Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ;...

ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ; ಸರಕಾರದಿಂದ ಅಧಿಕೃತ ಆದೇಶ

ವಾರ್ತಾಭಾರತಿವಾರ್ತಾಭಾರತಿ27 Jun 2022 10:30 PM IST
share
ಕಾಶಿ ಯಾತ್ರೆಗೆ ಅಂತಿಮ ಮಾರ್ಗಸೂಚಿ; ಸರಕಾರದಿಂದ ಅಧಿಕೃತ ಆದೇಶ

ಬೆಂಗಳೂರು, ಜೂ.27: ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಯೋಜನೆ ಕಾಶಿ ಕಾರೀಡಾರ್ ಗೆ ರಾಜ್ಯದ ಜನರು ಭೇಟಿ ನೀಡುವುದನ್ನು  ಪ್ರೋತ್ಸಾಹಿಸುವ ಉದ್ದೇಶದಿಂದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಮುಜರಾಯಿ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆ ‘ಕಾಶಿ ಯಾತ್ರೆ’ಗೆ ಮಾರ್ಗಸೂಚಿಗಳನ್ನು ಅಂತಿಮಗೊಳಿಸಿ ಸರಕಾರದಿಂದ ಅಂತಿಮ ಆದೇಶ ಹೊರಡಿಸಲಾಗಿದೆ ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಭವ್ಯ ಕಾಶಿ–ದಿವ್ಯ ಕಾಶಿಯ ಭವ್ಯತೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಮುತುವರ್ಜಿಯಿಂದ ಅಭಿವೃದ್ದಿಗೊಳಿಸಲಾಗಿದೆ. ಈ ಭವ್ಯ ಕಾಶಿ ಯಾತ್ರೆ ಬಹಳಷ್ಟು ಜನರ ಜೀವನದ ಅಭಿಲಾಷೆಯಾಗಿದೆ. ಈ ಯಾತ್ರೆಯ ಅಭಿಲಾಷೆಯನ್ನು ಪೂರೈಸುವ ನಿಟ್ಟಿನಲ್ಲಿ ರಾಜ್ಯ ಸರಕಾರದಿಂದ ಯೋಜನೆಯನ್ನು ಪ್ರಾರಂಭಿಸಬೇಕು ಎನ್ನುವುದು ನನ್ನ ಗುರಿಯಾಗಿತ್ತು. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಕಾರಾತ್ಮಕವಾಗಿ ಸ್ಪಂದಿಸಿ ಆಯವ್ಯಯದಲ್ಲಿ ಘೋಷಣೆ ಮಾಡಿದ್ದರು ಎಂದು ಹೇಳಿದ್ದಾರೆ. 

ರಾಜ್ಯದ 30 ಸಾವಿರ ಕಾಶಿ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂಪಾಯಿಗಳಂತೆ ಸಹಾಯಧನ ನೀಡುವ ಯೋಜನೆಗೆ ಮಾರ್ಗಸೂಚಿಗಳನ್ನು ಇಂದು ಅಂತಿಮಗೊಳಿಸಿದ್ದು, ಸರಕಾರದಿಂದ ಅಧಿಕೃತವಾಗಿ ಆದೇಶ ಹೊರಡಿಸಲಾಗಿದೆ. 2022ರ ಎ.1ಕ್ಕೆ ಪೂರ್ವಾನ್ವಯವಾಗುವಂತೆ ಈ ಆದೇಶವನ್ನು ಹೊರಡಿಸಲಾಗಿದ್ದು, ಸೂಕ್ತ ದಾಖಲಾತಿಗಳೊಂದಿಗೆ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ಶಶಿಕಲಾ ಜೊಲ್ಲೆ ಮನವಿ ಮಾಡಿದ್ದಾರೆ.

