Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಲಾಭದತ್ತ ಕರ್ನಾಟಕ ಅರಣ್ಯ ಅಭಿವೃದ್ದಿ...

ಲಾಭದತ್ತ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮ: ತಾರಾಅನೂರಾಧಾ

ವಾರ್ತಾಭಾರತಿವಾರ್ತಾಭಾರತಿ24 Jun 2022 7:19 PM IST
share
ಲಾಭದತ್ತ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮ: ತಾರಾಅನೂರಾಧಾ

ಬೆಂಗಳೂರು, ಜೂ.24: ಕೋವಿಡ್ ಸಾಂಕ್ರಾಮಿಕದ ಹಾಗೂ ನೀಲಗಿರಿ ಬೆಳೆಯ ನಿಷೇಧದ ನಡುವೆಯೂ ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮ ಲಾಭದತ್ತ ಸಾಗುತ್ತಿದ್ದು, ಇದಕ್ಕೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ಹಲವಾರು ನೂತನ ಕಾರ್ಯಕ್ರಮಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮದ ಅಧ್ಯಕ್ಷೆ ತಾರಾಅನೂರಾಧಾ ತಿಳಿಸಿದರು. 

ಶುಕ್ರವಾರ ನಗರದಲ್ಲಿರುವ ಅರಣ್ಯ ಅಭಿವೃದ್ಧಿ ನಿಗಮದ ಪ್ರಧಾನ ಕಚೇರಿ ವನವಿಕಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 2021ರ ಜನವರಿಯಲ್ಲಿ ನಾನು ನಿಗಮದ ಅಧ್ಯಕ್ಷೆಯಾಗಿ ಅಧಿಕಾರ ಸ್ವೀಕರಿಸಿದ ಸಂದರ್ಭದಲ್ಲಿ ಹಲವಾರು ಕಾರಣಗಳಿಂದ ನಿಗಮ ನಷ್ಟದತ್ತ ಸಾಗುತ್ತಿತ್ತು. 2017 ರಲ್ಲಿ ನೀಲಗಿರಿ ನಿಷೇಧದ ನಂತರ ನಿಗಮ ಆರ್ಥಿಕ ಪರಿಸ್ಥಿತಿ ಕ್ಷೀಣಿಸುತ್ತಾ ಬಂದಿತು. ಬ್ಯಾಂಕುಗಳಲ್ಲಿದ್ದ ಠೇವಣಿಯನ್ನು ಹಿಂಪಡೆದು ನಿಗಮವನ್ನು ನಿರ್ವಹಿಸಬೇಕಾಗಿದ್ದ ಪರಿಸ್ಥಿತಿ ಬಂದೊದಗಿತ್ತು ಎಂದರು.

ನಿಶ್ವಿತ ಠೇವಣಿಯು 67.35 ಕೋಟಿ ರೂಪಾಯಿಗಳಿಗೆ ಇಳಿದಿತ್ತು. ಇಂತಹ ಸಂಕಷ್ಟದ ಸಮಯವನ್ನು ಸವಾಲಾಗಿ ತೆಗೆದುಕೊಂಡು ಹಲವಾರು ಹೊಸ ಯೋಜನೆಗಳನ್ನು ಅನುಷ್ಠಾನಗೊಳಿಸಲಾಯಿತು. ನಿಮಗದ ಅಧೀನದಲ್ಲಿರುವ ಕಾರ್ಯಕ್ಷೇತ್ರಗಳಿಗೆ ಭೇಟಿ ನೀಡಿದ ನಂತರ ಕಾರ್ಯಕ್ಷಮತೆಯಲ್ಲಿ ಹಲವಾರು ಬದಲಾವಣೆಗಳನ್ನು ಅನುಷ್ಠಾನಗೊಳಿಸಲಾಯಿತು. ಇದರಿಂದಾಗಿ ನಿಗಮ ಲಾಭದತ್ತ ದಾಪುಗಾಲು ಹಾಕುತ್ತಿದೆ ಎಂದು ತಾರಾ ಅನೂರಾಧಾ ಹೇಳಿದರು. 
ಸರಕಾರದ ಯಾವುದೇ ಅನುದಾನವಿಲ್ಲದೆ, ಒಂದೂವರೆ ವರ್ಷದಲ್ಲಿ ನಿಶ್ಚಿತ ಠೇವಣಿ 100 ಕೋಟಿ ರೂಪಾಯಿಗಳಿಗೆ ಏರಿಕೆಯಾಗಿದೆ. ಇನ್ನು ಮುಂದೆ ಯಾವುದೇ ಕಾರಣಕ್ಕೂ ಈ ನಿಶ್ಚಿತ ಠೇವಣಿಯನ್ನು ಹಿಂದಕ್ಕೆ ತೆಗೆದುಕೊಳ್ಳಬಾರದು ಎನ್ನುವ ನಿರ್ಧಾರವನ್ನು ಮಂಡಳಿಯಲ್ಲಿ ತೆಗೆದುಕೊಂಡಿದ್ದೇವೆ ಎಂದು ಅವರು ತಿಳಿಸಿದರು.

