Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಾರತದಲ್ಲಿ ಜಿ-20 ಶೃಂಗ ಸಭೆ 2023;...

ಭಾರತದಲ್ಲಿ ಜಿ-20 ಶೃಂಗ ಸಭೆ 2023; ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಆಯೋಜನೆ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ27 Jun 2022 10:13 PM IST
share
ಭಾರತದಲ್ಲಿ ಜಿ-20 ಶೃಂಗ ಸಭೆ 2023; ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಆಯೋಜನೆ: ಸಿಎಂ ಬೊಮ್ಮಾಯಿ

ಬೆಂಗಳೂರು, ಜೂ. 27: ಪ್ರಧಾನಿ ಮೋದಿಯವರ ಸಮರ್ಥ ನಾಯಕತ್ವದಲ್ಲಿ ಭಾರತದಲ್ಲಿ ಜಿ-20 ಶೃಂಗಸಭೆ 2023 ಆಯೋಜಿಸಲಾಗಿದ್ದು, ಇಡೀ ವಿಶ್ವಕ್ಕೆ ಭಾರತವನ್ನು ಪ್ರಬಲವಾಗಿ ಬಿಂಬಿಸಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

‘ಮೋದಿ @ 20: ಡ್ರೀಮ್ಸ್ ಮೀಟ್ ಡೆಲಿವರಿ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 2023ರ ಜಿ 20 ಸಭೆಯನ್ನು ಭಾರತ ದೇಶ ಆಯೋಜಿಸಲಿದೆ. ವಿಶ್ವದ 20 ಪ್ರಮುಖ ರಾಷ್ಟ್ರಗಳ ಸಮ್ಮೇಳನ ಈ ಬಾರಿ ಭಾರತದಲ್ಲಿ ನಡೆಯಲಿದ್ದು, ಬೆಂಗಳೂರಿನಲ್ಲಿಯೂ ಜಿ-20ಯ 9 ಸಭೆಗಳು ನಡೆಯಲಿದೆ ಎಂದು ತಿಳಿಸಿದರು.

ಚಿರಸ್ಮರಣೀಯರು: ಸದಾಕಾಲ ಜನರ ಹೃದಯದಲ್ಲಿ ಸ್ಥಾನ ಗಳಿಸಲು ಜನನಾಯಕನಿಂದ ಮಾತ್ರ ಸಾಧ್ಯ. 130 ಕೋಟಿ ಜನಸಂಖ್ಯೆ, ಸಾವಿರಾರು ಜಾತಿಗಳು, ಹಲವಾರು ಸಂಸ್ಕøತಿಗಳ, ನೂರಾರು ಭಾಷೆಗಳಿರುವ ಭಾರತ ದೇಶದಲ್ಲಿ ಎಲ್ಲರ ಮಧ್ಯೆ ಭರವಸೆ ಹುಟ್ಟಿಸಿ, ಅದಕ್ಕೆ ತಕ್ಕಂತೆ ಕೆಲಸ ಮಾಡಿರುವುದು ಸುಲಭದ ಕೆಲಸವಲ್ಲ. ಮೋದಿಜಿಯವರು ಭಾರತವನ್ನು ಕಠಿಣ ನಿರ್ಣಯ, ಕರಾರುವಾಕ್ಕು ಕಾರ್ಯಕ್ರಮಗಳು, ದಿಟ್ಟತನದ ನಾಯಕತ್ವ, ಬಡವರಿಗಾಗಿ ವಿಶೇಷ ಕಾರ್ಯಕ್ರಮ, ಆರ್ಥಿಕ, ಸಾಮಾಜಿಕ ಬದಲಾವಣೆಯನ್ನು ತರುವ ಕೆಲಸವನ್ನು   ಮಾಡಿದ್ದಾರೆ. 

ಕೇಂದ್ರ ಸರಕಾರದಲ್ಲಿ ಸೆಮಿಕಂಡಕ್ಟರ್ ಉತ್ಪಾದನೆಗೆ ವಿಶೇಷ ನೀತಿಯನ್ನು ರೂಪಿಸಿ 66 ಸಾವಿರ ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಪರಿಸರ ಸಂರಕ್ಷಣೆ ಹಾಗೂ ನವೀಕರಿಸಬಹುದಾದ ಇಂಧನಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಎಥನಾಲ್ ಉತ್ಪಾದಿಸಲಾಗುತ್ತಿದೆ. ಮಾಲಿನ್ಯ ತಗ್ಗುವುದಲ್ಲದೇ, ಇಂಧನ ಆಮದನ್ನು ನಿಯಂತ್ರಿಸಬಹುದಾಗಿದೆ. ಜನಸಂಖ್ಯೆಯೇ ಭಾರತ ದೇಶಕ್ಕೆ ಶಾಪ ಎಂದು ಪರಿಗಣಿಸಲಾಗುತ್ತಿತ್ತೋ, ಮೋದಿಯವರು ಅದನ್ನು ವರವಾಗಿ ಪರಿಣಮಿಸಿದರು. ಶೇ. 46ರಷ್ಟು ಯುವಜನತೆ ಭಾರತ ದೇಶದ ಶಕ್ತಿಯಾಗಿ ಪರಿಚಯಿಸಿದರು ಎಂದರು. ಹೀಗೆ ದೂರದೃಷ್ಟಿಯ ಚಿಂತನೆ ಪ್ರಧಾನಿ ಮೋದಿಯವರದ್ದು ಎಂದರು.

