Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾದಿಂದ ಭದ್ರತೆಗೆ ಸವಾಲು : ನೇಟೊ...

ಚೀನಾದಿಂದ ಭದ್ರತೆಗೆ ಸವಾಲು : ನೇಟೊ ಘೋಷಣೆ

ವಾರ್ತಾಭಾರತಿವಾರ್ತಾಭಾರತಿ30 Jun 2022 9:25 PM IST
share

 ಮ್ಯಾಡ್ರಿಡ್, ಜೂ.30: ಚೀನಾದ ಮಹಾತ್ವಾಂಕ್ಷೆ ಮತ್ತು ದಬ್ಬಾಳಿಕೆಯ ನೀತಿಯು ಪಾಶ್ಚಿಮಾತ್ಯ ಸಂಘಟನೆಯ ಹಿತಾಸಕ್ತಿ, ಭದ್ರತೆ ಮತ್ತು ಸಿದ್ಧಾಂತಗಳಿಗೆ ಬಹುದೊಡ್ಡ ಸವಾಲಾಗಿದೆ ಎಂದು ಘೋಷಿಸಿರುವ ನೇಟೊ, ಇದೇ ಪ್ರಥಮ ಬಾರಿಗೆ ಚೀನಾವನ್ನು ತನ್ನ ಕಾರ್ಯತಂತ್ರದ ಆದ್ಯತೆಯ ಪಟ್ಟಿಯಲ್ಲಿ ಸೇರಿಸಿದೆ.

 ನೇಟೊ ಒಕ್ಕೂಟದ ಮುಂದಿನ ಒಂದು ದಶಕದ ಆದ್ಯತೆಗೆ ಸಂಬಂಧಿಸಿದ ಕಾರ್ಯತಂತ್ರದ ನೂತನ ಪರಿಕಲ್ಪನೆಯ ವಿವರವನ್ನು ಸ್ಪೇನ್‌ನ ಮ್ಯಾಡ್ರಿಡ್‌ನಲ್ಲಿ ನಡೆದ ಶೃಂಗಸಭೆಯಲ್ಲಿ ಅನುಮೋದಿಸಲಾಗಿದೆ. ಇದರಲ್ಲಿ ರಶ್ಯವನ್ನು ಕಟು ಶಬ್ದಗಳಲ್ಲಿ ಟೀಕಿಸಲಾಗಿದ್ದು , ರಶ್ಯವು ನೇಟೊದ ಶಾಂತಿ ಮತ್ತು ಭದ್ರತೆಗೆ ಅತ್ಯಂತ ಗಮನಾರ್ಹ ಮತ್ತು ನೇರ ಬೆದರಿಕೆಯಾಗಿದೆ ಎಂದು ಉಲ್ಲೇಖಿಸಲಾಗಿದೆ. ಆದರೆ, ಚೀನಾದ ಮಿಲಿಟರಿ ಮಹಾತ್ವಾಕಾಂಕ್ಷೆ, ತೈವಾನ್ ವಿಷಯದಲ್ಲಿ ಹೊಂದಿರುವ ಆಕ್ರಮಣಕಾರಿ ಧೋರಣೆ ಮತ್ತು ರಶ್ಯದ ಜತೆಗಿನ ನಿಕಟ ಬಾಂಧವ್ಯವು ನೇಟೊಗೆ ವ್ಯವಸ್ಥಿತ ಸವಾಲುಗಳನ್ನು ಒಡ್ಡಿದೆ ಎಂದಿದೆ.

  ಚೀನಾವು ಪರಮಾಣು ಶಸ್ತ್ರಾಸ್ತ್ರ ಸೇರಿದಂತೆ ತನ್ನ ಪಡೆಯನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುತ್ತಿದೆ, ನೆರೆಯ ದೇಶಗಳನ್ನು ಬೆದರಿಸುವುದು, ತೈವಾನ್‌ಗೆ ಬೆದರಿಕೆ ಹಾಕುತ್ತಿದೆ, ಆಧುನಿಕ ತಂತ್ರಜ್ಞಾನ ಬಳಸಿಕೊಂಡು ತನ್ನದೇ ನಾಗರಿಕರ ವಿರುದ್ಧ ಗೂಢಚರ್ಯೆ ಮಾಡುತ್ತಿದೆ ಮತ್ತು ರಶ್ಯದ ಸುಳ್ಳು ಹಾಗೂ ತಪ್ಪು ಮಾಹಿತಿ ಪ್ರಸಾರ ಮಾಡುತ್ತಿದೆ ಎಂದು ನೇಟೊದ ಪ್ರಧಾನ ಕಾರ್ಯದರ್ಶಿ ಜೆನ್ಸ್ ಸ್ಟಾಲ್ಟನ್‌ಬರ್ಗ್ ಸುದ್ಧಿಗೋಷ್ಟಿಯಲ್ಲಿ ಹೇಳಿದ್ದಾರೆ. ಚೀನಾ ನಮ್ಮ ಎದುರಾಳಿ ಅಲ್ಲ, ಆದರೆ ಅದು ಪ್ರತಿನಿಧಿಸುವ ಗಂಭೀರ ಸವಾಲುಗಳ ಬಗ್ಗೆ ನಾವು ಸ್ಪಷ್ಟವಾಗಿರಬೇಕು ಎಂದವರು ಇದೇ ಸಂದರ್ಭ ಸ್ಪಷ್ಟಪಡಿಸಿದ್ದಾರೆ.

 ಇದಕ್ಕೆ ಪ್ರತಿಕ್ರಿಯಿಸಿರುವ ಚೀನಾ, ಇದೊಂದು ನಿರರ್ಥಕ ಎಚ್ಚರಿಕೆಯಾಗಿದೆ. ನೇಟೊದ ಘೋಷಣೆಯನ್ನು ತಾನು ದೃಢವಾಗಿ ವಿರೋಧಿಸುವುದಾಗಿ ಹೇಳಿದೆ. ನೇಟೊದ ತಥಾಕಥಿತ ನೂತನ ಕಾರ್ಯತಂತ್ರದ ಪರಿಕಲ್ಪನೆಯು ವಾಸ್ತವಾಂಶವನ್ನು ಕಡೆಗಣಿಸಿದ್ದು ಕಪ್ಪು-ಬಿಳಿಯ ಬಗ್ಗೆ ಗೊಂದಲ ಹೊಂದಿದೆ. ಮತ್ತು ಚೀನಾದ ವಿದೇಶಾಂಗ ನೀತಿಯ ಬಗ್ಗೆ ಮಸಿ ಬಳಿದಿದೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಝಾವೊ ಲಿಜಿಯನ್ ಪ್ರತಿಕ್ರಿಯಿಸಿದ್ದಾರೆ.

ಚೀನಾ ಮಾಡುತ್ತಿರುವ ಕೆಲಸವೆಂದರೆ, ನಾವು ಅನುಸರಿಸುವ, ವಿಶ್ವಾಸ ಇರಿಸಿರುವ, ನಾವು ನಿರ್ಮಿಸಲು ಸಹಾಯ ಮಾಡಿದ ನಿಯಮಗಳ ಆಧಾರಿತ ಅಂತರಾಷ್ಟ್ರೀಯ ವ್ಯವಸ್ಥೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸುವುದು. ಹೀಗೆ ಚೀನಾ ಒಂದಲ್ಲ ಒಂದು ರೀತಿ ಸವಾಲೆಸೆಯುವುದನ್ನು ಮುಂದುವರಿಸಿದರೆ ಅದರ ವಿರುದ್ಧ ನಾವು ನಿಲ್ಲುತ್ತೇವೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕೆನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X