2.5 ಕೋಟಿ ರೂ.ವೆಚ್ಚದ ಚೇರ್ಕಾಡಿ-ಬೆನಗಲ್ ರಸ್ತೆ ಕಾಮಗಾರಿಗೆ ಚಾಲನೆ

ಬ್ರಹ್ಮಾವರ, ಜೂ.೨೫: ಉಡುಪಿ ವಿಧಾನಸಭಾ ಕ್ಷೇತ್ರದ ಬ್ರಹ್ಮಾವರ ತಾಲೂಕಿನ ಚೇರ್ಕಾಡಿ ಗ್ರಾಪಂ ವ್ಯಾಪ್ತಿಯ ಕನ್ನಾರು- ಬೆನಗಲ್ ರಸ್ತೆ ಅಭಿವೃದ್ಧಿಗೆ ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ೨.೫೦ ಕೋಟಿ ರೂ. ಮಂಜೂರಾಗಿದ್ದು, ಶನಿವಾರ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಶಾಸಕ ಕೆ.ರಘುಪತಿ ಭಟ್ ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಚೇರ್ಕಾಡಿ ಗ್ರಾಪಂ ಅಧ್ಯಕ್ಷೆ ರೇಖಾ ಭಟ್, ಉಪಾಧ್ಯಕ್ಷ ಕಿಟ್ಟಪ್ಪ ಅಮೀನ್, ಗ್ರಾಮಾಂತರ ಬಿಜೆಪಿ ಅಧ್ಯಕ್ಷೆ ವೀಣಾ ನಾಯ್ಕ್, ಪಕ್ಷದ ಮುಖಂಡ ರಾದ ಧನಂಜಯ್ ಅಮೀನ್, ಚೇರ್ಕಾಡಿ ಗ್ರಾಪಂನ ಮಾಜಿ ಅಧ್ಯಕ್ಷ ಹರೀಶ್ ಶೆಟ್ಟಿ, ಕಮಲಾಕ್ಷ ಹೆಬ್ಬಾರ್ ಹಾಗೂ ಗ್ರಾಪಂನ ಸದಸ್ಯರು, ಪಕ್ಷದ ಹಿರಿಯರು, ಪ್ರಮುಖರು, ಕಾರ್ಯಕರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.
Next Story