Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೈಸೂರು ಅಭಿವೃದ್ಧಿ ಬಗ್ಗೆ ಜೂ.29ರಂದು...

ಮೈಸೂರು ಅಭಿವೃದ್ಧಿ ಬಗ್ಗೆ ಜೂ.29ರಂದು ಸಂಸದರ ಕಚೇರಿಯಲ್ಲೇ ಬಹಿರಂಗ ಚರ್ಚೆಗೆ ಸಿದ್ಧ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ವಾರ್ತಾಭಾರತಿವಾರ್ತಾಭಾರತಿ25 Jun 2022 7:15 PM IST
share
ಮೈಸೂರು ಅಭಿವೃದ್ಧಿ ಬಗ್ಗೆ ಜೂ.29ರಂದು ಸಂಸದರ ಕಚೇರಿಯಲ್ಲೇ ಬಹಿರಂಗ ಚರ್ಚೆಗೆ ಸಿದ್ಧ: ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್

ಮೈಸೂರು,ಜೂ.25: ಮೈಸೂರು ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆಗೆ ಕಾಂಗ್ರೆಸ್ ಸಿದ್ದವಿದ್ದು, ಜೂ.29 ರಂದು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಲ್ಲೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರತಿ ಸವಾಲು ಹಾಕಿದ್ದಾರೆ.

ನಗರದ ಕಾಂಗ್ರೆಸ್ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಜೂನ್ 29ರ ಮಧ್ಯಾಹ್ನ 12 ಗಂಟೆಗೆ  ಸಂಸದರ ಕಚೇರಿಯಲ್ಲಿ ಚರ್ಚೆಗೆ ಸಿದ್ಧ. ಸಂಸದರ ಜಲದರ್ಶಿನಿಯ ಕಚೇರಿ ಬಳಿ ದಾಖಲೆ ಸಮೇತ ಹಾಜರಾಗುವೆ. ಕಾಂಗ್ರೆಸ್ ಪಕ್ಷದ ರಾಜ್ಯ ವಕ್ತಾರರಾಗಿ ಪ್ರತಾಪ್ ಸಿಂಹ ಎದುರು ಚರ್ಚೆಗೆ ಬರುತ್ತಿದ್ದೇನೆ. ಎರಡನೇ ಬಾರಿಗೆ ಆಹ್ವಾನ ನೀಡುತ್ತಿದ್ದೂ ಈ ಬಾರಿ ಪಲಾಯನ ಮಾಡಬೇಡಿ. ಜನರಿಗೆ ಸತ್ಯ ಹೇಳಲು ಯಾರಾದರೇನು.? ಚರ್ಚೆಗೆ ಬನ್ನಿ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಮಣ್ ತೀಕ್ಷ್ಣವಾಗಿ ತಿರುಗೇಟು ನೀಡಿದರು.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ 10  ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ. ಮುಂದಿನ ವಿಧಾನಸಭೆ ಚುನಾವಣೆವರೆಗೂ ಎಸ್ ಟಿ ಸೋಮಶೇಖರ್ ಅವರೇ ಉಸ್ತುವಾರಿ ಸಚಿವರಾಗಿ ಮುಂದುವರಿಯಲಿ. ಎಸ್. ಟಿ ಸೋಮಶೇಖರ್ ಮೈಸೂರಿಗೆ ಬರುತ್ತಿರುವುದು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವ ಸಲುವಾಗಿ.ಬಿಜೆಪಿ ಸ್ಥಳೀಯ ಮುಖಂಡರ ಜೊತೆ ಸೇರಿಕೊಂಡು ಎಸ್. ಟಿ ಸೋಮಶೇಖರ್ ರಿಯಲ್ ಎಸ್ಟೇಟ್ ವ್ಯವಹಾರ ಮಾಡುತ್ತಿದ್ದಾರೆ. ಅವರ ನೇತೃತ್ವದಲ್ಲಿ ವಿಧಾನ ಪರಿಷತ್ ಚುನಾವಣೆಗಳಲ್ಲಿ ಬಿಜೆಪಿ ಸೋಲು ಕಂಡಿದೆ. ಹಾಗಾಗಿ ಅವರನ್ನೇ ಮುಂದುವರಿಸಿದರೆ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅನುಕೂಲವಾಗಲಿದೆ ಎಂದು ವಾಗ್ದಾಳಿ ನಡೆಸಿದರು.