ಮಾರ್ಗಸೂಚಿಯ ಅಂಶಗಳು: ಕರ್ನಾಟಕದಿಂದ ಕಾಶಿ ಯಾತ್ರೆ ಕೈಗೊಂಡ ಅರ್ಹ ಯಾತ್ರಾರ್ಥಿಗಳಿಗೆ ತಲಾ 5 ಸಾವಿರ ರೂ.ಗಳನ್ನು ಸಹಾಯ ಧನವಾಗಿ ನೀಡಲಾಗುವುದು. ಕರ್ನಾಟಕದ ಖಾಯಂ ನಿವಾಸಿಗಳು ಮಾತ್ರ ಈ ಧನ ಸಹಾಯ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಈ ಉದ್ದೇಶಕ್ಕಾಗಿ ಚುನಾವಣಾ ಆಯೋಗ ನೀಡಿರುವ ಗುರುತಿನ ಚೀಟಿ ಅಥವಾ ಆಧಾರ್ ಗುರುತಿನ ಚೀಟಿ ಅಥವಾ ರೇಷನ್ ಕಾರ್ಡ್ ಈ ಪೈಕಿ ಯಾವುದಾದರೂ ಒಂದು ದಾಖಲೆಯನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಅವರು ಹೇಳಿದ್ದಾರೆ. 

ಕರ್ನಾಟಕ ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳು ಆಯಾ ಆರ್ಥಿಕ ವರ್ಷದ ಮೊದಲ ದಿನಕ್ಕೆ ಅನ್ವಯಿಸುವಂತೆ ಎಪ್ರಿಲ್ 1ಕ್ಕೆ 18 ವರ್ಷಗಳ ಮೇಲ್ಪಟ್ಟವರಾಗಿರಬೇಕು, 18 ವಯಸ್ಸಿನ ಕೆಳಗಿನವರ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. 18 ವರ್ಷ ಮೇಲ್ಪಟ್ಟ ಯಾತ್ರಾರ್ಥಿಗಳು ವಯಸ್ಸಿಗೆ ಸಂಬಂಧಿಸಿದ ಸೂಕ್ತ ದಾಖಲೆಯನ್ನು ಹಾಜರುಪಡಿಸಬೇಕು. ಪ್ರಸಕ್ತ ಸಾಲಿನ ಎ.1ರಿಂದ ಜೂ.30ರವರೆಗೆ ಕಾಶಿ ಶ್ರೀ ವಿಶ್ವನಾಥ ಸ್ವಾಮಿಯ ದರ್ಶನಕ್ಕೆ ತೆರಳಿದ ಯಾತ್ರಾರ್ಥಿಗಳು ಸಂಬಂಧಿಸಿದ ದಾಖಲಾತಿ (ಕಾಶಿ ಶ್ರೀ ವಿಶ್ವನಾಥ ಸ್ವಾಮಿ ದೇವಾಲಯಕ್ಕೆ ತೆರಳಲು ಮುಂಗಡವಾಗಿ ಕಾಯ್ದಿರಿಸಿದ ಮತ್ತು ಹಿಂದಿರುಗಿದ ಬಗ್ಗೆ ಕಾಯ್ದಿರಿಸಿದ ಟಿಕೇಟ್, ಛಾಯಾಚಿತ್ರ, ಪೂಜಾ ರಶೀದಿ ಅಥವಾ ದೇವಾಲಯಕ್ಕೆ ತೆರಳಿ ಮರಳಿದ ಬಗ್ಗೆ ಯಾವುದಾದರೂ ಇತರೆ ದಾಖಲೆ)ಗಳನ್ನು ಖುದ್ದಾಗಿ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರ ಕಚೇರಿಗೆ ಸಲ್ಲಿಸಬೇಕು ಎಂದು ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಜು.1ರಿಂದ ಅನ್ವಯವಾಗುವಂತೆ ಯಾತ್ರಾರ್ಥಿಗಳು ಕಾಶಿ ಯಾತ್ರೆ ಕೈಗೊಂಡಿರುವ ಬಗ್ಗೆ ಸಂಬಂಧಿಸಿದ ದಾಖಲೆಗಳನ್ನು ವ್ಯವಸ್ಥಾಪಕರು, ಕರ್ನಾಟಕ ರಾಜ್ಯ ಛತ್ರ, ವಾರಣಾಸಿ ಇವರ ಕಚೇರಿಯಿಂದ ಬಯೋಮೆಟ್ರಿಕ್ ದೃಢೀಕರಣದೊಂದಿಗೆ, ಆನ್‍ಲೈನ್ ಅಥವಾ ಮುದ್ಧಾಂ/ನೋಂದಾಯಿತ ಅಂಚೆ ಮೂಲಕ, ಆಯುಕ್ತರು ಧಾರ್ಮಿಕ ದತ್ತಿ ಇಲಾಖೆ ಇವರ ಕಚೇರಿಗೆ ಸಲ್ಲಿಸಬೇಕು. ಒಂದು ವೇಳೆ ವಾರಣಾಸಿಯ ಕರ್ನಾಟಕ ರಾಜ್ಯ ಛತ್ರದ ವ್ಯವಸ್ಥಾಪಕರ ದೃಢೀಕರಣ ಇಲ್ಲದಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಯಾತ್ರಾರ್ಥಿಗಳು ಸಹಾಯಧನವನ್ನು ಒಂದು ಬಾರಿ ಪಡೆದ ನಂತರದಲ್ಲಿ, ಅದೇ ವ್ಯಕ್ತಿಗೆ ಎರಡನೇ ಬಾರಿ ಅನುದಾನ ನೀಡಲು ಪರಿಗಣಿಸಲಾಗುವುದಿಲ್ಲ. ಸರಕಾರದ ಸಹಾಯಧನಕ್ಕಾಗಿ ಅರ್ಜಿ ಸಲ್ಲಿಸುವ ಯಾತ್ರಾರ್ಥಿಗಳ ಬ್ಯಾಂಕ್ ಖಾತೆಯು ರಾಷ್ಟ್ರೀಕೃತ ಬ್ಯಾಂಕಿನ ಖಾತೆಯಾಗಿರಬೇಕು ಮತ್ತು ಕಡ್ಡಾಯವಾಗಿ ಆಧಾರ್ ಲಿಂಕ್ ಆಗಿರಬೇಕು. ಈ ಸಹಾಯಧನವನ್ನು ಯಾತ್ರೆಯನ್ನು ಪೂರ್ಣಗೊಳಿಸಿ ಸಂಬಂಧಿಸಿದ ದಾಖಲೆಗಳನ್ನು ನಿಗಧಿತ ನಮೂನೆ ಅರ್ಜಿಯನ್ನು ಭರ್ತಿ ಮಾಡಿ ಒದಗಿಸಿದ ನಂತರ ಆ ಅರ್ಜಿಗಳನ್ನು ಧಾರ್ಮಿಕ ದತ್ತಿ ಆಯುಕ್ತರು ಸ್ವೀಕರಿಸಿ, ಪರಿಶಿಲಿಸಿ ಅನುದಾನ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಶಶಿಕಲಾ ಜಿಲ್ಲೆ ತಿಳಿಸಿದ್ದಾರೆ.

