Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನನ್ನ ಸರಕಾರ ತೆಗೆದಂತೆ ಮಹಾರಾಷ್ಟ್ರ...

ನನ್ನ ಸರಕಾರ ತೆಗೆದಂತೆ ಮಹಾರಾಷ್ಟ್ರ ಸರಕಾರ ತೆಗೆಯಲು ಹೊರಟಿದ್ದಾರೆ: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ24 Jun 2022 8:31 PM IST
share
ನನ್ನ ಸರಕಾರ ತೆಗೆದಂತೆ ಮಹಾರಾಷ್ಟ್ರ ಸರಕಾರ ತೆಗೆಯಲು ಹೊರಟಿದ್ದಾರೆ: ಕುಮಾರಸ್ವಾಮಿ

ಬೆಂಗಳೂರು, ಜೂ. 24: ‘ಕಾಂಗ್ರೆಸ್ ಬಗ್ಗೆ ಆಗಲಿ ಅಥವಾ ರಾಹುಲ್ ಗಾಂಧಿ ಅವರ ಬಗ್ಗೆ ಆಗಲಿ ನನಗೆ ಸಾಫ್ಟ್ ಕಾರ್ನರ್ ಇಲ್ಲ. ನಾನು ಇದ್ದ ವಿಷಯವನ್ನೇ ಹೇಳಿದ್ದೇನೆ. ಕಾಂಗ್ರೆಸ್ ನಾಯಕರ ರೀತಿ ನಾನು ಬೀದಿಯಲ್ಲಿ ಬ್ಯಾರಿಕೇಡ್ ಹತ್ತಿ ಡಾನ್ಸ್ ಮಾಡುವುದಕ್ಕೆ ಹೋಗಬೇಕೇ?' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಶುಕ್ರವಾರ ಚನ್ನಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ‘ಇರುವ ವಾಸ್ತವಾಂಶ ಹೇಳಿದ್ದೇನೆ. ಯಾವುದೇ ರೀತಿ ಯಾರ ಜತೆ ರಾಜಿಯಾಗಲಿ ಅಥವಾ ಅನುಕಂಪದ ಪ್ರಶ್ನೆ ಇಲ್ಲ. ಈ ವ್ಯವಸ್ಥೆಯನ್ನು ಬಿಜೆಪಿ ಸರಕಾರ ಯಾವ ರೀತಿ ದುರುಪಯೋಗ ಪಡಿಸಿಕೊಳ್ಳುತ್ತಿದೆ. ಸ್ವಾಯುತ್ತ ಸಂಸ್ಥೆಗಳು ಯಾವ ರೀತಿ ಕೆಲಸ ಮಾಡ್ತಿವೆ ಎಂಬುದನ್ನು ಚರ್ಚೆ ಮಾಡಿದ್ದೇನೆ. ರಾಹುಲ್ ಗಾಂಧಿ ಅಥವಾ ಕಾಂಗ್ರೆಸ್ ನಾಯಕರನ್ನು ಒಲೈಸಿಕೊಳ್ಳಲು ಹೇಳಿಲ್ಲ' ಎಂದು ಸ್ಪಷ್ಟಪಡಿಸಿದರು.

‘ನಾನು ಈ ಹೇಳಿಕೆ ಕೊಟ್ಟಾಗ ಒಬ್ಬ ಬಿಜೆಪಿ ಸಂಸದರೆ ನನಗೆ ಫೋನ್ ಮಾಡಿ ಶಹಬ್ಬಾಸ್ ಗಿರಿ ಹೇಳಿದರು. ಈ ವ್ಯವಸ್ಥೆ ಬಗ್ಗೆ ಸರಿಯಾಗಿ ಮಾತನಾಡಿದ್ದೀರಿ ಎಂದು ಹೇಳಿದರು. ನಮ್ಮ ಕುತ್ತಿಗೆ ಕುಯ್ದಿದ್ದೆ ಕಾಂಗ್ರೆಸ್‍ನವರು. ನಾನು ಯಾಕೆ ಅವರ ಬಗ್ಗೆ ಸಾಫ್ಟ್ ಕಾರ್ನರ್ ತೋರಿಸಲಿ. ಕಾಂಗ್ರೆಸ್ ಹಾಗೂ ಬಿಜೆಪಿ ಬಗ್ಗೆ ಸಾಫ್ಟ್ ಕಾರ್ನರ್ ಆಗುವ ಪ್ರಶ್ನೆಯೆ ಇಲ್ಲ ಎಂದು ಕುಮಾರಸ್ವಾಮಿ ಗುಡುಗಿದರು.

‘ರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷಗಳ ನಡವಳಿಕೆ ನೋಡಿದ್ದೇನೆ. ಇದನ್ನೇ ಮುಂದಿಟ್ಟುಕೊಂಡು ಮುಂದಿನ ಚುನಾವಣೆಯಲ್ಲಿ ಜನರಿಗೆ ಮನದಟ್ಟು ಮಾಡುವ ಕೆಲಸ ಮಾಡುತ್ತೇವೆ. ಎರಡು ರಾಷ್ಟ್ರೀಯ ಪಕ್ಷಗಳ ಕುತಂತ್ರದ ಬಗ್ಗೆ ಅರಿವು ಮೂಡಿಸುತ್ತೇವೆ. ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಿ ಎಂದು ಜನರ ಮುಂದೆ ಹೋಗುತ್ತೇವೆ' ಎಂದು ಅವರು ಹೇಳಿದರು.

