ಬೆಳೆ ವಿಮೆ ತಿರಸ್ಕೃತ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಆಹ್ವಾನ
ಉಡುಪಿ : ಕೃಷಿ ಇಲಾಖೆಯ ವತಿಯಿಂದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ೨೦೧೯ರ ಮುಂಗಾರು ಹಂಗಾಮಿನಲ್ಲಿ ಬೆಳೆ ಸುಮೀಕ್ಷೆ ದತ್ತಾಂಶದೊಂದಿಗೆ ತಾಳೆಯಾಗದ ಪ್ರಸ್ತಾವನೆಗಳನ್ನು ತಾಲೂಕು ಮಟ್ಟದ ಅಧಿಕಾರಿಗಳು ಪರಿಶೀಲಿಸಿದ ನಂತರ ಅಂತಿಮವಾಗಿ ವಿಮಾ ಸಂಸ್ಥೆಯವರು ವಿಮೆ ನೋಂದಾಯಿಸಿದ ಬೆಳೆಗೂ ಹಾಗೂ ಬೆಳೆ ಸಮೀಕ್ಷಾ ವರದಿಗೂ ತಾಳೆಯಾಗದಿರುವ ಹಿನ್ನೆಲೆಯಲ್ಲಿ ತಿರಸ್ಕರಿಸಿದ್ದಾರೆ.
ಈ ತಿರಸ್ಕೃತ ಪ್ರಕರಣಗಳ ಪಟ್ಟಿಯನ್ನು ಉಡುಪಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಕೋಟ, ಬ್ರಹ್ಮಾವರ ಹಾಗೂ ಕಾಪು ರೈತ ಸಂಪರ್ಕ ಕೇಂದ್ರ ಮತ್ತು ಸಂಬಂಧಪಟ್ಟ ಗ್ರಾಮಪಂಚಾಯತ್ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಪೂರಕ ದಾಖಲೆಗಳೊಂದಿಗೆ ೧೫ ದಿನಗಳ ಒಳಗೆ ಸಮೀಪದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಉಡುಪಿ ಇವರಿಗೆ ಲಿಖಿತ ರೂಪದಲ್ಲಿ ಸಲ್ಲಿಸಬಹುದು ಎಂದು ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story