Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪಿಯುಸಿ ಇತಿಹಾಸ ಪುಸ್ತಕ: ಬೌದ್ಧ, ಜೈನ...

ಪಿಯುಸಿ ಇತಿಹಾಸ ಪುಸ್ತಕ: ಬೌದ್ಧ, ಜೈನ ಧರ್ಮಗಳ ಉದಯಕ್ಕೆ ಸಾಮಾಜಿಕ ಕಾರಣಗಳು ಇಲ್ಲ

ರೋಹಿತ್ ಚಕ್ರತೀರ್ಥ ವರದಿ ಪ್ರತಿಪಾದನೆ

ಜಿ.ಮಹಾಂತೇಶ್ಜಿ.ಮಹಾಂತೇಶ್24 Jun 2022 3:22 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪಿಯುಸಿ ಇತಿಹಾಸ ಪುಸ್ತಕ: ಬೌದ್ಧ, ಜೈನ ಧರ್ಮಗಳ ಉದಯಕ್ಕೆ ಸಾಮಾಜಿಕ ಕಾರಣಗಳು ಇಲ್ಲ

ಬೆಂಗಳೂರು: ದ್ವಿತೀಯ ಪಿಯುಸಿ ಇತಿಹಾಸ ಪಠ್ಯಪುಸ್ತಕದ  ೪.೨ರಲ್ಲಿದ್ದ ಹೊಸ ಧರ್ಮಗಳ ಉದಯ ಅಧ್ಯಾಯದಲ್ಲಿ ಬೌದ್ಧ ಜೈನ ದರ್ಶನಗಳ ಉದಯಕ್ಕೆ ಸಾಮಾಜಿಕ ಕಾರಣಗಳನ್ನು ಮುಂದೆ ಮಾಡುವುದು ಅಸಂಬದ್ಧ, ಇಂಥ ಕಾರಣಗಳನ್ನು ಯಾವುದೇ ಮೂಲ ಬೌದ್ಧ, ಜೈನ ಧಾರ್ಮಿಕ ಗ್ರಂಥಗಳಲ್ಲಿ ಕಾಣುವುದಿಲ್ಲ. ಒಂದು ವೇಳೆ ಇದ್ದರೆ ಪಠ್ಯಪುಸ್ತಕ ರಚನಾಕಾರರೇ ತೋರಿಸಬೇಕು ಎಂದು ರೋಹಿತ್ ಚಕ್ರತೀರ್ಥ ವರದಿಯಲ್ಲಿ ಸವಾಲು ಹಾಕಿರುವುದು ಇದೀಗ ಬಹಿರಂಗವಾಗಿದೆ.

ದ್ವಿತೀಯ ಪಿಯು ಪಠ್ಯ ಪರಿಷ್ಕರಣೆಯೂ ಇಲ್ಲ ಮತ್ತು ಚಕ್ರತೀರ್ಥ ಸಮಿತಿಗೆ ನೀಡಿದ್ದ ಜವಾಬ್ದಾರಿಯನ್ನೂ ಹಿಂಪಡೆದಿದೆ ಎಂದು ಸಚಿವ ಬಿ.ಸಿ. ನಾಗೇಶ್ ಅವರು ಹೇಳಿಕೆ ನೀಡಿದ ಬೆನ್ನಲ್ಲೇ ಚಕ್ರತೀರ್ಥ ಸಮಿತಿಯು ಪರಿಷ್ಕರಿಸಲು ವರದಿಯಲ್ಲಿ  ನೀಡಿದ್ದ ಅಭಿಪ್ರಾಯವು ಮುನ್ನೆಲೆಗೆ ಬಂದಿದೆ. ವರದಿಯ ಪ್ರತಿ ‘the-file.in’ಗೆ ಲಭ್ಯವಾಗಿದೆ.

