Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜು.1ರಿಂದ ಜೆಡಿಎಸ್ ಜನತಾಮಿತ್ರ...

ಜು.1ರಿಂದ ಜೆಡಿಎಸ್ ಜನತಾಮಿತ್ರ ಕಾರ್ಯಕ್ರಮ: ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ29 Jun 2022 10:59 PM IST
share
ಜು.1ರಿಂದ ಜೆಡಿಎಸ್ ಜನತಾಮಿತ್ರ ಕಾರ್ಯಕ್ರಮ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು, ಜೂ.29: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನೇ ಯಾಕೆ ಆಯ್ಕೆ ಮಾಡಿಕೊಳ್ಳಬೇಕು ಎನ್ನುವುದನ್ನು ನಗರದ ಜನತೆಗೆ ಮನದಟ್ಟು ಮಾಡಿಕೊಡುವ ಉದ್ದೇಶದಿಂದ ಜು.1ರಿಂದ 17ರವರೆಗೆ ಬೆಂಗಳೂರಿನಲ್ಲಿ ಜನತಾಮಿತ್ರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಬುಧವಾರ ನಗರದಲ್ಲಿರುವ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜನತಾ ಮಿತ್ರ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಬೆಂಗಳೂರು ನಗರದ ಎಲ್ಲ ವಿಧಾನಸಭೆ ಕ್ಷೇತ್ರಗಳು ಹಾಗೂ ವಾರ್ಡ್ ಅಧ್ಯಕ್ಷರ ಜೊತೆ ಅವರು ಪೂರ್ವಭಾವಿ ಸಭೆ ನಡೆಸಿದರು.

ಪ್ರಾದೇಶಿಕ ಅಸ್ಮಿತೆಯ ಪಕ್ಷವಾದ ಜಾತ್ಯತೀತ ಜನತಾದಳವು ಈ ಯಾತ್ರೆಯ ಮೂಲಕ ಜನರಿಂದ ಭವಿಷ್ಯದ ಸರಕಾರ ಹೇಗೆ ಕೆಲಸ ಮಾಡಬೇಕು? ಜನರ ನಿರೀಕ್ಷೆಗಳೇನು? ಇತ್ಯಾದಿ ಅಂಶಗಳ ಬಗ್ಗೆ ನೇರವಾಗಿ ಜನತೆಯಿಂದಲೇ ಅಭಿಪ್ರಾಯ ಸಂಗ್ರಹ ಮಾಡಲಿದೆ ಎಂದು ಅವರು ಹೇಳಿದರು.

ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದರೆ, ಎಲ್ಲರಿಗೂ ಅತ್ಯುತ್ತಮ ಗುಣಮಟ್ಟದ ಶಿಕ್ಷಣ, ಉತ್ತಮ ಆರೋಗ್ಯ ಸೌಲಭ್ಯ, ಕುಡಿಯುವ ನೀರು, ಜಲಮೂಲಗಳ ಸಂರಕ್ಷಣೆ, ಕೆರೆಕಟ್ಟೆಗಳ ರಕ್ಷಣೆ, ತ್ಯಾಜ್ಯ ನೀರಿನ ಸಮರ್ಪಕ ನಿರ್ವಹಣೆ, ಸುಗಮ ಸಂಚಾರ, ಸ್ವಚ್ಛತೆ, ನೈರ್ಮಲ್ಯ, ಸಮರ್ಪಕ ಕಸ ವಿಲೇವಾರಿ, ಆರ್ಥಿಕವಾಗಿ ದುರ್ಬಲರಾಗಿರುವವರ ಸಬಲೀಕರಣ ಇತ್ಯಾದಿ ಕಾರ್ಯಕ್ರಮಗಳನ್ನು ಕಾರ್ಯಗತ ಮಾಡಲು ನಿರ್ಧರಿಸಿದ್ದು, ಈ ಕುರಿತು ಜನರಲ್ಲಿ ವಿಶ್ವಾಸ ಮೂಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

ಜಲಧಾರೆಯಂತೆ ಜನತಾ ಮಿತ್ರ ಕಾರ್ಯಕ್ರಮವೂ ಯಶಸ್ವಿ ಆಗಬೇಕು. ರಾಜ್ಯದ ಕನ್ನಡಿಗರೆಲ್ಲಾ ನೆಲಮಂಗಲ ಸಮಾವೇಶದಲ್ಲಿ ಸೇರಿದಂತೆ ಬೆಂಗಳೂರು ಮಹಾನಗರದ ಜನತೆ ಜನತಾ ಮಿತ್ರ ಸಮಾವೇಶದಲ್ಲಿ ಸೇರಬೇಕು. ಅದಕ್ಕೆ ಅಗತ್ಯವಾದ ಎಲ್ಲ ಸಲಹೆ, ಸೂಚನೆಗಳನ್ನು ಕುಮಾರಸ್ವಾಮಿ ನೀಡಿದರು.

