Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯದಲ್ಲಿ ಮುಸ್ಲಿಮರ ವಿರುದ್ಧ ಸಂವಿಧಾನ...

ರಾಜ್ಯದಲ್ಲಿ ಮುಸ್ಲಿಮರ ವಿರುದ್ಧ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿವೆ: ಅನ್ವರ್ ಮಾಣಿಪ್ಪಾಡಿ

ವಾರ್ತಾಭಾರತಿವಾರ್ತಾಭಾರತಿ27 Jun 2022 3:21 PM IST
share
ರಾಜ್ಯದಲ್ಲಿ ಮುಸ್ಲಿಮರ ವಿರುದ್ಧ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿವೆ: ಅನ್ವರ್ ಮಾಣಿಪ್ಪಾಡಿ

ಮಂಗಳೂರು, ಜೂ.27: ಸಂವಿಧಾನದ ಈ ದೇಶದ ಪವಿತ್ರ ಗ್ರಂಥವಾಗಿದ್ದು, ರಾಜ್ಯದಲ್ಲಿ ಮುಸ್ಲಿಮ್ ಸಮುದಾಯದ ವಿರುದ್ಧ ಸಂವಿಧಾನ ವಿರೋಧಿ ಕೃತ್ಯಗಳು ನಡೆಯುತ್ತಿವೆ. ಇದರಿಂದ ಬೇಸರವಾಗಿದೆ ಎಂದು ಬಿಜೆಪಿ ನಾಯಕ ಹಾಗು ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸೌಹಾರ್ದದಿಂದ ಒಗ್ಗಟ್ಟಿನಿಂದ ಇದ್ದ ನಾಡಿನಲ್ಲಿ ಕೆಲ ಸಮಯದಿಂದ ಸಂವಿಧಾನ ವಿರೋಧಿ, ಸಮುದಾಯದ ವಿರುದ್ಧ ದ್ವೇಷ ತುಂಬಿದ ಕೃತ್ಯಗಳು ನಡೆಯುತ್ತಿದ್ದು, ಇದನ್ನು ಸಹಿಸಲು ಸಾಧ್ಯವಿಲ್ಲ ಎಂದರು.

ಪ್ರಧಾನಿ ಮೋದಿಯವರು ಸಬ್‌ ಕಾ ಸಾತ್ ಸಬ್‌ ಕಾ ವಿಕಾಸ್ ಧ್ಯೇಯದ ಆಡಳಿತವನ್ನು ಜಾರಿಗೊಳಿಸಲು ರಾಜ್ಯದಲ್ಲಿ ಸಾಧ್ಯವಾಗುತ್ತಿಲ್ಲ. ಪ್ರಧಾನಿ ಮೋದಿ ಮೇಲೆ ವಿಶ್ವಾಸವಿದೆ. ಈ ವಿಷಯದ ಬಗ್ಗೆ ಅವರ ಗಮನಕ್ಕೂ ತರುವ ಪ್ರಯತ್ನ ಮಾಡಿದ್ದೇನೆ. ಆದರೆ ಸ್ಪಂದನ ದೊರಕಿಲ್ಲ ಎಂದು ಮಾಣಿಪ್ಪಾಡಿ ಹೇಳಿದರು.