ಸರಕಾರವು ನೀಲಗಿರಿ ಬೆಳೆಸುವುದನ್ನು ನಿಷೇಧಿಸಿದ ನಂತರ ನಿಗಮದ ವತಿಯಿಂದ ಕ್ಯಾಸುರಿನ, ಹೆಬ್ಬೇವು ಮತ್ತು ಸುಬಾಬುಲ್‍ಗಳಂತಹ ಪರ್ಯಾಯ ಜಾತಿಯ ಮರಗಳನ್ನು ಬೆಳೆಸುವ ಕ್ರಮಗಳನ್ನು ಕೈಗೊಳ್ಳಲು ವ್ಯವಸ್ಥೆ ಮಾಡಲಾಗಿದೆ. ನಿಗಮದ ಅಡಿಯಲ್ಲಿ 40 ಸಾವಿರ ಹೆಕ್ಟೇರ್ ಅರಣ್ಯ ಭೂಮಿಯಿದ್ದು, ಇನ್ನೂ 10 ಸಾವಿರ ಹೆಕ್ಟೇರ್ ಭೂಮಿಯನ್ನು ಅರಣ್ಯ ಇಲಾಖೆಯಿಂದ ಪಡೆಯುವ ಪ್ರಕ್ರಿಯೆ ಚಾಲ್ತಿಯಲ್ಲಿದೆ ಎಂದು ಅವರು ಹೇಳಿದರು.

ಅರಣ್ಯ ಹೆಚ್ಚಿಸುವ ಹಾಗೂ ಒತ್ತುವರಿಯನ್ನು ತಡೆಯುವ ನಿಟ್ಟಿನಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತಿದೆ. ಅರಣ್ಯದ ಅಂಚಿನ ಭೂಮಿಯಲ್ಲಿ ಮರಗಳನ್ನು ನೆಡುವುದು ಹಾಗೂ ಅವುಗಳಿಂದ ಬರುವ ಉತ್ಪನ್ನಗಳ ಮೂಲಕ ಆರ್ಥಿಕ ಚಟುವಟಿಕೆಯನ್ನು ನಡೆಸುವುದು ನಮ್ಮ ಪ್ರಮುಖ ಕಾರ್ಯಚಟುವಟಿಕೆಯಾಗಿದೆ. ಕಳೆದ ಹಲವಾರು ವರ್ಷಗಳಿಂದ ನಿಗಮದ ಕಾರ್ಯಚಟುವಟಿಕೆಗಳಲ್ಲಿ ಇದ್ದಂತಹ ಲೋಪದೋಷಗಳನ್ನು ನಿವಾರಿಸಿದ್ದೇವೆ. ಹೊಸ ರೀತಿಯ ಟಾರ್ಗೆಟ್ ಬೇಸ್ಡ್ ಅಪ್ರೋಚ್ ಮೂಲಕ ನಿರಂತರವಾಗಿ ಗುರಿಯನ್ನು ತಲುಪುತಿದ್ದೇವೆ ಎಂದು ತಾರಾ ಅನೂರಾಧಾ ಹೇಳಿದರು. 

