Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಏಳೆಂಟು ತಿದ್ದುಪಡಿಗಳನ್ನಷ್ಟೇ ಮಾಡಿ...

ಏಳೆಂಟು ತಿದ್ದುಪಡಿಗಳನ್ನಷ್ಟೇ ಮಾಡಿ ತಿಪ್ಪೆ ಸಾರಿಸುವ ಕೆಲಸ ಸರಿಯಾದ ಕ್ರಮವಲ್ಲ: ಸಿದ್ದರಾಮಯ್ಯ

ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ

ವಾರ್ತಾಭಾರತಿವಾರ್ತಾಭಾರತಿ30 Jun 2022 6:40 PM IST
share
ಏಳೆಂಟು ತಿದ್ದುಪಡಿಗಳನ್ನಷ್ಟೇ ಮಾಡಿ ತಿಪ್ಪೆ ಸಾರಿಸುವ ಕೆಲಸ ಸರಿಯಾದ ಕ್ರಮವಲ್ಲ: ಸಿದ್ದರಾಮಯ್ಯ

ಬೆಂಗಳೂರು: ಪಠ್ಯ ಪುಸ್ತಕ ತಿದ್ದುಪಡಿಯ ಕುರಿತಾದ ಸರ್ಕಾರದ ಕ್ರಮ ಅರಾಜಕ ನಿಲುವಿನದ್ದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ‌ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಈ ಕುರಿತು  ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯ, 'ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಲೋಪ ದೋಷಗಳಾಗಿವೆ ಎಂದು ಸರ್ಕಾರ ಕೊನೆಗೂ ಒಪ್ಪಿಕೊಂಡಿದೆ. 1 ರಿಂದ 10 ನೆ ತರಗತಿಯವರೆಗಿನ ಕನ್ನಡ ಭಾಷಾ ಪಠ್ಯ ಪುಸ್ತಕ, ಸಮಾಜ ವಿಜ್ಞಾನ ಪಠ್ಯ ಪುಸ್ತಕ ಹಾಗೂ ಸೀಮಿತ ತರಗತಿಗಳ ಪರಿಸರ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು 83 ಕಡೆ ತಿದ್ದುಪಡಿಗಳನ್ನು ಮಾಡಲಾಗಿದೆ ಎಂಬ ಮಾಹಿತಿ ಇದೆ. ಮಾಡಿರುವ ತಿದ್ದುಪಡಿಗಳಲ್ಲಿ ಬಹುತೇಕ ವಿವರಗಳು ಜೀವ ವಿರೋಧಿ ನಿಲುವಿನಿಂದ ಕೂಡಿವೆ ಎಂಬುದು ನಾಡಿನ ಶಿಕ್ಷಣ ತಜ್ಞರುಗಳ ಅಭಿಪ್ರಾಯವಾಗಿದೆ' ಎಂದು ಹೇಳಿದ್ದಾರೆ.  

'ಸರ್ಕಾರ ತನ್ನ ಆದೇಶದಲ್ಲಿ ಏಳೆಂಟು ತಿದ್ದುಪಡಿಗಳನ್ನಷ್ಟೆ ಮಾಡಿ ತಿಪ್ಪೆ ಸಾರಿಸುವ ಕೆಲಸ ಮಾಡುತ್ತಿದೆ. ಇದು ಸರಿಯಾದ ಕ್ರಮವಲ್ಲ.
ರೋಹಿತ್ ಚಕ್ರತೀರ್ಥ ಸಮಿತಿ  ಮಾಡಿರುವ ಶಿಫಾರಸ್ಸುಗಳನ್ನು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ತಜ್ಞರುಗಳು ಪರಿಶೀಲನೆ ಮಾಡಿ ಆ ವಿವರಗಳು ನಾಡಿನ ಜ್ಞಾನ ಪರಂಪರೆಗೆ ಅನುಗುಣವಾಗಿವೆಯೆ? ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುತ್ತವೆಯೆ?' ಎಂದು ಪ್ರಶ್ನಿಸಿದ್ದಾರೆ.  