ವಕ್ಫ್ ಹಗರಣಗಳ ಕುರಿತಂತೆ ಕಳೆದ 10 ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದೇನೆ. ಹೈಕೋರ್ಟ್, ಸುಪ್ರೀಂ ಕೋರ್ಟ್ ಕೂಡಾ ವರದಿಗೆ ಜಯ ದೊರಕಿದೆ. ಇದನ್ನು ಸಾರ್ವಜನಿಕಗೊಳಿಸಬೇಕೆಂಬ ಬೇಡಿಕೆ ಈಡೇರಿಲ್ಲ. ಈ ಬಗ್ಗೆ ಹಿಂದಿನ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರಕ್ಕೂ ಮನವಿ ಮಾಡಿದ್ದೆ. ಆದರೆ ಯಡಿಯೂರಪ್ಪರ ಪುತ್ರ ನನ್ನನ್ನು ಕಚೇರಿಗೆ ಬರಲು ಹೇಳಿ ಬ್ರೋಕರ್ ರೀತಿಯಲ್ಲಿ ವರ್ತಿಸಿದ್ದ ಬಗ್ಗೆ ನಾನು ವಿರೋಧಿಸಿದ್ದು ಎಲ್ಲರಿಗೂ ತಿಳಿದ ವಿಚಾರ. ಮುಖ್ಯಮಂತ್ರಿ ಬೊಮ್ಮಾಯಿ ಸರಕಾರಕ್ಕೂ ಅವರಿಗೂ ಪತ್ರ ಬರೆದು ದಾಖಲೆಗಳ ಸಹಿತ ವಿವರ ನೀಡಿದ್ದೇನೆ. ಆದರೆ ಈ ಸರಕಾರವೂ ಯಾವುದೇ ಕ್ರಮ ವಹಿಸಿಲ್ಲ ಎಂದು ದೂರಿದರು.

ಈ ನಡುವೆ ಕೋವಿಡ್ ಕಾರಣದಿಂದ ಬಂದ್ ಆಗಿದ್ದ ಯಲಹಂಕದ ಮಸೀದಿಯೊಂದನ್ನು ತೆರೆಯಲು ಬಿಡದೆ ಅಲ್ಲಿನ ಪೊಲೀಸರು ಉದ್ಧಟತನ ತೋರಿಸಿದ್ದಾರೆ. ಇದಲ್ಲದೆ ರಾಜ್ಯದ ಹಲವೆಡೆ ಮುಸ್ಲಿಮರ ಸಾಂವಿಧಾನಿಕ ಹಕ್ಕುಗಳನ್ನು ಕಸಿಯುವ, ಹತ್ತಿಕ್ಕುವ ಪ್ರಯತ್ನ ನಡೆಸುತ್ತಿರುವಾಗ ಅದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ ಎಂದು ಅವರು ಹೇಳಿದರು.

ವಕ್ಫ್ ಹಗರಣಗಳ ವರದಿಯನ್ನು ಸಾರ್ವಜನಿಕಗೊಳಿಸಬೇಕು. ನಾನು ಮಾಡಿರುವ ಯಾವುದೇ ಆರೋಪದಲ್ಲಿ, ವರದಿಯಲ್ಲಿ ಸುಳ್ಳು, ತಪ್ಪಾಗಿದ್ದರೂ ನಾನು ಖಡ್ಗದಡಿ ತಲೆ ಇರಿಸಲು ಸಿದ್ಧ ಎಂದವರು ಹೇಳಿದರು.

ಸರಕಾರದ ಆಫರ್‌ಗಳನ್ನು ತಿರಸ್ಕರಿಸಿರುವೆ

ಐದು ತಿಂಗಳಿನಿಂದ ಸಾಕಷ್ಟು ಆಫರ್‌ಗಳು ರಾಜ್ಯ ಸರಕಾರದ ಕಡೆಯಿಂದ ಬಂದಿದೆ. ನಾನು ಎಲ್ಲವನ್ನೂ ತಿರಸ್ಕರಿಸಿದ್ದೇನೆ. ಹಾಗಾಗಿ ನಾನು ಯಾವುದೇ ರೀತಿಯ ಒತ್ತಡ, ಆಮಿಷದಿಂದ ಈ ರೀತಿಯಾಗಿ ಬಹಿರಂಗವಾಗಿ ಮಾತನಾಡುತ್ತಿಲ್ಲ. ನಾನು ಸತ್ಯವನ್ನಷ್ಟೇ ಹೇಳುತ್ತಿದ್ದೇನೆ. ಇದೀಗ ನನಗೆ ನೀಡಿರುವ ಗನ್‌ಮ್ಯಾನ್, ಇತರ ಎಲ್ಲಾ ಸೌಲಭ್ಯಗಳನ್ನು ವಾಪಸ್ ಮಾಡುತ್ತಿದ್ದೇನೆ ಎಂದು ಅನ್ವರ್ ಮಾಣಿಪ್ಪಾಡಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X