ಕನ್ನಡಾನುವಾದ ಜನರಿಗೆ ತಲುಪಿಸಲಾಗುವುದು: ಮೋದಿಯವರ ವಿಚಾರಗಳು ಮೋದಿ @ 20 ಪುಸ್ತಕದಲ್ಲಿ ನಮೂದಿಸಲಾಗಿದೆ. ಸುಧಾಮೂರ್ತಿ, ಡಾ.ದೇವಿಶೆಟ್ಟಿ, ಕ್ರೀಡಾಪಟು ಪಿ.ವಿ.ಸಿಂಧೂ ಸೇರಿದಂತೆ ಹಲವಾರು ಸಾಧಕರು ಈ ಪುಸ್ತಕಕ್ಕೆ ಬರೆದಿದ್ದಾರೆ. ಕರ್ನಾಟಕದ ಬಗ್ಗೆ ವಿಶೇಷ ಆಸಕ್ತಿ ಹೊಂದಿರುವ ಪ್ರಧಾನಿ ಮೋದಿಯವರು ಕನ್ನಡ ನೆಲ, ಜಲ, ಉದ್ಯಮ, ಹೊಸ ತಂತ್ರಜ್ಞಾನ ಬಗೆಗೆ ಅಭಿಮಾನ ಹೊಂದಿದ್ದಾರೆ. ಅವರ ವಿಚಾರಧಾರೆಗಳನ್ನು ಕರ್ನಾಟಕದಲ್ಲಿ ಜನರಿಗೆ ತಲುಪಿಸುವ ಕೆಲಸ ಮಾಡಲಾಗುವುದು. ಅವರ ಪುಸ್ತಕವನ್ನು ಕನ್ನಡಕ್ಕೆ ಅನುವಾದಿಸಿ ರಾಜ್ಯದ್ಯಂತ ಹಂಚುವ ಕೆಲಸವನ್ನು ಮಾಡಲಾಗುವುದು ಎಂದರು.

ಭಾರತಕ್ಕೆ ವಿಶ್ವದಲ್ಲಿ ಅಗ್ರಮಾನ್ಯ ಸ್ಥಾನ: ಸಾರ್ವಜನಿಕ ಮೌಲ್ಯಗಳನ್ನು, ಆದರ್ಶಗಳನ್ನು ಸ್ಥಾಪನೆ ಮಾಡುವ ಮೂಲಕ ಮೋದಿಯವರು ದೇಶಕ್ಕೆ ಉತ್ತಮ ಚಾರಿತ್ರ್ಯವನ್ನು ನೀಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದಾರೆ. ಜನರ ಎಲ್ಲ ಭರವಸೆಗಳನ್ನು ಯಶಸ್ವಿಯಾಗಿ ಈಡೇರಿಸಿದ್ದಾರೆ. ಸಮರ್ಥ ನಾಯಕತ್ವ, ಮಾನವೀಯ ಆಡಳಿತ, ಮೌಲ್ಯಯುತ ರಾಜಕಾರಣ ನೀಡುತ್ತಿರುವ ಮೋದಿಯವರ ಅವಶ್ಯಕತೆ ಭಾರತ ದೇಶಕ್ಕಿದೆ. ಭಾರತ ಇಡೀ ವಿಶ್ವದಲ್ಲಿ ಅಗ್ರಮಾನ್ಯ ಸ್ಥಾನ ಪಡೆಯುವಂತಾಗಲು ಶ್ರಮ ವಹಿಸುತ್ತಿದ್ದಾರೆ. ಮೋದಿಯವರ ವಿಚಾರಧಾರೆಗಳನ್ನು, ಕಾರ್ಯಕ್ರಮಗಳನ್ನು ಒಪ್ಪಿ ಬೆಂಬಲಿಸುವ ಅವಶ್ಯಕತೆ ಇದೆ ಎಂದರು.

ನಿಜನಾಯಕ: ತನಗಾಗಿ ಬದುಕುವುದು ಸಹಜ, ಆದರೆ, ಇತರರಿಗೆ ಬದುಕುವುದು ದೊಡ್ಡ ಗುಣ. ಅಧಿಕಾರ ಬಂದಾಗ ದೇಶ, ನಾಡು, ಬಡವರ ಬಗ್ಗೆ ಚಿಂತೆ ಮಾಡುವವರು ನಿಜ ನಾಯಕ. ಅಧಿಕಾರಕ್ಕೆ ಬರುವ ಪೂರ್ವದಲ್ಲಿ ಹಾಗೂ ಬಂದ ನಂತರ ಮೋದಿಯವ ವಿಚಾರಧಾರೆ, ಆದರ್ಶ ಬದುಕು ಬದಲಾವಣೆಯಾಗಿಲ್ಲ. ಎಲ್ಲವೂ ಇದ್ದಾಗ, ಸರಳತೆ, ಸಾಮಾನ್ಯ ಮನುಷ್ಯನ ರೀತಿಯಲ್ಲಿ ಬದುಕುವುದು ಮುಖ್ಯ ಮತ್ತು ಅಧಿಕಾರದ ಬಲದಿಂದ ಇತತರಿಗೆ ಸಹಾಯ ಮಾಡುವ ಗುಣ ನಾಯಕನಿಗೆ ಅಗತ್ಯ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X