Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರಪತಿ ಚುನಾವಣೆ | ದ್ರೌಪದಿ...

ರಾಷ್ಟ್ರಪತಿ ಚುನಾವಣೆ | ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ: ಕುಮಾರಸ್ವಾಮಿ ಹೇಳಿದ್ದು ಹೀಗೆ...

ವಾರ್ತಾಭಾರತಿವಾರ್ತಾಭಾರತಿ29 Jun 2022 5:43 PM IST
share
ರಾಷ್ಟ್ರಪತಿ ಚುನಾವಣೆ | ದ್ರೌಪದಿ ಮುರ್ಮುಗೆ ಜೆಡಿಎಸ್ ಬೆಂಬಲ: ಕುಮಾರಸ್ವಾಮಿ ಹೇಳಿದ್ದು ಹೀಗೆ...

ಬೆಂಗಳೂರು: ರಾಷ್ಟ್ರಪತಿ ಆಯ್ಕೆ ಸಂಬಂಧ ಬಿಜೆಪಿ  ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಜೆಡಿಎಸ್ ಬೆಂಬಲ ನೀಡುವ ಇಂಗಿತವನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವ್ಯಕ್ತಪಡಿಸಿದರು.

ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ದ್ರೌಪದಿ ಮುರ್ಮು ಅವರಿಗೆ ಬಹುಮತದ ಸಂಖ್ಯೆ ಈಗಾಗಲೇ  ಸಿಕ್ಕದೆ. ನಮ್ಮ ಪಕ್ಷದ ಬೆಂಬಲ ಅವಶ್ಯಕತೆ ಇಲ್ಲ. ಆದರೂ ನಮ್ಮ ಬೆಂಬಲ ಕೇಳಿದ್ದಾರೆ. ಅದು ಅವರ ಔದಾರ್ಯ ಎಂದು ಬೆಂಬಲ ನೀಡುವ ಬಗ್ಗೆ ಪರೋಕ್ಷವಾಗಿ ಹೇಳಿದರು.

ನನ್ನ ಪ್ರಕಾರ ಮುರ್ಮು ಈಗಾಗಲೇ  ಗೆದ್ದಾಗಿದೆ.‌ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಮುರ್ಮು ಅವರು ಎರಡು ಬಾರಿ ದೂರವಾಣಿ ಕರೆ ಮಾಡಿ ಬೆಂಬಲಕ್ಕೆ ಮನವಿ ಮಾಡಿದ್ದಾರೆ. ಬೆಂಗಳೂರಿಗೆ ಬಂದು ಮನವಿ ಮಾಡಲು‌ ಅವರು ಸಮಯ ಕೋರಿದ್ದರು. ಅವರು ಖುದ್ದು ಬಂದು ಮನವಿ ಮಾಡುವ ಅವಶ್ಯಕತೆ ಇಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಚುನಾವಣಾ ಅಭ್ಯರ್ಥಿಯಾಗಿ ಮುರ್ಮು ಕಣದಲ್ಲಿದ್ದಾರೆ.  ಅವರ ಹಿನ್ನೆಲೆ ಏನು, ಜೀವನದಲ್ಲಿ ಎಷ್ಟು ಕಷ್ಟ ಅನುಭವಿಸಿದ್ದಾರೆ, ತಳಮಟ್ಟದ ಸಮುದಾಯದಿಂದ ಹೇಗೆ ಬೆಳೆದು ಬಂದಿದ್ದಾರೆ ಎಂಬುದನ್ನು ನಾನು ಅರಿತಿದ್ದೇನೆ. ಆದಿವಾಸಿ ಸಮುದಾಯದ ಮಹಿಳೆಯೊಬ್ಬರು ಇಷ್ಟು ದೊಡ್ಡ ಸಾಧನೆ ಮಾಡಿರುವುದು ಸ್ಪೂರ್ತಿದಾಯಕ ಎಂದು ಅವರು  ಹೇಳಿದರು.

ಇಲ್ಲಿ ಕಾಂಗ್ರೆಸ್, ಬಿಜೆಪಿ ಅನ್ನುವ ಪ್ರಶ್ನೆ ಅಲ್ಲ. ಬಿ ಟೀಂ ಅನ್ನುವ ಪ್ರಶ್ನೆಯೂ ರಾಷ್ಟ್ರಪತಿ ಚುನಾವಣೆಯಲ್ಲಿ ಬರಲ್ಲ. ನಾವು ತೆಗೆದುಕೊಂಡ ನಿರ್ಧಾರ ಬಿಜೆಪಿ ಬಿ ಟೀಂ ಅಂತ ಪ್ರಚಾರ ಮಾಡೋದು ಇದಕ್ಕೆ ಅನ್ವಯ ಆಗಲ್ಲ ಎಂದು ಅವರು ಪರೋಕ್ಷವಾಗಿ ಸಿದ್ದರಾಮಯ್ಯ ಮೇಲೆ ಚಾಟಿ ಬೀಸಿದರು.

