥಾಲಯಗಳಲ್ಲೂ ಲಭ್ಯವಿರುತ್ತದೆ. ಗ್ರಾಮಗಳ ಅಸ್ತಿತ್ವವನ್ನು ಭದ್ರವಾಗಿಸಿ ಸಾಂಸ್ಕøತಿಕವಾಗಿ ಇವುಗಳ ವಿಶೇಷತೆಗಳನ್ನು ಈ ಗ್ರಂಥಗಳಲ್ಲಿ ದಾಖಲಿಸಲಾಗುವುದು ಎಂದು ತಿಳಿಸಿದರು.

ಪಂಚಾಯತ್‍ರಾಜ್ ಸಲಹೆಗಾರ ಎಂ.ಕೆ.ಕೆಂಪೇಗೌಡ ಮಾತನಾಡಿ, ‘ಗ್ರಾಮ ಪಂಚಾಯಿತಿಗಳನ್ನೊಳಗೊಂಡ ವಿಚಾರ, ಇತಿಹಾಸ, ಕರೆ ಅಭಿವೃದ್ಧಿ, ಆಹಾರ ಪದ್ಧತಿ, ಜನಪದ ಕಲೆಗಳು, ಇತ್ಯಾದಿ ವಿಷಯಗಳನ್ನು ಈ ಗ್ರಾಮ ಚರಿತ್ರೆ ಕೋಶದಲ್ಲಿ ದಾಖಲಿಸಲಾಗುವುದು. ರಾಜ್ಯದ ಗ್ರಾಮೀಣ ಭಾಗದ 5,400 ಗ್ರಂಥಾಲಯಗಳು ಅಭಿವೃದ್ಧಿಗೊಂಡಿವೆ. ಮುಂದಿನ 5 ವರ್ಷಗಳಲ್ಲಿ ಎಲ್ಲ ಗ್ರಾಮಸ್ಥರಿಗೂ ಆರೋಗ್ಯ ಕಾರ್ಡ್ ನೀಡಲು ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಜಾನಪದ ವಿಶ್ವವಿದ್ಯಾಲಯದ ಕುಲಪತಿ ಸಿ.ಟಿ.ಗುರುಪ್ರಸಾದ್ ಮಾತನಾಡಿ, ‘ವಿವಿಯು ರಾಜ್ಯದಲ್ಲಿ ಸ್ಥಾಪನೆಗೊಂಡು 10 ವರ್ಷಗಳಾಗಿವೆ. ಇಲ್ಲಿ 150 ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. 800 ಜನ ಕುಳಿತುಕೊಳ್ಳುವ ಕಲಾಭವನ ನಿರ್ಮಾಣಗೊಳ್ಳುತ್ತಿದೆ. ವಿಶ್ವವಿದ್ಯಾಲಯ ಹಲವು ಪತ್ರಿಕೆಗಳನ್ನು ಪ್ರಕಟಿಸುತ್ತಿದೆ. ಗ್ರಾಮ ಚರಿತ್ರೆ ಕೋಶ ಯೋಜನೆಯಡಿ 5,900 ಹಳ್ಳಿಗಳ ಇತಿಹಾಸ ಇತರ ವಿವರಗಳು ದಾಖಲೆಗೊಳ್ಳುತ್ತದೆ. ಇದು ಒಳ್ಳೆಯ ಮಾಹಿತಿ ಗ್ರಂಥಾಲಯವಾಗಲಿದೆ. ವಿ.ವಿ186 ಎಕರೆಯಲ್ಲಿ ವಸ್ತು ಸಂಗ್ರಹಾಲಯ ತೆರೆಯುವ ಉದ್ದೇಶವಿದೆ ಎಂದರು.

‘ರಾಜ್ಯ ವಿಕೇಂದ್ರೀಕರಣ ವಿಭಾಗದ ಉಪಾಧ್ಯಕ್ಷ ಪ್ರಮೋದ್ ಹೆಗಡೆ ಮಾತನಾಡಿ, ‘ಹಳ್ಳಿಗಳ ಜೀವನವೆ ಸಾರ್ಥಕ ಜೀವನ. ಇವರು ಹೆಚ್ಚು ಸಂವೇದನಾಶೀಲರೂ, ಹೃದಯವಂತರೂ ಆಗಿರುತ್ತಾರೆ. ಕರ್ನಾಟಕ ಗ್ರಾಮ ಚರಿತ್ರೆ ಕೋಶ ಪ್ರಕಟಿಸುವುದರಿಂದ ಹಳ್ಳಿಗಳ ಶಕ್ತಿ ತುಂಬುವ ಕೆಲಸವಾಗುತ್ತದೆ. ನರೇಗಾದಲ್ಲಿ ದೇಶಕ್ಕೆ ರಾಜ್ಯ ಪ್ರಥಮ ಸ್ಥಾನ ಬಂದಿರುವುದು ಪ್ರಶಂಸಾರ್ಹ. ರಾಜ್ಯದಲ್ಲಿ 6 ಸಾವಿರ ಗ್ರಂಥಾಲಯಗಳು ಕಾರ್ಯನಿರ್ವಹಿಸಿ ಡಿಜಟಲೀಕರಣಗೊಳ್ಳುತ್ತಿದೆ ಎಂದರು. ಪಂಚಾಯತ್‍ರಾಜ್ ಇಲಾಖೆ ಆಯುಕ್ತೆ ಶಿಲ್ಪಾ ಶರ್ಮಾ, ನಿರ್ದೇಶಕ ಕೆ.ಟಿ.ಆಂಜಿನಪ್ಪ, ಗ್ರಂಥಾಲಯ ಇಲಾಖೆ ನಿರ್ದೇಶಕ ಸತೀಶ್‍ಕುಮಾರ್ ಹೊಸಮನಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X