ವೈದಿಕ ಸಂಸ್ಕೃತಿಯ ಕುರಿತು ಆಕ್ಷೇಪಣೆ ವ್ಯಕ್ತಪಡಿಸಿದ್ದ ಚಕ್ರತೀರ್ಥ ಸಮಿತಿಯು ಹೊಸ ಧರ್ಮಗಳ ಉದಯ ಅಧ್ಯಾಯದಲ್ಲಿನ ಪಾಠಾಂಶದ ಬಗ್ಗೆಯೂ ಹಲವು  ತಕರಾರು ಎತ್ತಿದೆ.

೬ನೇ ಶತಮಾನದಲ್ಲಿ ಭಾರತ ಸಮಾಜದಲ್ಲಿದ್ದ ಧಾರ್ಮಿಕ ಮತ್ತು ಸಾಮಾಜಿಕ ಶೋಷಣೆಯ ವಿರುದ್ಧ ಪ್ರತಿಭಟನೆಯನ್ನು ಕಂಡಿತು. ಜಾತಿಪದ್ಧತಿ, ಅನ್ಯಾಯ, ಕಠಿಣವಾದ ಆಚರಣೆಗಳ ವಿರುದ್ಧ ಒಂದು ಚಳವಳಿ ನಡೆಯಿತು. ಸರಳ ಧರ್ಮ ಮತ್ತು ಆಧ್ಯಾತ್ಮಿಕ ಕ್ರಮವು ಅಂದಿನ ಕಾಲದ ಅಗತ್ಯವಾಗಿದ್ದು, ಇದನ್ನು ಮಹಾವೀರ ಮತ್ತು ಬುದ್ಧ ಬಹುಮಟ್ಟಿಗೆ ಈಡೇರಿಸಿದರು. ಹೊಸ ಧರ್ಮಗಳು ಬೋಧಿಸಿದ ಸರಳ ಮುಕ್ತಿ ಮಾರ್ಗದಿಂದ ಸಾಮಾನ್ಯರು ಹೊಸ ಧರ್ಮಗಳತ್ತ ಆಕರ್ಷಿಸಲ್ಪಟ್ಟರು ಇಲ್ಲಿಯವರೆಗಿನ ಭಾಗವನ್ನು ಸಂಪೂರ್ಣವಾಗಿ ಕೈಬಿಡಬೇಕಿದೆ ಎಂದು ವರದಿಯಲ್ಲಿ ಶಿಫಾರಸು ಮಾಡಿದ್ದರು.

ಈ ಭಾಗವು ತಪ್ಪು ಮಾಹಿತಿಗಳನ್ನು ಒಳಗೊಂಡಿದೆ. ವಿದ್ಯಾರ್ಥಿಗಳಲ್ಲಿ ತಪ್ಪು ಅಭಿಪ್ರಾಯಗಳನ್ನು ಬಿತ್ತುತ್ತದೆ. ಸಮಾಜದ ಕೆಲವು ಸಮುದಾಯಗಳ ವಿರುದ್ಧ ಪೂರ್ವಾಗ್ರಹಗಳನ್ನು ಬೆಳೆಸುತ್ತದೆ ಎಂದು ಸಮಿತಿಯು ಅಭಿಪ್ರಾಯಿಸಿರುವುದು ವರದಿಯಿಂದ ಗೊತ್ತಾಗಿದೆ.

