Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರ್ಮಿಕರ ವಿಸ್ತೃತ ವಸತಿ ಸಮುಚ್ಚಯ...

ಕಾರ್ಮಿಕರ ವಿಸ್ತೃತ ವಸತಿ ಸಮುಚ್ಚಯ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ: ಸಚಿವ ಶಿವರಾಮ್ ಹೆಬ್ಬಾರ್

ವಾರ್ತಾಭಾರತಿವಾರ್ತಾಭಾರತಿ28 Jun 2022 4:14 PM IST
share
ಕಾರ್ಮಿಕರ ವಿಸ್ತೃತ ವಸತಿ ಸಮುಚ್ಚಯ ನಿರ್ಮಾಣಕ್ಕೆ ಹೆಚ್ಚುವರಿ ಅನುದಾನ: ಸಚಿವ ಶಿವರಾಮ್ ಹೆಬ್ಬಾರ್

ಶಿವಮೊಗ್ಗ ,ಜೂ.28 :ಶಿವಮೊಗ್ಗ ಸಮೀಪದ ಸಿದ್ಲೀಪುರ ಗ್ರಾಮದಲ್ಲಿ 10 ಎಕರೆ ಜಾಗದಲ್ಲಿ 10ಕೋಟಿ ರೂ.ಗಳ ವೆಚ್ಚದಲ್ಲಿ 500 ಮಂದಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನೊಳಗೊಂಡ ವಸತಿ ಸಮುಚ್ಛಯವನ್ನು ನರ್ಮಿಸಲು ಉದ್ದೇಶಿಸಲಾಗಿದ್ದು, ಹೆಚ್ಚುವರಿ 500 ಮಂದಿ ಕಾರ್ಮಿಕರು ಉಳಿದುಕೊಳ್ಳಲು ಅನುಕೂಲವಾಗುವಂತೆ ಕಟ್ಟಡ ನಿರ್ಮಿಸಲು ಅಗತ್ಯವಿರುವ ಅನುದಾನವನ್ನು ಮಂಜೂರು ಮಾಡಲಾಗುವುದು ಎಂದು ರಾಜ್ಯ ಕಾರ್ಮಿಕ ಸಚಿವ  ಶಿವರಾಮ್ ಹೆಬ್ಬಾರ್ ಅವರು ಹೇಳಿದ್ದಾರೆ. 

ಜಿಲ್ಲಾಡಳಿತ, ಕಾರ್ಮಿಕ ಇಲಾಖೆ ಮತ್ತು ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಇವರ ಸಂಯುಕ್ತಾಶ್ರಯದಲ್ಲಿ ಸಿದ್ಲೀಪುರದಲ್ಲಿ ಕಾರ್ಮಿಕರಿಗೆ ವಸತಿ ಸಮುಚ್ಛಯ ಕಾಮಗಾರಿಯ ಗುದ್ದಲಿ ಪೂಜೆ ಮತ್ತು ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಜಿಲ್ಲೆಯಲ್ಲಿ ಇರುವ ಒಟ್ಟು ಕಾರ್ಮಿಕ ಕುಟುಂಬಗಳಲ್ಲಿ ಮೊದಲ ಹಂತದಲ್ಲಿ ಶಿವಮೊಗ್ಗ ಮತ್ತು ಭದ್ರಾವತಿ ತಾಲೂಕಿನ 30000 ಕುಟುಂಬಗಳ ಸದಸ್ಯರಿಗೆ 20 ರೀತಿಯ ಕಾಯಿಲೆಗಳಿಗೆ ಸಂಬಂಧಿಸಿದಂತೆ ಉಚಿತ ಆರೋಗ್ಯ ತಪಾಸಣೆ ಮಾಡಿಸಲಾಗುತ್ತಿದೆ. ಅದಕ್ಕಾಗಿ ಪ್ರತಿ ವ್ಯಕ್ತಿಗೆ 11,600 ರೂ.ಗಳಂತೆ ಹಣ ಖರ್ಚು ಮಾಡಲಾಗುತ್ತಿದೆ. ಮುಂದಿನ ಕೆಲವೇ ದಿನಗಳಲ್ಲಿ 30000 ಮಂದಿಯ ಆರೋಗ್ಯ ತಪಾಸಣೆಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗುವುದು ಎಂದರು.

ಕಾರ್ಮಿಕರ ಮಕ್ಕಳಲ್ಲೂ ಎಲ್ಲಾ ರೀತಿಯ ಅರ್ಹತೆ ಇದ್ದು ಅವರಿಗೂ ಸಮಾಜದಲ್ಲಿ ಗುರುತಿಸುವ ಹಾಗೂ ಸ್ವಾಭಿಮಾನದಿಂದ ಜೀವಿಸುವ ಅವಕಾಶ ಒದಗಿಸುವ ನಿಟ್ಟಿನಲ್ಲಿ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಟಾನಗೊಳಿಸಲಾಗುತ್ತಿದೆ. ಕಾರ್ಮಿಕರ ಅರ್ಹ ಮತ್ತು ಆಸಕ್ತ ಮಕ್ಕಳನ್ನು ಪೈಲಟ್ ಆಗಿಸುವ ನಿಟ್ಟಿನಲ್ಲಿ 18ತಿಂಗಳ ತರಬೇತಿಯನ್ನು ಆಯೋಜಿಸಲಾಗಿದೆ. ಐ.ಎ.ಎಸ್ ಮತ್ತು ಕೆ.ಎ.ಎಸ್ ತರಬೇತಿಯೊಂದಿಗೆ ಶಿಷ್ಯ ವೇತನ ನೀಡಿ ಪ್ರೋತ್ಸಾಹಿಸುತ್ತಿರುವುದು ದೇಶದಲ್ಲೇ ಮೊದಲು ಎಂದರು.

