ರಾಷ್ಟ್ರಪತಿ ಹುದ್ದೆಗೆ ಬೆಂಬಲಿಸಿ: ಸೋನಿಯಾ ಗಾಂಧಿ, ಶರದ್ ಪವಾರ್, ಮಮತಾ ಬ್ಯಾನರ್ಜಿಗೆ ದ್ರೌಪದಿ ಮುರ್ಮು ಕರೆ

Photo:pti
ಹೊಸದಿಲ್ಲಿ: ರಾಷ್ಟ್ರಪತಿ ಹುದ್ದೆಗೆ ತನ್ನನ್ನು ಬೆಂಬಲಿಸಿ ಎಂದು ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ,ಎನ್ ಸಿಪಿ ವರಿಷ್ಠ ಶರದ್ ಪವಾರ್ ಹಾಗೂ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿಗೆ ಕರೆ ಮಾಡಿದ್ದಾರೆ ಎಂದು ಸುದ್ದಿ ಸಂಸ್ಥೆ PTI ವರದಿ ಮಾಡಿದೆ.
ಜುಲೈ 18 ರ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸುವ ಮೊದಲು ಮುರ್ಮು ಅವರು ಈ ನಾಯಕರಿಗೆ ಖುದ್ದಾಗಿ ಕರೆ ಮಾಡಿ ಮಾತನಾಡಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಮೂವರು ನಾಯಕರು ಮುರ್ಮುವಿಗೆ ಶುಭಾಶಯಗಳನ್ನು ತಿಳಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಮುರ್ಮು ಶುಕ್ರವಾರ ತಮ್ಮ ನಾಮಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ಚುನಾವಣಾ ಅಧಿಕಾರಿ ಪಿ.ಸಿ. ಮೋದಿ ಅವರಿಗೆ ಹಸ್ತಾಂತರಿಸಿದರು.
ಕಾಂಗ್ರೆಸ್, ಟಿಎಂಸಿ ನೇತೃತ್ವದ ವಿಪಕ್ಷಗಳು ಹಿರಿಯ ಮುಖಂಡ ಯಶವಂತ ಸಿನ್ಹಾ ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿವೆ.
Next Story