ಗ್ರಾಮ  ಪಂಚಾಯತ್ ನಲ್ಲೂ ಗೆಲ್ಲದ ವ್ಯಕ್ತಿ ಮುಂದೆ ಚರ್ಚೆ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಎಂ. ಲಕ್ಷ್ಮಣ್,  ಗ್ರಾಮ ಪಂಚಾಯತ್ ನಲ್ಲಿ ಪಕ್ಷದ ಚಿಹ್ನೆ ಇಲ್ಲದೆ ಇಬ್ಬರು ಸ್ಪರ್ಧಿಸೋಣ ಬನ್ನಿ. ವೈಯಕ್ತಿಕ ವರ್ಚಸ್ಸಿನಿಂದ ಗ್ರಾ. ಪಂ ನಿಂದ ಆಯ್ಕೆಯಾಗಿ ಸಾಬೀತು ಪಡಿಸುತ್ತೇನೆ. ಮೋದಿ ಹೆಸರಿಲ್ಲದೆ ನೀವು ಗ್ರಾ.ಪಂ ಸದಸ್ಯನೂ ಆಗಲೂ ಸಾಧ್ಯವಿಲ್ಲ. ಮುಂದಿನ ಲೋಕಸಭಾ ಚುನಾವಣೆಗೆ ನೀವು ಎಲ್ಲಿರುತ್ತಿರಿ ಗೊತ್ತಾಗಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಪಕ್ಷದ ಭಾರತ್ ಜೋಡೊ ಆಭಿಯಾನದಿಂದ ಬಿಜೆಪಿ ವಿಚಲಿತವಾಗಿದೆ. ಭಾರತ್ ಜೋಡೊ ಅಭಿಯಾನವನ್ನು ದೇಶದ ಉದ್ದಗಲಕ್ಕೂ ಕಾಂಗ್ರೆಸ್ ಆರು ತಿಂಗಳ ಕಾಲ ನಡೆಸಲಿದೆ. ಇದರಿಂದ ಬಿಜೆಪಿ ಆತಂಕಕ್ಕೊಳಗಾಗಿದೆ. ಇದೇ ಕಾರಣದಿಂದ ಕಾಂಗ್ರೆಸ್ ನ ಹಿರಿಯ ನಾಯಕರಿಗೆ ಇಡಿ ದಾಳಿ, ವಿಚಾರಣೆ ಮುಖಾಂತರ ತೊಂದರೆ ಕೊಡುತ್ತಿದೆ ಎಂದರು.

