Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಚಿವ ಅಶೋಕ್ ಅವ್ಯವಹಾರಕ್ಕೆ...

ಸಚಿವ ಅಶೋಕ್ ಅವ್ಯವಹಾರಕ್ಕೆ ಜಿಲ್ಲಾಧಿಕಾರಿ ನೇಮಕ: ಜಿಲ್ಲಾಧಿಕಾರಿ ಜೆ.ಮಂಜುನಾಥ್ ಬಂಧನಕ್ಕೆ ಆಪ್ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ26 Jun 2022 12:02 AM IST
share
ಸಚಿವ ಅಶೋಕ್ ಅವ್ಯವಹಾರಕ್ಕೆ ಜಿಲ್ಲಾಧಿಕಾರಿ ನೇಮಕ: ಜಿಲ್ಲಾಧಿಕಾರಿ ಜೆ.ಮಂಜುನಾಥ್ ಬಂಧನಕ್ಕೆ ಆಪ್ ಒತ್ತಾಯ

ಬೆಂಗಳೂರು, ಜೂ.25: ಬಿಜೆಪಿ ಸರಕಾರದ ಪ್ರಭಾವಿ ಸಚಿವ ಆರ್. ಅಶೋಕ್ ತಮ್ಮ ಅವ್ಯವಹಾರವನ್ನು ನಡೆಸಲು ಜೆ. ಮಂಜುನಾಥ್ ಅವರನ್ನು ಉದ್ದೇಶಪೂರ್ವಕವಾಗಿ ಜಿಲ್ಲಾಧಿಕಾರಿಯಾಗಿ ನೇಮಿಸಿಕೊಂಡಿದ್ದಾರೆ. ಪರಿಣಾಮವಾಗಿ ಎಸಿಬಿ ತನಿಖೆಯಿಂದ ಭೂ ವಿವಾದ ಪ್ರಕರಣದಲ್ಲಿ ಜೆ.ಮಂಜುನಾಥ್ ಅವರು ಆರೋಪಿಯಾಗಿ ಸಿಕ್ಕಿಬಿದ್ದಿದ್ದಾರೆ. ಹಾಗಾಗಿ ಭ್ರಷ್ಟ ಜಿಲ್ಲಾಧಿಕಾರಿ ಜೆ. ಮಂಜುನಾಥ್ ಅವರನ್ನು ಅಮಾನತ್ತು ಮಾಡಿ, ಬಂಧಿಸಬೇಕು ಎಂದು ಎಎಪಿ ಆಗ್ರಹಿಸಿದೆ.

ಶನಿವಾರ ಪ್ರೆಸ್‍ಕ್ಲಬ್‍ನಲ್ಲಿ ಮಾತನಾಡಿದ ಎಎಪಿ ರಾಜ್ಯ ವಕ್ತಾರ ಹಾಗೂ ಮಾಜಿ ಕೆಎಎಸ್ ಅಧಿಕಾರಿ ಕೆ.ಮಥಾಯಿ, “ಆನೇಕಲ್ ತಾಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನಿನ ವ್ಯಾಜ್ಯಕ್ಕೆ ಸಂಬಂಧಿಸಿ ಅರ್ಜಿದಾರರ ಪರ ತೀರ್ಪು ನೀಡಲು ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು 15 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟು, ಮುಂಗಡವಾಗಿ 5 ಲಕ್ಷ ಪಡೆದಿರುವುದು ಎಸಿಬಿ ದಾಳಿಯಿಂದ ಸಾಬೀತಾಗಿದೆ. ಈ ಪ್ರಕರಣದಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮೂರನೇ ಆರೋಪಿಯೆಂದು ಎಸಿಬಿಯು ವರದಿಯಲ್ಲಿ ಸ್ಪಷ್ಟವಾಗಿ ಹೇಳಿದೆ” ಎಂದು ತಿಳಿಸಿದರು.

“ಜಿಲ್ಲಾಧಿಕಾರಿ ಮಂಜುನಾಥ್ ಅವರು ಈ ಪ್ರಕರಣ ಮಾತ್ರವಲ್ಲದೇ, ಈ ಹಿಂದಿನ ಅನೇಕ ಪ್ರಕರಣಗಳಲ್ಲಿ ಆರೋಪಿಯಾಗಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಅವರು ಅವ್ಯವಹಾರ ಮಾಡಲೆಂದೇ ಭ್ರಷ್ಟ ಅಧಿಕಾರಿಯನ್ನು ಜಿಲ್ಲಾಧಿಕಾರಿಯಾಗಿ ನೇಮಿಸಿಕೊಂಡಿದ್ದಾರೆ. ಭ್ರಷ್ಟಾಚಾರ ಸಂಬಂಧ ಎಸಿಬಿ ನೀಡಿರುವ ವರದಿ ಕುರಿತು ಆರ್.ಅಶೋಕ್ ಪ್ರತಿಕ್ರಿಯಿಸಬೇಕು. ಮಂಜುನಾಥ್ ವಿರುದ್ಧದ ಎಲ್ಲ ಆರೋಪಗಳ ಕುರಿತು ಸಮಗ್ರ ತನಿಖೆಯಾಗಬೇಕು” ಎಂದು ಒತ್ತಾಯಿಸಿದರು.

ಮಿತಿಮೀರಿದ ಭ್ರಷ್ಟಾಚಾರ

ಬಿಜೆಪಿ ಆಡಳಿತದಲ್ಲಿ ಭ್ರಷ್ಟಾಚಾರವು ಮಿತಿಮೀರಿದೆ. ಸಚಿವರು ಹಾಗೂ ಶಾಸಕರುಗಳು ಭ್ರಷ್ಟರಾಗಿರುವುದರಿಂದ ಅಧಿಕಾರಿಗಳನ್ನು ಪ್ರಶ್ನೆ ಮಾಡುವ ನೈತಿಕತೆಯನ್ನು ಅವರು ಕಳೆದುಕೊಂಡಿದ್ದಾರೆ. ಇದರಿಂದಾಗಿ ಜನಸಾಮಾನ್ಯರು ತೊಂದರೆ ಅನುಭವಿಸುವಂತಾಗಿದ್ದು, ಸಣ್ಣ ಕೆಲಸಕ್ಕೂ ಲಕ್ಷಗಟ್ಟಲೆ ಲಂಚ ನೀಡಬೇಕಾಗಿದೆ. ಜಿಲ್ಲಾಧಿಕಾರಿ ಕಚೇರಿಗಳಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದ್ದು, ಸಹಿಸಿಕೊಳ್ಳುವ ಬದಲು ಎಸಿಬಿಗೆ ದೂರು ನೀಡಿದ ಅಜಂ ಪಾಷಾ ಅವರ ನಡೆ ಶ್ಲಾಘನೀಯ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X