ಈಗಾಗಲೇ ರಾಜ್ಯದಲ್ಲಿ 4,91,000 ಕಾರ್ಮಿಕ ಮಕ್ಕಳಿಗೆ 400 ಕೋ.ರೂ.ಗಳ ವಿದ್ಯಾರ್ಥಿವೇತನ ನೀಡಲಾಗಿದೆ. ಅಲ್ಲದೆ ರಾಜ್ಯದ ಒಟ್ಟು ಕಾರ್ಮಿಕರಲ್ಲಿ ಈವರೆಗೆ ಸುಮಾರು 70000 ಕಾರ್ಮಿಕರು ಇ-ಶ್ರಮ್ ಪೋರ್ಟಲ್ ನಲ್ಲಿ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಂಸದ ಬಿ.ವೈ.ರಾಘವೇಂದ್ರ ಅವರು ಮಾತನಾಡಿ, ರಾಜ್ಯದ ಅಸಂಘಟಿತ ಕಾರ್ಮಿಕರು, ಉದ್ಯೋಗ ಅರಸಿ ಊರಿಂದೂರಿಗೆ ತೆರಳುವ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸುವ ಹಾಗೂ ಸರ್ಕಾರಿ ಸೇವಾಸೌಲಭ್ಯಗಳಿಗಾಗಿ ಇ-ಶ್ರಮ್ ಕಾರ್ಡನ್ನು ವಿತರಿಸಲಾಗುತ್ತಿದೆ ಎಂದರು.

ಪ್ರಸ್ತುತ ಆಯೋಜಿಸಲಾಗಿರುವ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾಮಾನ್ಯದಿಂದ ಗಂಭೀರ ಸ್ವರೂಪದ ಕಾಯಿಲೆಗಳು ಗೋಚರಿಸಿದಲ್ಲಿ ಚಿಕಿತ್ಸೆಗಾಗಿ ಮಾಡಲಾದ ವೈದ್ಯಕೀಯ ವೆಚ್ಚವನ್ನು ಸರ್ಕಾರದ ವತಿಯಿಂದ ಮರುಪಾವತಿ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಕೊರೋನದಂತಹ ಸಂಕಷ್ಟದ ಸಂದರ್ಭದಲ್ಲಿ ರಾಜ್ಯ ಕಾರ್ಮಿಕ ಸಚಿವರು ಕೈಗೊಂಡ ಕ್ರಮ ಅಭಿನಂದನಾರ್ಹವಾದುದಾಗಿದೆ ಮಾತ್ರವಲ್ಲ ಸಕಾಲದಲ್ಲಿ ಅಸಂಖ್ಯಾತ ಕಾರ್ಮಿಕರಿಗೆ ಆಹಾರ ಪೊಟ್ಟಣಗಳನ್ನು ವಿತರಿಸಿದ ಕೀರ್ತಿ ಕಾರ್ಮಿಕ ಸಚಿವರಿಗೆ ಸಲ್ಲುತ್ತದೆ ಎಂದರು.

ಅಲ್ಲದೆ ಹೊರರಾಜ್ಯಗಳಿಂದ ರಾಜ್ಯದ ವಿವಿದೆಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದ  ಅಸಂಖ್ಯಾತ ಕಾರ್ಮಿಕರನ್ನು ಕೋವಿಡ್ ನಂತಹ ಸಂದರ್ಭದಲ್ಲಿ ಸುರಕ್ಷಿತವಾಗಿ ಊರಿಗೆ ಬಿಟ್ಟು ಬರಲಾಯಿತು ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಯುವ ಸಬಲೀಕರಣ ಮತ್ತು ಕ್ರೀಡಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ.ನಾರಾಯಣಗೌಡ ಅವರು ಮಾತನಾಡಿ, ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಗುತ್ತಿಗೆ ಪಡೆದ ಗುತ್ತಿಗೆದಾರರು ಸಕಾಲದಲ್ಲಿ ಗುಣಮಟ್ಟದ ಕಾಮಗಾರಿ ಮಾಡಿ ಹಸ್ತಾಂತರಿಸುವಂತೆ ಸೂಚಿಸಿದರು.

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಬಿ.ಅಶೋಕನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್ ಸದಸ್ಯರಾದ ರುದ್ರೇಗೌಡರು, ಡಿ.ಎಸ್.ಅರುಣ್, ಮೇಯರ್  ಸುನಿತಾ ಅಣ್ಣಪ್ಪ, ಎಸ್.ದತ್ತಾತ್ರಿ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಸಿ.ಇ.ಒ.  ಎಂ.ಎಲ್.ವೈಶಾಲಿ, ಜಿಲ್ಲಾ ಪೋಲಿಸ್ ವರಿ?ದಿಕಾರಿ ಲಕ್ಷ್ಮಿ ಪ್ರಸಾದ್, ಜಿಲ್ಲಾ ಕಾರ್ಮಿಕ ಅಧಿಕಾರಿ ಸತೀಶ್ ಮುಂತಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X