Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸೆಟಲ್ವಾಡ್,ಮಾಜಿ ಪೊಲೀಸ್ ಅಧಿಕಾರಿಗಳಿಗೆ...

ಸೆಟಲ್ವಾಡ್,ಮಾಜಿ ಪೊಲೀಸ್ ಅಧಿಕಾರಿಗಳಿಗೆ ವಿಶ್ವಸಂಸ್ಥೆ ಬೆಂಬಲದ ವಿರುದ್ಧ ಕಿಡಿಕಾರಿದ ಭಾರತ

"ದೇಶದ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಸ್ತಕ್ಷೇಪ"

ವಾರ್ತಾಭಾರತಿವಾರ್ತಾಭಾರತಿ29 Jun 2022 9:03 PM IST
share
ಸೆಟಲ್ವಾಡ್,ಮಾಜಿ ಪೊಲೀಸ್ ಅಧಿಕಾರಿಗಳಿಗೆ ವಿಶ್ವಸಂಸ್ಥೆ ಬೆಂಬಲದ ವಿರುದ್ಧ ಕಿಡಿಕಾರಿದ ಭಾರತ

ಹೊಸದಿಲ್ಲಿ,ಜೂ.29: ಮಾನವ ಹಕ್ಕುಗಳ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳ ಬಂಧನದ ವಿರುದ್ಧ ವಿಶ್ವಸಂಸ್ಥೆ ಅಧಿಕಾರಿಗಳ ಹೇಳಿಕೆಗಳಿಗೆ ಬುಧವಾರ ಕಟುವಾಗಿ ಪ್ರತಿಕ್ರಿಯಿಸಿರುವ ವಿದೇಶಾಂಗ ವ್ಯವಹಾರಗಳ ಸಚಿವಾಲಯವು,ಇದು ಸಂಪೂರ್ಣವಾಗಿ ಅನಗತ್ಯವಾಗಿದ್ದು, ಭಾರತದ ಸ್ವತಂತ್ರ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಸ್ತಕ್ಷೇಪವಾಗಿದೆ ಎಂದು ಹೇಳಿದೆ.

‘ಸೆಟ್ಲವಾಡ್ ಮತ್ತು ಇಬ್ಬರು ಮಾಜಿ ಪೊಲೀಸ್ ಅಧಿಕಾರಿಗಳ ಬಂಧನವು ನಮಗೆ ತೀವ್ರ ಕಳವಳವನ್ನುಂಟು ಮಾಡಿದೆ ಮತ್ತು ಅವರ ತಕ್ಷಣ ಬಿಡುಗಡೆಗೆ ಕರೆ ನೀಡುತ್ತಿದ್ದೇವೆ. 2002ರ ಗುಜರಾತ್ ದಂಗೆಗಳ ಸಂತ್ರಸ್ತರೊಂದಿಗಿನ ಕ್ರಿಯಾಶೀಲತೆ ಮತ್ತು ಏಕತೆಗಾಗಿ ಅವರಿಗೆ ಕಿರುಕುಳವನ್ನು ನೀಡಕೂಡದು’ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ರಾಯಭಾರಿ ಕಚೇರಿ (ಒಎಚ್‌ಸಿಎಚ್‌ಆರ್)ಯು ಮಂಗಳವಾರ ಟ್ವೀಟಿಸಿತ್ತು.

ಗುಜರಾತ್ ಪೊಲೀಸ್‌ನ ಭಯೋತ್ಪಾದನೆ ನಿಗ್ರಹ ದಳವು ಸೆಟಲ್ವಾಡ್ ಅವರೊಂದಿಗೆ ಮಾಜಿ ಡಿಜಿಪಿ ಆರ್.ಬಿ.ಶ್ರೀಕುಮಾರ್ ಅವರನ್ನೂ ಬಂಧಿಸಿದೆ. ಇನ್ನೋರ್ವ ಮಾಜಿ ಪೊಲೀಸ್ ಅಧಿಕಾರಿ ಸಂಜೀವ ಭಟ್ ಅವರು ಕಸ್ಟಡಿ ಸಾವಿನ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದು,ಅವರನ್ನೂ ಪ್ರಕರಣದಲ್ಲಿ ಹೆಸರಿಸಲಾಗಿದೆ.

‘ಸೆಟಲ್ವಾಡ್ ಮತ್ತು ಇತರ ಇಬ್ಬರ ವಿರುದ್ಧ ಕಾನೂನು ಕ್ರಮಕ್ಕೆ ಸಂಬಂಧಿಸಿದಂತೆ ಒಎಚ್‌ಸಿಎಚ್‌ಆರ್ ಹೇಳಿಕೆಯನ್ನು ನಾವು ಗಮನಿಸಿದ್ದೇವೆ ’ಎಂದು ಹೇಳಿಕೆಯೊಂದರಲ್ಲಿ ತಿಳಿಸಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿಯವರು,ಭಾರತದಲ್ಲಿಯ ಅಧಿಕಾರಿಗಳು ಕಾನೂನಿನ ಉಲ್ಲಂಘನೆಯ ವಿರುದ್ಧ ಸ್ಥಾಪಿತ ನ್ಯಾಯಾಂಗ ಪ್ರಕ್ರಿಯೆಗಳಿಗೆ ಅನುಗುಣವಾಗಿ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳುತ್ತಾರೆ. ಇಂತಹ ಕಾನೂನು ಕ್ರಮಗಳಿಗೆ ಕ್ರಿಯಾಶೀಲತೆಗಾಗಿ ಕಿರುಕುಳ ಎಂದು ಹಣೆಪಟ್ಟಿ ಹಚ್ಚುವುದು ದಾರಿ ತಪ್ಪಿಸುವಂಥದ್ದಾಗಿದೆ ಮತ್ತು ಸ್ವೀಕಾರಾರ್ಹವಲ್ಲ ಎಂದು ಹೇಳಿದರು.

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ರಕ್ಷಕರ ಕುರಿತು ವಿಶೇಷ ವರದಿಗಾರ್ತಿ ಮೇರಿ ಲಾಲರ್ ಅವರೂ ಸೆಟ್ಲವಾಡ್ ಅವರಿಗೆ ಬೆಂಬಲವನ್ನು ವ್ಯಕ್ತಪಡಿಸಿ,ಪೊಲೀಸ್ ಕ್ರಮವು ಅತ್ಯಂತ ಕಳವಳಕಾರಿಯಾಗಿದೆ. ಮಾನವ ಹಕ್ಕುಗಳಿಗಾಗಿ ಹೋರಾಡುವುದು ಅಪರಾಧವಲ್ಲ. ಸೆಟಲ್ವಾಡ್ ದ್ವೇಷ ಮತ್ತು ತಾರತಮ್ಯದ ವಿರುದ್ಧ ಪ್ರಬಲ ಧ್ವನಿಯಾಗಿದ್ದಾರೆ ಎಂದು ಹೇಳಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X