ಈ ಯೋಜನೆಯ ಜೊತೆಯಲ್ಲಿ ‘ಭಾರತ್ ಗೌರವ್’ ಯೋಜನೆ ಅಡಿಯಲ್ಲಿ ಕಾಶಿ ಯಾತ್ರೆಗೆ ವಿಶೇಷ ರೈಲು 30 ಸಾವಿರ ಜನರಿಗೆ ತಲಾ 5 ಸಾವಿರದಂತೆ ಸಹಾಯಧನ ನೀಡುವ ಯೋಜನೆ ಅಲ್ಲದೆ, ಮತ್ತೊಂದು ವಿಶೇಷ ಯೋಜನೆಯನ್ನು ಮುಜರಾಯಿ ಇಲಾಖೆ ಅನುಷ್ಠಾನಗೊಳಿಸುತ್ತಿದೆ. ಕೇಂದ್ರ ಸರಕಾರದ ಭಾರತ ಗೌರವ ಯೋಜನೆಯ ಅಡಿಯಲ್ಲಿ ಮುಜರಾಯಿ ಇಲಾಖೆಯ ರೈಲ್ವೇ ಇಲಾಖೆಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದು, ಕಾಶಿಗೆ ವಿಶೇಷ ರೈಲಿನ ಕಾರ್ಯಾಚರಣೆ ಸದ್ಯದಲ್ಲೇ ಪ್ರಾರಂಭಿಸಲು ಸಿದ್ಧತೆಗಳನ್ನು ಭರದಿಂದ ಮಾಡಿಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಈಗಾಗಲೇ ರೈಲ್ವೇ ಇಲಾಖೆಯಲ್ಲಿ ನೊಂದಣಿ ಮಾಡಿಸಿದ್ದು ಇನ್ನು ಕೆಲವೇ ತಿಂಗಳುಗಳಲ್ಲಿ ಯೋಜನೆ ಕಾರ್ಯಗತಗೊಳ್ಳಲಿದೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X