ವಿದ್ಯುತ್ ದರ; ಮತ್ತೆ ಬಿಸಿ ಮುಟ್ಟಿಸಿದ ಮಾಜಿ ಸಿಎಂ

ರಾಜ್ಯದ ಜನರಿಗೆ ವಿದ್ಯುತ್ ಶಾಕ್ ವಿಚಾರಕ್ಕೆ ಪ್ರತಿಕ್ರಿಯಿಸಿದ ಹೆಚ್ ಡಿಕೆ, ಈಗ ಹೆಚ್ಚಳ ಮಾಡಿ ಚುನಾವಣೆ ಸಮಯದಲ್ಲಿ ‌ಕಡಿಮೆ ಮಾಡ್ತಾರೆ. ಎರಡು ರಾಷ್ಟ್ರೀಯ ಪಕ್ಷಗಳು ರಾಜ್ಯವನ್ನು ಹಾಳು ಮಾಡಿವೆ ಎಂದು ಕಿಡಿಕಾರಿದರು.

ವಿದ್ಯುತ್ ಸಚಿವರು  ಕೆಇಆರ್ ಸಿ ದರ ಹೆಚ್ಚಳ ಮಾಡುತ್ತದೆಂದು  ಹೇಳುತ್ತಾರೆ. ನಿವೃತ್ತ ಐಎಎಸ್ ಅಧಿಕಾರಿ ಗುರು ಚರಣ್ ಇಂಧನ ಇಲಾಖೆ ಪರಿಸ್ಥಿತಿ ಬಗ್ಗೆ ವರದಿ ಕೊಟ್ಟಿದ್ದಾರೆ. ಎಸ್ಕಾಂಗಳು ಸೇರಿ ಎಲ್ಲಾ ಕಂಪನಿಗಳ ಪರಿಸ್ಥಿತಿ ಬಗ್ಗೆ ವರದಿ ನೀಡಿದ್ದಾರೆ. ಈ ವರದಿಯಲ್ಲಿ 30-38 ಸಾವಿರ ಕೋಟಿಗಳು ಹಣ ಸರ್ಕಾರದಿಂದಲೇ ಕೆಇಆರ್ ಸಿ ಗೆ ಕೊಡಬೇಕು. ನಾನು ಕೂಡಾ ಸಿಎಂ ಆಗಿದ್ದಾಗ ಎಸ್ಕಾಂ ಸೇರಿದಂತೆ ಎಲ್ಲಾ ಕಂಪನಿಗಳಿಗೆ ನನ್ನ ಕಾಲದಲ್ಲಿ 13-14 ಸಾವಿರ ಕೋಟಿ ಮಾತ್ರ ಕೊಡಬೇಕಿತ್ತು. 3 ವರ್ಷಕ್ಕೆ ಬಿಜೆಪಿ-ಕಾಂಗ್ರೆಸ್ ಸರ್ಕಾರಗಳು 30 ಸಾವಿರ ಕೋಟಿ ಮಾಡಿವೆ. ಬುಕ್ಸ್ ಆಫ್ ಅಕೌಂಟ್ ನಲ್ಲಿ ಮಾತ್ರ ಲಾಭ ತೋರಿಸಿಕೊಂಡಿದ್ದಾರೆ ಎಂದು ಹೇಳಿದರು.

2016-17 ರಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಸೌರಶಕ್ತಿ ಇದ್ದಾಗ ಯುನಿಟ್ 9 ರೂ. ಮಾಡಿ ಖರೀದಿಗೆ ನಿಗದಿ ಮಾಡಿದಾಗ ನಾನೇ ವಿರೋಧ ಮಾಡಿದ್ದೆ. ಅವತ್ತಿನ ಅಧ್ಯಕ್ಷರು ಯಾಕೆ ಮಾಡಬಾರದೆಂದು ನನ್ನ ವಿರುದ್ದ ಮಾತನಾಡಿದ್ದರು. 2008 ರಿಂದ ಆಡಳಿತ ಮಾಡಿರುವ ಸರ್ಕಾರಗಳು‌ ಮಾಡಿದ ವಿದ್ಯುತ್ ಶಕ್ತಿ ಕರ್ಮ ಕಾಂಡ ತೆರೆಯಲು ಹೋದೆ. ಅಂದಿನ ಸದನ ಸಮಿತಿ ಅಧ್ಯಕ್ಷ ಕುರಿ ಕಾಯೋಕೆ ತೋಳದ ರೀತಿ ಮಾಡಿದ್ರು. ಪ್ರಕರಣ ಮುಚ್ಚಿ ಹಾಕಲು ಹೋಗಿದ್ರು. ಈಗ ದರ ಏರಿಕೆ ಅಂತ ಹೇಳ್ತಿದ್ದಾರೆ. ಇದು ಎರಡು ರಾಷ್ಟ್ರೀಯ ಪಕ್ಷದ ಕೊಡುಗೆ. ಇನ್ನು ಕಷ್ಟದ ದಿನಗಳು ರಾಜ್ಯಕ್ಕೆ ಬರಲಿವೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ವಿವರವಾದ ಮಾಹಿತಿ ಕೊಡುತ್ತೇನೆ ಅವರು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ನಗರ ಜೆಡಿಎಸ್ ಅಧ್ಯಕ್ಷ ಆರ್ ಪ್ರಕಾಶ ಮುಂತಾದವರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X