Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಎನ್ಇಪಿ ವಿರುದ್ಧದ ಶಕ್ತಿಗಳೇ ಪಠ್ಯ...

ಎನ್ಇಪಿ ವಿರುದ್ಧದ ಶಕ್ತಿಗಳೇ ಪಠ್ಯ ಪರಿಷ್ಕರಣೆ ಗಲಾಟೆ ಮಾಡಿಸುತ್ತಿವೆ: ಸಚಿವ ಅಶ್ವತ್ಥನಾರಾಯಣ

ವಾರ್ತಾಭಾರತಿವಾರ್ತಾಭಾರತಿ23 Jun 2022 11:40 PM IST
share
ಎನ್ಇಪಿ ವಿರುದ್ಧದ ಶಕ್ತಿಗಳೇ ಪಠ್ಯ ಪರಿಷ್ಕರಣೆ ಗಲಾಟೆ ಮಾಡಿಸುತ್ತಿವೆ: ಸಚಿವ ಅಶ್ವತ್ಥನಾರಾಯಣ

ಹಾಸನ: ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಾಗ ಯಾವ ಶಕ್ತಿಗಳು ವಿನಾ ಕಾರಣ ಹುಯಿಲೆಬ್ಬಿಸಿದವೋ ಅಂತಹ ವಿಚ್ಛಿದ್ರಕಾರಿ ಶಕ್ತಿಗಳೇ ಈಗಲೂ ಪಠ್ಯ ಪುಸ್ತಕ ಪರಿಷ್ಕರಣೆಯ ವಿಚಾರದಲ್ಲಿ ಅನಗತ್ಯವಾಗಿ ಗಲಾಟೆ ಮಾಡುತ್ತಿವೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

`ಮಂಥನ’ ಬಳಗವು ಗುರುವಾರ ಇಲ್ಲಿ ಏರ್ಪಡಿಸಿದ್ದ `ಪಠ್ಯ ಪುಸ್ತಕ ಪರಿಷ್ಕರಣೆ- ಒಂದು ವಿಶ್ಲೇಷಣೆ’ ಸಂವಾದದಲ್ಲಿ ಮಾತನಾಡಿದ ಅವರು, `ಪಠ್ಯವನ್ನು ಮರುಪರಿಷ್ಕರಣೆ ಮಾಡಿದ ಕೂಡಲೇ ಅದನ್ನು ಸಾರ್ವಜನಿಕವಾಗಿ ಮುಕ್ತಗೊಳಿಸಲಾಗಿತ್ತು. ಈಗ ಕೂಗೆಬ್ಬಿಸುತ್ತಿರುವವರು ಆಗ ಏನು ಮಾಡುತ್ತಿದ್ದರು?’ ಎಂದು ಪ್ರಶ್ನಿಸಿದರು.

`ದೇಶಕ್ಕೆ ಸ್ವಾತಂತ್ರ್ಯ ಬಂದಮೇಲೆ ನಮ್ಮತನವನ್ನು ಕಲಿಸುವಂತಹ ಶಿಕ್ಷಣ ಕ್ರಮವನ್ನು ರೂಪಿಸಬೇಕಾಗಿತ್ತು. ಆದರೆ, ಕಾಂಗ್ರೆಸ್ ಪಕ್ಷದ ದೆಸೆಯಿಂದಾಗಿ ನಮ್ಮ ಮೇಲೆ ಸಾವಿರಾರು ವರ್ಷ ದೌರ್ಜನ್ಯ ಎಸಗಿದ ಮೊಘಲರು ಮತ್ತು ಬ್ರಿಟಿಷರ ಬಗ್ಗೆಯೇ ಗುಣಗಾನವಿರುವಂತಹ ಪಠ್ಯಕ್ರಮಗಳನ್ನು ಓದಬೇಕಾಗಿ ಬಂದಿದ್ದು ದುರಂತ’ ಎಂದು ಅವರು ಪ್ರತಿಪಾದಿಸಿದರು.