ಬೌದ್ಧ, ಜೈನ ದರ್ಶನಗಳಂತೆಯೇ ಸಾಂಕ್ಯ, ಯೋಗ, ವೈಶೇಷಿಕ, ಚಾರ್ವಾಕ ಮುಂತಾದ ಅನೇಕ ದರ್ಶನಗಳೂ ಅದ್ವೈತ, ವಿಶಿಷ್ಟಾದ್ವೈತ, ದ್ವೈತ ಮುಂತಾದ ಮತಗಳೂ ವೈದಿಕ ಸಾಹಿತ್ಯವನ್ನು ಒಪ್ಪಿ, ಆಂಶಿಕವಾಗಿ ಒಪ್ಪಿ, ಆಂಶಿಕವಾಗಿ ವಿರೋಧಿಸಿ ಬಹ್ವಂಶ ವಿರೋಧಿಸಿ ಬೆಳೆದು ಬಂದವು. ಇವೆಲ್ಲವೂ ವೇದ ಅಥವಾ ವೇದ ಸಂಸ್ಕೃತಿಯಿಂದ ಸಿಡಿದು ಬೇರೆಯಾದ ದರ್ಶನ/ಪಂಥ/ಮತಗಳಲ್ಲ. ಹಾಗಾಗಿ ಬೌದ್ಧ, ಜೈನ ದರ್ಶನಗಳ ಉದಯಕ್ಕೆ ಸಾಮಾಜಿಕ ಕಾರಣಗಳನ್ನು ಮುಂದೆ ಮಾಡುವುದು ಅಸಂಬದ್ಧ. ಇಂಥ ಕಾರಣಗಳನ್ನು ಯಾವುದೇ ಮೂಲ ಬೌದ್ಧ, ಜೈನ ಧಾರ್ಮಿಕ ಗ್ರಂಥಗಳಲ್ಲಿ ಇಲ್ಲ. ಇದ್ದರೆ ಪಠ್ಯಪುಸ್ತಕ ರಚನಕಾರರು ತೋರಿಸಬಹುದು. ಸಾಮಾಜಿಕ ಕಾರಣಗಳಿಗಾಗಿ ಜೈನ, ಬೌದ್ಧ ಧರ್ಮಗಳು ಹುಟ್ಟಿದವು ಎಂಬುದು ಕೇವಲ ೧೫೦ ವರ್ಷಗಳಿಂದ ಈಚೆಗೆ ಸೃಷ್ಟಿಯಾಗಿರುವ (ಮುಖ್ಯವಾಗಿ ಇಂಡಾಲಜಿ ಶಾಸ್ತ್ರಜ್ಞರಿಂದ) ಒಂದು ಸಿದ್ಧಾಂತ ಎಂದು ಚಕ್ರತೀರ್ಥ ಸಮಿತಿಯು ವರದಿಯಲ್ಲಿ ವಿವರಿಸಿದೆ.

ಹೊಸ ಧರ್ಮಗಳ ಉದಯಕ್ಕೆ ವೈದಿಕ ಧರ್ಮದಲ್ಲಿನ ಗೊಂದಲಗಳು ಸೇರಿದಂತೆ ಒಟ್ಟು ೭ ಅಂಶಗಳನ್ನು ಡಾ.ಗಾಯತ್ರಿದೇವಿ ಎ.ಎಚ್. ಅಧ್ಯಕ್ಷತೆಯಲ್ಲಿ ದ್ವಿತೀಯ ಪಿಯುಸಿ ಇತಿಹಾಸ ಪಠ್ಯಪುಸ್ತಕ ಅಭಿವೃದ್ಧಿ ಸಮಿತಿಯು ಪಠ್ಯದಲ್ಲಿ ಸೇರಿಸಿತ್ತು. ಜೈನ ಧರ್ಮ, ವರ್ಧಮಾನ ಮಹಾವೀರನ ಆರಂಭಿಕ ಜೀವನ, ಬೋಧನೆಗಳು, ಪಂಚಶೀಲ ತತ್ವಗಳು, ತ್ರಿರತ್ನಗಳು, ಜೈನ ಧರ್ಮದ ಪ್ರಸಾರ, ಜೈನ ಸಭೆಗಳು, ಜೈನಧರ್ಮದ ಪಂಗಡಗಳು, ಜೈನ ಸಾಹಿತ್ಯ, ಕಲೆ, ಸಾಹಿತ್ಯಕ್ಕೆ ಜೈನ ಧರ್ಮದ ಕೊಡುಗೆ, ಬೌದ್ಧ ಧರ್ಮ, ಗೌತಮ ಬುದ್ಧ, ಬುದ್ಧನ ಬೋಧನೆಗಳು, ಬೌದ್ಧ ಧರ್ಮದ ಪ್ರಸಾರ ಮತ್ತು ಕಾರಣಗಳು, ಬೌದ್ಧ ಧರ್ಮ ಸಮ್ಮೇಳನಗಳು, ಸಾಹಿತ್ಯ, ಕೊಡುಗೆಗಳು ಕುರಿತು ಪಠ್ಯದಲ್ಲಿ ಅಳವಡಿಸಲಾಗಿತ್ತು.

ಪದವಿಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಇತಿಹಾಸ ವಿಭಾಗಕ್ಕೆ ನಿಗದಿಪಡಿಸಿದ ಭಾರತದ ಇತಿಹಾಸ (ಕರ್ನಾಟಕ ವಿಶೇಷ ಉಲ್ಲೇಖದೊಂದಿಗೆ) ಪಠ್ಯಪುಸ್ತಕದ ೪.೨ನೇ ಅಧ್ಯಾಯ ಹೊಸ ಧರ್ಮಗಳ ಉದಯ ಪಠ್ಯಭಾಗದಲ್ಲಿ ನಿರ್ದಿಷ್ಟ ಸಮುದಾಯದ ಭಾವನೆಗಳಿಗೆ ಧಕ್ಕೆಯಾಗುವಂತಹ ವಿಷಯವಿರುವ ಬಗ್ಗೆ ಸಚಿವ ಬಿ.ಸಿ. ನಾಗೇಶ್ ಅವರಿಗೆ ದೂರು ಸಲ್ಲಿಕೆಯಾಗಿತ್ತು.

ಭಾರತದ ಇತಿಹಾಸ ಹಾಗೂ ಕರ್ನಾಟಕದ ಇತಿಹಾಸವನ್ನು ಬೇರೆಬೇರೆಯಾಗಿ ೧೮೦ ಗಂಟೆಗಳ ಅವಧಿಯಲ್ಲಿ ಅಭ್ಯಾಸ ಮಾಡಲಾಗುತ್ತಿತ್ತು. ಅದರೆ ಇವರೆಡನ್ನೂ ಒಗ್ಗೂಡಿಸಿ ೧೨೦ ಗಂಟೆಗಳ ಪರಿಮಿತಿಯೊಳಗೆ ತರಲಾಗಿತ್ತು. ಬೆಂಗಳೂರಿನ ಮಲ್ಲೇಶ್ವರಂ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕರಾದ ಡಾ.ಗಾಯತ್ರಿದೇವಿ ಎ.ಎಚ್. ಅಧ್ಯಕ್ಷತೆಯಲ್ಲಿ ದ್ವಿತೀಯ ಪಿಯುಸಿ ಇತಿಹಾಸ ಪಠ್ಯಪುಸ್ತಕ ಅಭಿವೃದ್ಧಿ ಸಮಿತಿ ರಚಿಸಲಾಗಿತ್ತು. ಈ ಸಮಿತಿಯಲ್ಲಿ ೧೨ ಮಂದಿ ಸದಸ್ಯರಿದ್ದರು.

ಈ ಸಮಿತಿಯು ರಚಿಸಿದ್ದ ಪಠ್ಯಕ್ರಮವನ್ನು ಹೊನ್ನಾವರ ತಾಲೂಕಿನ ಕವಲಕ್ಕಿಯ ಸುಬ್ರಹ್ಮಣ್ಯ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಜಿ. ಭಟ್, ಕಲಬುರಗಿಯ ಸರಕಾರಿ ಸ್ವತಂತ್ರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಆರ್.ಬಿ. ಸಂಭಾ, ಬೆಳಗಾವಿಯ ಸರಕಾರಿ ಸರದಾರ್ಸ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಸಿ.ಜಿ. ಮಠಪತಿ ನೇತೃತ್ವದ ಸಮಿತಿಯು ಪರಿಶೀಲಿಸಿತ್ತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X