ಪ್ರಧಾನಿ ಮೋದಿ ಅವರ ರಾಜ್ಯ ಪ್ರವಾಸದ ಬಗ್ಗೆ ಟೀಕಿಸಿದ ಎಂ. ಲಕ್ಷ್ಮಣ್,  ಮೈಸೂರಿನಲ್ಲಿ ಪಿಕ್ನಿಕ್ ಮುಗಿಸಿ ಹೊರಟ ಮೋದಿ ಸಾರ್ವಜನಿಕರ ತೆರಿಗೆ ಹಣ ಖರ್ಚು ಮಾಡಿದ್ದಾರೆ. ಮೈಸೂರಿನಲ್ಲಿ 19 ಕೋಟಿ, ಬೆಂಗಳೂರಿನಲ್ಲಿ 34ಕೋಟಿ ಮೋದಿಗಾಗಿ ಆದ ಖರ್ಚು.ಬಂದು ಹೋದ ಮೋದಿಯಿಂದ ರಾಜ್ಯಕ್ಕೆ ಏನು ಕೊಡುಗೆ ಇಲ್ಲ. 20 ನಿಮಿಷ ಯೋಗ ಮಾಡಿ ಪ್ರಚಾರ ಮಾಡಿಕೊಂಡು ಹೋದರು. ಈ ಬಾರಿ ಮೈಸೂರಿನಲ್ಲಿ ಚುನಾವಣೆ ಇಲ್ಲದಿದ್ದರಿಂದ ಯಾವ  ಅನುದಾನವನ್ನು ನೀಡಲಿಲ್ಲ. ಒಟ್ಟಾರೆ ರಾಜ್ಯದಲ್ಲಿ ಮೋದಿ ಪಿಕ್ನಿಕ್ ಮುಗಿಸಿ ಹೋಗಿದ್ದಾರೆ ಎಂದು ಲೇವಡಿ ಮಾಡಿದರು.

ನರೇಂದ್ರ ಮೋದಿ ಭೇಟಿಯಿಂದ ಮೈಸೂರು ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯಾಗಿದೆ ಎಂಬ ಬಿಜೆಪಿ ನಾಯಕರ ಹೇಳಿಕೆ ಕುರಿತು ವ್ಯಂಗ್ಯವಾಡಿದ ಎಂ.ಲಕ್ಷ್ಮಣ್, ಯೋಗಕ್ಕೆ ಸಾವಿರಾರು ವರ್ಷಗಳ ಇತಿಹಾಸವಿದೆ. ಅಂದಿನ ಮೈಸೂರು ಅರಸರ ಕಾಲದಿಂದಲೂ ಯೋಗ ಇದೆ. ಪ್ರವಾಸಿಗರು ಭೇಟಿ ನೀಡುವ ತಾಣಗಳ ಪೈಕಿ ಇಡೀ ಏಷ್ಯಾದಲ್ಲೇ ಮೈಸೂರು 4ನೇ ಸ್ಥಾನದಲ್ಲಿದೆ ಎಂದು ನ್ಯೂಯಾರ್ಕ್ ಟೈಮ್ಸ್ ವರದಿ ಮಾಡಿದೆ. ನ್ಯೂಯಾರ್ಕ್ ಟೈಮ್ಸ್ 2002 ರ ಮಾರ್ಚ್‍ನಲ್ಲಿ  ವರದಿ ಪ್ರಕಟಿಸಿರುವ ಮುಕ್ಕಾಲು ಪುಟದಲ್ಲಿ ಅಂದಿನ ಮೈಸೂರು ಮಹರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ 1903ರಲ್ಲೆ ಕೈಗೊಂಡ ಆಡಳಿತದ ಬಗ್ಗೆ ಬರೆಯಲಾಗಿದೆ. ಆದರೂ ಬಿಜೆಪಿಯವರು ಮೋದಿ ಭೇಟಿಯಿಂದಲೇ ಮೈಸೂರು ವಿಶ್ವ ಮಟ್ಟದಲ್ಲಿ ಖ್ಯಾತಿ ಗಳಿಸಿದೆ ಎಂದು ಹೇಳಿರುವುದು ಹಾಸ್ಯಾಸ್ಪದವಾಗಿದೆ. ಮೋದಿ ಭೇಟಿಯಿಂದ ಮೈಸೂರಿಗೆ ಯಾವುದೇ ಪ್ರಯೋಜನವಾಗಿಲ್ಲ. ಮೋದಿ ಮೈಸೂರು ಭೇಟಿ ವಿಚಾರದಲ್ಲೂ ಬಿಜೆಪಿ ನಾಯಕರ ನಡುವೆ ಕ್ರೆಡಿಟ್ ವಾರ್ ನಡೆಯಿತು ಎಂದು ಟೀಕಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X