ಜು.1ರಂದು ಶಾಲೆ, ಕಾಲೇಜುಗಳಿಗೆ ರಜೆ: ಡಿಸಿ ಡಾ. ರಾಜೇಂದ್ರ
ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ

ಮಂಗಳೂರು : ಭಾರತೀಯ ಹವಾಮಾನ ಇಲಾಖೆ ದಕ್ಷಿಣ ಕನ್ನಡದಲ್ಲಿ ಜು.1ರಂದು ಬೆಳಗ್ಗೆ 8.30ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಆದರೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ನಾಳೆಯೂ ಜಿಲ್ಲೆಯಲ್ಲಿ ಭಾರೀ ಮಳೆಯನ್ನು ನಿರೀಕ್ಷಿಸುತ್ತಿದೆ.
ಹಾಗಾಗಿ ಸಾರ್ವಜನಿಕ ಹಿತದೃಷ್ಟಿಯಿಂದ ಪ್ರಾಧಿಕಾರ ಜು.1ರಂದು ಅಂಗನವಾಡಿ, ಶಾಲೆಗಳು, ಪಿಯು ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಲು ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
Next Story