`ಎನ್ಇಪಿ ಘೋಷಿಸಿದಾಗ ಕೆಲವು ವಿಧ್ವಂಸಕ ಮನೋಭಾವದ ಗುಂಪುಗಳು, ಇದು ದಲಿತರಿಗೆ ವಿರುದ್ಧವಾಗಿದೆ, ಅಲ್ಪಸಂಖ್ಯಾತರಿಗೆ ವಿರುದ್ಧವಾಗಿದೆ ಎಂದೆಲ್ಲ ಪುಕಾರು ಹಬ್ಬಿಸಿದರು. ಈಗ ಅಂಥವೇ ಶಕ್ತಿಗಳು ಜಾತಿ, ಸಮುದಾಯ, ಭಾಷೆ ಇತ್ಯಾದಿಗಳ ಹೆಸರಿನಲ್ಲಿ ಜನರನ್ನು ಒಡೆಯುವ ಕೆಲಸ ಮಾಡುತ್ತಿವೆ. ಎಲ್ಲಕ್ಕಿಂತ ದೇಶ ಮೊದಲು ಎನ್ನುವ ಸತ್ಯವನ್ನು ಇವರೆಲ್ಲ ಅರಿಯಬೇಕು’ ಎಂದು ಅವರು ಒತ್ತಿ ಹೇಳಿದರು.

`ರಾಜ್ಯದ ಮತದಾರರು ಬಿಜೆಪಿಗೆ ಜನಾದೇಶ ಕೊಟ್ಟಿದ್ದಾರೆ. ನಮ್ಮತನವನ್ನು ಕಲಿಸುವಂತಹ ಪಠ್ಯಕ್ರಮವನ್ನು ರೂಪಿಸುವುದು ಕೂಡ ಈ ಜನಾದೇಶಕ್ಕೆ ಬೆಲೆ ಕೊಟ್ಟೇ ಮಾಡಿರುವ ಕೆಲಸವಾಗಿದೆ. ಭಾರತದ ವಿರುದ್ಧ ಕ್ರೌರ್ಯವನ್ನೆಸಗಿದವರ ಬಗ್ಗೆ ವೀರಾವೇಶದ ಬರಹಗಳನ್ನು ಓದುವುದು ಇನ್ನಾದರೂ ನಿಲ್ಲಬೇಕು’ ಎಂದು ಅವರು ಅಭಿಪ್ರಾಯಪಟ್ಟರು.

`ಯಾವುದೇ ಒಂದು ದೇಶದ ಆರ್ಥಿಕ ಪ್ರಗತಿಗಿಂತ ಅಲ್ಲಿನ ಶಿಕ್ಷಣ ಕ್ರಮ ಹೇಗಿದೆ ಎನ್ನುವುದು ಮುಖ್ಯ. ಪ್ರಪಂಚದ ಯಾವುದೇ ಮೂಲೆಗೆ ಹೋದರೂ ನಮಗಿರುವ ಅಸ್ಮಿತೆ ನಿರ್ಣಾಯಕವಾಗಿರುತ್ತದೆ. ಆದ್ದರಿಂದ, ಭಾರತದ ನೈಜ ಇತಿಹಾಸವನ್ನು ಮಕ್ಕಳಿಗೆ ಕಲಿಸುವ ಕೆಲಸಕ್ಕೆ ಬಿಜೆಪಿ ಬದ್ಧವಾಗಿದೆ ಎಂದು ಸಚಿವರು ನುಡಿದರು.

ಪಠ್ಯ ಮರು ಪರಿಷ್ಕರಣೆಯಲ್ಲಿ ಅಂಬೇಡ್ಕರ್ ಅವರಿಗಾಗಿ, ಇತರ ಮಹಾನ್ ವ್ಯಕ್ತಿಗಳಿಗಾಗಲಿ ಯಾವುದೇ ಅಪಮಾನವಾಗಿಲ್ಲ. ಮರು ಪರಿಷ್ಕರಣೆ ಸಮಿತಿ ತನ್ನ ಕೆಲಸವನ್ನು ಸಮರ್ಥವಾಗಿ ನಿರ್ವಹಿಸಿ, ಅದನ್ನು ಸರಕಾರಕ್ಕೆ ಕೊಟ್ಟಿದ್ದರಿಂದಷ್ಟೆ ಆ ಸಮಿತಿಯನ್ನು ವಿಸರ್ಜಿಸಲಾಗಿದೆ ಅಷ್ಟೆ ಎಂದು ಅವರು ವಿವರಣೆ ನೀಡಿದರು.

ಕಾರ್ಯಕ್ರಮದಲ್ಲಿ ಹಾಸನ ಜಿಲ್ಲಾ ಕಸಾಪ ಮಾಜಿ ಅಧ್ಯಕ್ಷ ಮದನ್ ಗೌಡ, ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ಅವರು ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X