ಹಿರಿಯಡ್ಕ; ಕಾಂಗ್ರೆಸ್ ಮುಖಂಡನ ಮನೆ ಮೇಲೆ ದುಷ್ಕರ್ಮಿಗಳಿಂದ ಬಾಟಲಿ ಎಸೆತ: ದೂರು

ಹಿರಿಯಡ್ಕ : ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಲೀಪ್ ಹೆಗ್ಡೆ ಎಂಬವರ ಮನೆ ಮೇಲೆ ದುಷ್ಕರ್ಮಿಗಳು ಜೂ.24ರಂದು ತಡ ರಾತ್ರಿ ವೇಳೆ ಬಿಯರ್ ಬಾಟಲಿ ಎಸೆದಿರುವ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ರಾಜಕೀಯ ದುರುದ್ದೇಶಕ್ಕಾಗಿ ದುಷ್ಕರ್ಮಿಗಳು ಮನೆಯ ಮೇಲೆ ಬಿಯರ್ ಬಾಟಲಿ ಎಸೆದು ಬೆದರಿಕೆ ಹಾಕಲಾಗಿದೆ ಎಂದು ದಿಲೀಪ್ ಹೆಗ್ಡೆ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಹಿರಿಯಡ್ಕ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.
ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂತೋಷ್ ಕುಲಾಲ್, ಕುಕ್ಕೆಹಳ್ಳಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಸುಧಾಕರ ಶೆಟ್ಟಿ, ಮುಖಂಡರಾದ ಕಿರಣ್ ಹೆಗ್ಡೆ ಸ್ಥಳಕ್ಕೆ ಆಗಮಿಸಿದ್ದು, ದುಷ್ಕರ್ಮಿ ಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಜರಗಿಸುವಂತೆ ಒತ್ತಾಯಿಸಿದ್ದಾರೆ.