ಉಡುಪಿ: ಔಷಧೀಯ ಸಸಿ ನೆಟ್ಟ ಪ್ರಧಾನ ಜಿಲ್ಲಾ ನ್ಯಾಯಾಧೀಶರು
ಉಡುಪಿ : ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಉಡುಪಿ, ವಕೀಲರ ಸಂಘ ಉಡುಪಿ, ಅಭಿಯೋಜನಾ ಇಲಾಖೆ, ಆಯುಷ್, ತೋಟಗಾರಿಕೆ ಹಾಗೂ ಅರಣ್ಯ ಇಲಾಖೆಗಳ ಸಹಯೋಗದೊಂದಿಗೆ ಗಿಡಮೂಲಿಕೆ ಮತ್ತು ಔಷಧೀಯ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಾಂತವೀರ ಶಿವಪ್ಪ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು ಔಷಧೀಯ ಹಾಗೂ ಯಾವುದೇ ಗಿಡಗಳಾಗಲಿ ಮನುಷ್ಯನಿಗೆ ಉಸಿರಾಡಲು ಒಳ್ಳೆಯ ಆಕ್ಸಿಜನ್ ನೀಡುತ್ತವೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ಹೀಗಾಗಿ ಹಸಿರು ಬೆಳೆಸಿ ಉಳಿಸುವ ಪಣ ತೊಡೋಣ ಎಂದರು.
ಕಾರ್ಯಕ್ರಮದಲ್ಲಿ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರು, ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್, ಎಲ್ಲಾ ನ್ಯಾಯಾಧೀಶರು, ಜಿಲ್ಲಾ ಸರ್ಕಾರಿ ಅಭಿಯೋಜಕರಾದ ಶಾಂತಿಬಾಯಿ, ಉಪ ವಲಯ ಅರಣ್ಯಾಧಿಕಾರಿ ಗುರುರಾಜ್, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕಿ ಭುವನೇಶ್ವರಿ, ಆಯುಷ್ ಇಲಾಖೆಯ ಡಿಎಓ ಸತೀಶ್ ಆಚಾರ್ಯ, ವಕೀಲರ ಸಂಘದ ಅಧ್ಯಕ್ಷ ಬಿ ನಾಗರಾಜ್, ವಕೀಲರು ಹಾಗೂ ನ್ಯಾಯಾಂಗ ಇಲಾಖೆಯ ಸಿಬ್ಬಂದಿಗಳು ಭಾಗವಹಿಸಿದ್ದರು.