'ರಾಷ್ಟ್ರೀಯ, ಅಂತರರಾಷ್ಟ್ರೀಯ ಮಾನದಂಡಗಳಿಗೆ ಅನುಗುಣವಾಗಿವೆಯೆ? ಮಕ್ಕಳಿಗೆ ಕಲಿಸುವ ಸಂಗತಿಗಳು ದೇಶದ ಹಾಗೂ ಜಗತ್ತಿನ ವಿವಿಧ ಜ್ಞಾನ ಶಾಖೆಗಳ ವಿದ್ವಾಂಸರುಗಳು ಒರೆಗೆ ಹಚ್ಚಿ, ಪರಿಶೀಲಿಸಿ ಸರ್ವ ಸಮ್ಮತಿಯ ಅಭಿಪ್ರಾಯಕ್ಕೆ  ಬರಲಾಗಿದೆಯೆ? ಎಂಬ ಅಂಶಗಳೆಲ್ಲ ಮೊದಲು ಇತ್ಯರ್ಥವಾಗಬೇಕಾಗುತ್ತದೆ. ಇಲ್ಲದಿದ್ದರೆ ಯುಪಿಎಸ್‍ಸಿ, ಕೆಪಿಎಸ್‍ಸಿ ಮುಂತಾದ ಪರೀಕ್ಷಾ ಪ್ರಾಧಿಕಾರಗಳು ನಡೆಸುವ ಪರೀಕ್ಷೆಗಳಲ್ಲಿ ಹಾಗೂ ಜಗತ್ತಿನ ಬೇರೆ ಬೇರೆ ಕಾಲೇಜು/ ವಿಶ್ವ ವಿದ್ಯಾಲಯಗಳಿಗೆ ಕಲಿಯಲು ಇಚ್ಛಿಸುವವರು ಸತ್ಯ ಸಂಗತಿಗಳಿಗೆ ವಿರುದ್ಧವಾದ ಅಂಶಗಳನ್ನು ಬರೆದು ಅಲ್ಲಿನ ಪರೀಕ್ಷೆಗಳಲ್ಲಿ ಪಾಸು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.   

'ಸಮಗ್ರ ತಿದ್ದುಪಡಿಗಳನ್ನು ಪರಿಶೀಲನೆ ಮಾಡಿದ ನಂತರವೆ ಮಕ್ಕಳಿಗೆ ವಿತರಿಸಬೇಕು. ಪ್ರಸ್ತುತ ಸರ್ಕಾರ ಮಾಡಿರುವ ದುರುದ್ದೇಶದ ಅವಾಂತರಗಳನ್ನು ಪುಸ್ತಕಗಳಲ್ಲಿ ಸರಿಪಡಿಸದೆ ಎಸ್‍ಡಿ ಎಂಸಿಗಳು ಸ್ವತಃ ಝೆರಾಕ್ಸ್ ಮಾಡಿ ಮಕ್ಕಳಿಗೆ ವಿತರಿಸಲು ಹೇಳುತ್ತಿರುವುದು ಅರಾಜಕವಾದ ನಡೆಯಾಗಿದೆ'  ಎಂದು ಆಕ್ಷೇಪಿಸಿದ್ದಾರೆ. 

'ತಕ್ಷಣ ಅವಾಂತರಕಾರಿಯಾಗಿರುವ ಪುಸ್ತಕಗಳನ್ನು ವಾಪಸ್ಸು ಪಡೆದು, ಈ ಎಲ್ಲ ಅವಾಂತರಗಳು ಸರಿಯಾಗುವವರೆಗೆ ಬರಗೂರು ಸಮಿತಿಯು ಸಿದ್ಧಪಡಿಸಿದ್ದ ಪಠ್ಯ ಪುಸ್ತಕಗಳನ್ನೆ ಮುಂದುವರಿಸಬೇಕೆಂದು ಹಾಗೂ ಈ ಅವಾಂತರಗಳಿಗೆಲ್ಲ ಕಾರಣ ಕರ್ತರಾಗಿರುವವರೆಲ್ಲರಿಂದ ನಷ್ಟ ವಸೂಲಿ ಮಾಡಿ, ಕಾನೂನು ರೀತಿಯ ಕ್ರಮ ತೆಗೆದುಕೊಳ್ಳಬೇಕೆಂದು  ಆಗ್ರಹಿಸುತ್ತೇನೆ' ಎಂದು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X