Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬೆಂಗಳೂರನ್ನು ನಗರವಾಗಿಸಿದ ಕೀರ್ತಿ...

ಬೆಂಗಳೂರನ್ನು ನಗರವಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ: ಸಿಇಓ ಪ್ರಸನ್ನ ಎಚ್

ವಾರ್ತಾಭಾರತಿವಾರ್ತಾಭಾರತಿ27 Jun 2022 8:36 PM IST
share
ಬೆಂಗಳೂರನ್ನು ನಗರವಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ: ಸಿಇಓ ಪ್ರಸನ್ನ ಎಚ್

ಉಡುಪಿ : ಮಣ್ಣಿನ ಕೋಟೆಯಿಂದ ಕಟ್ಟಿದ ಹಳ್ಳಿ ಪ್ರದೇಶವಾಗಿದ್ದ ಬೆಂದಕಾಳೂರನ್ನು ನಗರವಾಗಿ ನಿರ್ಮಿಸಿದ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರಿಂದ, ಬೆಂಗಳೂರು ನಗರ ಇಂದು ದೇಶ-ದೇಶಿಗರಿಗೆ ಚಿರಪರಿಚಿತವಾಗಿದೆ ಎಂದು ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್. ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

ಕೆಂಪೇಗೌಡರು ಶೌರ್ಯ, ಸಾಹಸ, ದೂರದೃಷ್ಟಿಗೆ ಹೆಸರಾಗಿದ್ದು, ವಿಜಯನಗರ ಅರಸರ ಒಪ್ಪಿಗೆಯೊಂದಿಗೆ ಯಲಹಂಕದಲ್ಲಿ ಜಾತ್ಯಾತೀತ ನಗರವನ್ನು ನಿರ್ಮಿಸಿದರು. ಬೆಂಗಳೂರು ನಗರವನ್ನು ಜಾತಿ ಆಧಾರಿತವನ್ನಾಗಿ ಮಾಡದೇ ವೃತ್ತಿ ಆಧಾರಿತ ಭೂಮಿಯನ್ನಾಗಿ ಮಾಡಿದರು. ಒಂದು ಕಾಲದಲ್ಲಿ ಕಾಡಿನಿಂದ ಕೂಡಿದ್ದ ಬೆಂಗಳೂರು ಪ್ರದೇಶಕ್ಕೆ ಕೋಟೆ ನಿರ್ಮಿಸಿ, ನಗರವನ್ನಾಗಿ ಮಾಡಿ, ಅದರ ಅಭಿವೃದ್ಧಿಗೆ ಕಾರಣರಾದ ನಾಡಪ್ರಭುವಿಗೆ ಗೌರವ ನೀಡುವ ಕೆಲಸವನ್ನು ಸರಕಾರ ಮಾಡುತ್ತಿದೆ ಎಂದರು.

ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಮಾತನಾಡಿ, ಕೆಂಪೇಗೌಡರನ್ನು ಜನತೆ ಇಂದಿಗೂ ನೆನೆಯಲು ಕಾರಣ ಅವರ ವ್ಯಕ್ತಿತ್ವ ಹಾಗೂ ಅಸಾಧಾರಣ ಸಾಧನೆಯಾಗಿದೆ. ಅಂದಿನಿಂದ ಇಂದಿನವರೆಗೂ ಬೆಂಗಳೂರು ಹಂತಹಂತವಾಗಿ ಅಭಿವೃದ್ಧಿಯತ್ತ ಸಾಗುತ್ತಾ ಬಂದಿದ್ದು, ಕೆಂಪೇಗೌಡರ ಕುಟುಂಬವೂ ಕೂಡ ತ್ಯಾಗ ಬಲಿದಾನಕ್ಕೆ ಹೆಸರುವಾಸಿಯಾಗಿತ್ತು ಎಂದರು.

ಕೆಂಪೇಗೌಡರ ಜೀವನಚರಿತ್ರೆ ಮತ್ತು ಅವರ ಸಾಧನೆಗಳ ಕುರಿತು ಮಾತ ನಾಡಿದ ಜಿಲ್ಲಾ ಒಕ್ಕಲಿಗ ಸಮುದಾಯದ ಅಧ್ಯಕ್ಷ ಸಿದ್ಧರಾಜು, ತನ್ನನ್ನು ಬೇಟೆಯಾಡಲು ಬಂದಂತಹ ನಾಯಿಯನ್ನು ಮೊಲವೊಂದು ಧೈರ್ಯದಿಂದ ಅಟ್ಟಿಸಿಕೊಂಡು ಹೋಗಿ ಎದುರಿಸುತ್ತಿದ್ದ ದೃಶ್ಯ ಕೆಂಪೇಗೌಡರನ್ನು ವೀರಭೂಮಿ ಕಟ್ಟಲು ಪ್ರೇರೇಪಿಸಿತು ಎಂದು ಇತಿಹಾಸ ತಿಳಿಸುತ್ತದೆ ಎಂದರು.

ನಾಲ್ಕೂ ದಿಕ್ಕಿನಲ್ಲೂ ಗಡಿ ರೇಖೆಯನ್ನು ಗುರುತಿಸಲು ಎತ್ತುಗಳಿಗೆ ನೇಗಿಲನ್ನು ಕಟ್ಟಿ ಎತ್ತುಗಳು ನಿಲ್ಲುವ ಪ್ರದೇಶವನ್ನು ಗಡಿ ಪ್ರದೇಶ ಎಂದು ನಿರ್ಧರಿಸಿ, ಅದರ ಒಳಗೆ ಬೆಂಗಳೂರು ನಗರವನ್ನು ನಿರ್ಮಿಸಿದರು ಎಂಬ ಪ್ರತೀತಿ ಇವೆ. ವೃತ್ತಿಗೆ ಪ್ರಾಶಸ್ತ್ಯ ನೀಡಿ, ಕೆಂಪೇಗೌಡರು ಕೋಟೆಯನ್ನು ನಿರ್ಮಿಸಿದರು. ಬೆಂಗಳೂರು ನಿರ್ಮಾಣದಲ್ಲಿ ಕೆಂಪೇಗೌಡರ ಸೊಸೆ ಲಕ್ಷ್ಮೀದೇವಿಯ ಪಾತ್ರ ಕೂಡ ಅವಿಸ್ಮರಣೀಯವಾದುದು ಎಂದರು.

ಕಾರ್ಯಕ್ರಮದಲ್ಲಿ ಉಡುಪಿ ತಹಶೀಲ್ದಾರ್ ಅರ್ಚನಾ ಭಟ್, ಒಕ್ಕಲಿಗ ಸಮುದಾಯದ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X