ಕರ್ನಾಟಕ ಅರಣ್ಯ ಅಭಿವೃದ್ದಿ ನಿಗಮಕ್ಕೆ ಸೇರಿದ ಅರಣ್ಯ ಪ್ರದೇಶ ಒತ್ತುವರಿ ಆಗದಂತೆ ರಕ್ಷಿಸುವುದು ಮತ್ತು ಒತ್ತುವರಿ ತಡೆಗಟ್ಟುವುದರ ಕುರಿತು ಹಲವಾರು ಸಭೆಗಳನ್ನು ನಡೆಸಿದ್ದು, ಈ ಬಗ್ಗೆ ಸರಕಾರಕ್ಕೆ ವರದಿಯನ್ನು ಸಲ್ಲಿಸಿದ್ದೇವೆ. ಇದೇ ವೇಳೆ ನೀಲಗಿರಿ ನಿಷೇಧದ ಬಗ್ಗೆ ಮರು ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ನೂತನ ಯೋಜನೆಗಳ ಅನುಷ್ಠಾನಕ್ಕೆ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

ವಿಧಾನಸೌಧದಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮ: 1971ರಲ್ಲಿ ಪ್ರಾರಂಭವಾದ ಅರಣ್ಯ ಅಭಿವೃದ್ದಿ ನಿಗಮವು ತನ್ನ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದೆ. ಈ ನಿಟ್ಟಿನಲ್ಲಿ ಜೂ.25ರಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಸುವರ್ಣ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಮಧ್ಯಾಹ್ನದ ಕಾರ್ಯಕ್ರಮದಲ್ಲಿ ರಾಜ್ಯಪಾಲರು ಪಾಲ್ಗೊಳ್ಳಲಿದ್ದಾರೆ. ಕಳೆದ 50 ವರ್ಷಗಳಲ್ಲಿ ನಿಗಮ ನಡೆದುಬಂದ ಹಾದಿಯ ಬಗ್ಗೆ ಛಾಯಾಚಿತ್ರ ಪ್ರದರ್ಶನ ಏರ್ಪಡಿಸಲಾಗಿದೆ ಎಂದು ತಾರಾಅನೂರಾಧಾ ತಿಳಿಸಿದರು. 

ನಿಗಮದ ವ್ಯವಸ್ಥಾಪಕ ನಿರ್ದೇಶಕಿ ರಾಧಾದೇವಿ ಮಾತನಾಡಿ, ಕಳೆದ ಕೆಲವು ತಿಂಗಳಿನಿಂದ ನಮ್ಮ ರಬ್ಬರ್ ಹಾಗೂ ಮೆದುಮರಗಳಿಗೆ ಒಳ್ಳೆಯ ದರ ಲಭಿಸುತ್ತಿದ್ದು ನಿಗಮ ಪ್ರತಿ ತಿಂಗಳು ಸುಮಾರು 2 ಕೋಟಿ ರೂಪಾಯಿಗಳಷ್ಟು ಲಾಭಗಳಿಸುತ್ತಿದೆ. ಈ ಮುಖೇನ ರಾಜ್ಯ ಸರಕಾರದಿಂದ ಯಾವುದೇ ಅನುದಾನ ಪಡೆಯದೇ, ಬಾಹ್ಯ ಆರ್ಥಿಕ ಬೆಂಬಲವೂ ಇಲ್ಲದೆ ಸತತವಾಗಿ ಲಾಭಗಳಿಸುವ ಸರಕಾರಿ ಸ್ವಾಮ್ಯದ ಉದ್ದಿಮೆಗಳ ಸಾಲಿನಲ್ಲಿ ಮುಂಚೂಣಿಯಲ್ಲಿದೆ ಎಂದರು.

ನಿಗಮವು ಉತ್ಪಾದಿಸುವ ಮೆದುಮರ ಮತ್ತು ರಬ್ಬರ್ ಕಚ್ಚಾ ಸಾಮಗ್ರಿಗಳಿಂದ ಉತ್ಪನ್ನಗಳನ್ನು ತಯಾರಿಸುವ ಹೊಸ ಯೋಜನೆಗಳನ್ನು ಹಾಕಿಕೊಂಡಿದ್ದೇವೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ರಾಜ್ಯ ಅರಣ್ಯ ಅಭಿವೃದ್ದಿ ನಿಗಮದ ಸಾಕ್ಷಚಿತ್ರದ ಟ್ರೈಲರ್‍ನ್ನು ಬಿಡುಗಡೆಗೊಳಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X