ಇದು ಬಿಜೆಪಿಯದ್ದೇ ಆಟ: ‘ಮಹಾರಾಷ್ಟ್ರದಲ್ಲಿ ಸರಕಾರ ತೆಗೆಯಲು ಬಿಜೆಪಿ ಹೊರಟಿದೆ. ನಮಗೆ ಏನು ಗೊತ್ತಿಲ್ಲ ಎಂಬಂತೆ ಬಿಜೆಪಿಯವರು ಇದ್ದಾರೆ. ಆದರೆ, ಇಡೀ ದೇಶಕ್ಕೆ ಇದು ಬಿಜೆಪಿಯ ಆಟವೆಂದು ಗೊತ್ತು. ಬಿಜೆಪಿ ಸರಕಾರವಿರುವ ರಾಜ್ಯಗಳಿಗೆ ಶಾಸಕರನ್ನು ಕರೆದೊಯ್ದಿದ್ದಾರೆ. ಶಾಸಕರನ್ನ ಹೈಜಾಕ್ ಮಾಡಿಕೊಂಡು ಅಲ್ಲಿಟ್ಟುಕೊಂಡಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದಾಗ, ನಮ್ಮ ಶಾಸಕರನ್ನು ಮುಂಬೈಗೆ ಕರೆದೊಯ್ದಿದ್ದರು. ಇದು ನನ್ನ ಸರಕಾರ ತೆಗೆದಂತೆ ಅಲ್ಲಿನ ಸರಕಾರ ತೆಗೆಯುತ್ತಿದ್ದಾರೆ ಎಂದು ಅವರು ಕಿಡಿಕಾರಿದರು.

‘ಶಾಸಕರು ಒಂದು ಪಕ್ಷ ಬಿಟ್ಟು ಇನ್ನೊಂದು ಪಕ್ಷಕ್ಕೆ ಹೋಗಬೇಕಾದರೆ ಯಾವ ಆಮಿಷಗಳು ಇರುತ್ತವೆ. ಈ ವಿಷಯ ಪ್ರತಿಯೊಬ್ಬರಿಗೂ ಗೊತ್ತಿದೆ. ಆದರೆ ಕಾರಣಗಳು ಬೇರೆ ಬೇರೆ ಕೊಡುತ್ತಾರೆ. ಚುನಾಯಿತ ಸರಕಾರ ಅಸ್ಥಿರಗೊಳಿಸುವಂತದ್ದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಯಾರ ಸರಕಾರ ಇರಬಾರದೆಂದು ಬಿಜೆಪಿಯವರು ತಿಳಿದುಕೊಂಡಿದ್ದಾರೆ. ಕೇಂದ್ರ ಸರಕಾರ ಒಳಗೊಂಡಂತೆ ಎಲ್ಲ ರಾಜ್ಯದಲ್ಲಿ ಬಿಜೆಪಿ ಸರಕಾರಗಳೇ ಇರಬೇಕು. ಅವರ ಈ ರೀತಿಯ ಕುತಂತ್ರದ ಬೆಳವಣಿಗೆಗಳು ಏನಿದೆ. ಮುಂದಿನ ದಿನಗಳಲ್ಲಿ ಅವರಿಗೆ ಇದೇ ತಿರುಗುಬಾಣ ಆಗಲಿದೆ' ಎಂದು ಎಚ್‍ಡಿಕೆ ಅಭಿಪ್ರಾಯಪಟ್ಟರು.

‘ಶಿವಸೇನೆಯ ನಾಯಕ ಏನೇ ಹೇಳಲಿ, ಏಕನಾಥ್ ಶಿಂಧೆ ಶಿವಸೇನೆ ನಮ್ಮದೆಂದು ಕ್ಲೈಮ್ ಮಾಡಬಹುದು. ಸಂಖ್ಯಾಬಲದ ಆಧಾರದ ಮೇಲೆ ಅವರು ಕ್ಲೈಮ್ ಮಾಡಬಹುದು. ಚುನಾವಣೆಗೆ ಹೋದಾಗ ಬೇರೆಯದ್ದೇ ನಡೆಯುತ್ತದೆ. ಶಿವಸೇನೆಯ ಸಂಸ್ಥಾಪಕರು ಯಾರು? ಯಾರು ಪಕ್ಷಕ್ಕೆ ದುಡಿದಿದ್ದಾರೆ? ಯಾರು ಪಕ್ಷವನ್ನು ಕಟ್ಟಿದ್ದಾರೆ. ಕಾರ್ಯಕರ್ತರು ಯಾರ ಜೊತೆಗೆ ನಿಲ್ಲುತ್ತಾರೆ ಎನ್ನುವುದು ಗೊತ್ತಾಗುತ್ತದೆ. ಇವೆಲ್ಲದರ ಮೇಲೆ ಮುಂದಿನ ಬೆಳವಣಿಗೆ ತೀರ್ಮಾನವಾಗುತ್ತದೆ' ಎಂದು ಕುಮಾರಸ್ವಾಮಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X