ಹೂಡೆಯ ಸಾಲಿಹಾತ್ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ

ಉಡುಪಿ : ತೋನ್ಸೆ ಹೂಡೆಯ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಾಗೂ ಬೋರ್ಡ್ ಆಫ್ ಇಸ್ಲಾಮಿಕ್ ಪಬ್ಲಿಕ್ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ ಇತ್ತೀಚಿಗೆ ಜರಗಿತು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ನಿವೃತ್ತ ಕಂದಾಯ ಅಧಿಕಾರಿ ಕಂಡಾಳ ರಘುರಾಮ್ ಶೆಟ್ಟಿ ಮಾತನಾಡಿ, ಶಿಕ್ಷಣ ಕೇವಲ ವೃತ್ತಿಗಳಿಸುವ ಉದ್ದೇಶ ಹೊಂದಿರದೆ ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ಅಳವಡಿಸಿಕೊಂಡು ಸುಸಂಸ್ಕೃತ ಸಮಾಜದ ನಿರ್ಮಾಣದಲ್ಲಿ ಪ್ರಮುಖ ಪಾತ್ರವಹಿಸಬೇಕು ಬೇಕು ಎಂದು ಹೇಳಿದರು.
ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಕಾಪು ಜಮಾತ್ ಇಸ್ಲಾಮಿ ಹಿಂದ್ ವರ್ತುಲದ ಅಧ್ಯಕ್ಷ ಅನ್ವರಾಲಿ ಕಾಪು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಇಕೋ ಕ್ಲಬ್, ಶಾಲಾ ವಿದ್ಯಾರ್ಥಿ ಸಂಘ ಹಾಗೂ ಇತರೇ ಕ್ಲಬ್‌ಗಳನ್ನು ಉದ್ಘಾಟಿಸ ಲಾಯಿತು. ಶಾಲಾ ಆಡಳಿತಧಿಕಾರಿ ಅಸ್ಲಾಮ್ ಹೈಕಾಡಿ ಉಪಸ್ಥಿತರಿದ್ದರು.
ಶಾಲಾ ಆಡಳಿತ ಮಂಡಲಿಯ ಉಪಾಧ್ಯಕ್ಷ ಇದ್ರೀಸ್ ಹೂಡೆ ಅಧ್ಯಕ್ಷತೆ ವಹಿಸಿದ್ದರು. ಶಾಲಾ ಮುಖ್ಯೋಪಾಧ್ಯಾ ಯಿನಿ ಸುನಂದ ಸ್ವಾಗತಿಸಿದರು. ವಿದ್ಯಾರ್ಥಿ ಮೆಹವೀಶ್ ಪ್ರಾರ್ಥನೆಗೈದರು. ಶಿಕ್ಷಕಿ ಫಹಿನಾ ವಂದಿಸಿದರು. ಆಯಿಷಾ ಫಿದಾ ಕಾರ್ಯಕ್ರಮ ನಿರೂಪಿಸಿದರು.