ಜನತಾ ಮಿತ್ರ ವಾಹನವು ನಗರದ ಎಲ್ಲ ವಿಧಾನಸಭೆ ಕ್ಷೇತ್ರಗಳ ಪ್ರತಿಯೊಂದು ವಾರ್ಡ್‍ಗಳಿಗೂ ಹೋಗಬೇಕು. ಪಕ್ಷದ ಮುಖಂಡರೆಲ್ಲ ಪ್ರತ್ಯೇಕ ತಂಡಗಳಾಗಿ ಬೇರ್ಪಟ್ಟು ಸಂಚಾರ ಮಾಡಬೇಕು. ಎಲ್ಲ ವಾರ್ಡ್‍ಗಳಲ್ಲಿಯೂ ಸಭೆಗಳನ್ನು ನಡೆಸಬೇಕು ಎಂದು ಕುಮಾರಸ್ವಾಮಿ ಹೇಳಿದರು.

ಜನತಾ ಮಿತ್ರ ವಾಹನವನ್ನು ವಿಶೇಷವಾಗಿ ವಿನ್ಯಾಸ ಮಾಡಲಾಗಿದೆ. ಜನರು ತಮ್ಮ ನಿರೀಕ್ಷೆಯ ಸರಕಾರ ಹೇಗಿರಬೇಕು ಎಂಬ ಬಗ್ಗೆ ಸಲಹೆ, ಅಭಿಪ್ರಾಯವನ್ನು ಕೊಡಬಹುದು. ಜನತಾ ಮಿತ್ರ ಕಾರ್ಯಕ್ರಮವನ್ನು ನಗರದ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಮನೆ ಮನೆಗೂ ತಲುಪಿಸಬೇಕು. ಈ ನಿಟ್ಟಿನಲ್ಲಿ ಎಲ್ಲ ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.

ಈಗಾಗಲೇ 15 ಜನತಾ ಮಿತ್ರ ಹೆಸರಿನ ಎಲ್‍ಇಡಿ ವಾಹನಗಳನ್ನು ಸಿದ್ಧಪಡಿಸಲಾಗಿದೆ. ಪ್ರತಿ ಒಂದು ವಾಹನ ತಲಾ ಎರಡು ಕ್ಷೇತ್ರಗಳಿಗೆ ತೆರಳಿದೆ. ಅಷ್ಟೂ ವಾಹನಗಳಿಗೆ ಶಾಸಕರು ಅಥವಾ ಹಿರಿಯ ಮುಖಂಡರ ನೇತೃತ್ವದಲ್ಲಿ ಉಸ್ತುವಾರಿ ತಂಡಗಳನ್ನು ರಚನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ನನ್ನನ್ನು ಒಳಗೊಂಡಂತೆ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ ಸೇರಿದಂತೆ ಎಲ್ಲ ಪ್ರಮುಖರು ತಮ್ಮ ನೇತೃತ್ವದ ತಂಡಗಳ ಮೂಲಕ ಕ್ಷೇತ್ರಗಳಿಗೂ ಭೇಟಿ ನೀಡಲಿದ್ದೇವೆ. ಈ ವಾಹನಗಳು ಬರುವ ಮುನ್ನ ಆಯಾ ಕ್ಷೇತ್ರಗಳಲ್ಲಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಎಚ್.ಡಿ.ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಮಂತ್ರಿಯಾಗಿ ಹಾಗೂ ನಾನು ಮುಖ್ಯಮಂತ್ರಿಯಾಗಿ ಬೆಂಗಳೂರು ನಗರಕ್ಕೆ ನೀಡಿದ ಕೊಡುಗೆಗಳ ಮಾಹಿತಿಯನ್ನು ಮನೆಮನೆಗೂ ಮುಟ್ಟಿಸಬೇಕು ಎಂದು ಕುಮಾರಸ್ವಾಮಿ ನಿರ್ದೇಶನ ನೀಡಿದರು.

ಜು.17ರಂದು ಜನತಾ ಮಿತ್ರ ಕಾರ್ಯಕ್ರಮ ಮುಕ್ತಾಯವಾಗಲಿದ್ದು, ಆ ದಿನವೇ ಬೆಂಗಳೂರಿನಲ್ಲಿ ಬೆಂಗಳೂರು ಜನರೇ ಸೇರುವ ಬೃಹತ್ ಸಮಾವೇಶ ನಡೆಯುತ್ತದೆ. ಒಂದು ಲಕ್ಷಕ್ಕೂ ಹೆಚ್ಚು ಜನರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಈ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್ ಸೇರಿದಂತೆ ಇನ್ನಿತರ ಮುಖಂಡರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X