ನಟಿ ಸ್ವರಾ ಭಾಸ್ಕರ್ಗೆ ಕೊಲೆ ಬೆದರಿಕೆ ಪತ್ರ; ತನಿಖೆ ಆರಂಭಿಸಿದ ಪೊಲೀಸರು

ಸ್ವರಾ ಭಾಸ್ಕರ್ (PTI)
ಮುಂಬೈ: ಸಾವರ್ಕರ್ ಅವರನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರಿಗೆ ಅಪರಿಚಿತ ವ್ಯಕ್ತಿಗಳು ಕೊಲೆ ಬೆದರಿಕೆ ಪತ್ರ ಕಳುಹಿಸಿದ್ದಾರೆಂದು ವರದಿ ಆಗಿದೆ.
ಸ್ವರಾ ಭಾಸ್ಕರ್ ಅವರಿಗೆ ಬಂದ ಜೀವ ಬೆದರಿಕೆ ಪತ್ರದ ಬಗ್ಗೆ ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ ತಿಳಿಸಿರುವುದಾಗಿ ndtv ವರದಿ ಮಾಡಿದ.
ವರ್ಸೊವಾದಲ್ಲಿರುವ ನಟಿಯ ನಿವಾಸಕ್ಕೆ ಪತ್ರವನ್ನು ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪತ್ರವನ್ನು ಸ್ವೀಕರಿಸಿದ ಬಳಿಕ, ಸ್ವರಾ ಭಾಸ್ಕರ್ ವರ್ಸೋವಾ ಪೊಲೀಸ್ ಠಾಣೆಗೆ ಬಂದು ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ನೀಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೂರಿನ ಆಧಾರದ ಮೇಲೆ ನಾವು ಅಪರಿಚಿತ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದೇವೆ, ತನಿಖೆ ನಡೆಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.
ಹಿಂದಿಯಲ್ಲಿ ಬರೆದಿರುವ ಪತ್ರದಲ್ಲಿ "ವೀರ ಸಾವರ್ಕರ್ ಅವರ ಅವಮಾನವನ್ನು ದೇಶದ ಯುವಕರು ಸಹಿಸುವುದಿಲ್ಲ" ಎಂದು ಉಲ್ಲೇಖಿಸಲಾಗಿದೆ ಎಂದು ವರದಿ ಹೇಳಿದೆ.
Next Story