ಐಪಿಎಸ್ ಅಧಿಕಾರಿಗಳ ವರ್ಗಾವಣೆ; ಮಂಗಳೂರು ನಗರ ಡಿಸಿಪಿಯಾಗಿ ಅಂಶು ಕುಮಾರ್ ನೇಮಕ

photo- twitter@anshu_ips
ಬೆಂಗಳೂರು, ಜೂ.30: ರಾಜ್ಯ ಸರಕಾರವು ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ.
ಉಡುಪಿ ಜಿಲ್ಲೆಯ ಕರಾವಳಿ ಭದ್ರತಾ ವಿಭಾಗದ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಅಂಶು ಕುಮಾರ್ ಅವರನ್ನು ಮಂಗಳೂರು ನಗರದ ಡಿಸಿಪಿ(ಕಾನೂನು ಮತ್ತು ಸುವ್ಯವಸ್ಥೆ)ಯಾಗಿ ವರ್ಗಾವಣೆ ಮಾಡಲಾಗಿದೆ.
ಅರುಣ್ ಚಕ್ರವರ್ತಿ ಅವರನ್ನು ರಾಜ್ಯ ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದ್ದು, ಅವರು ಹಾಲಿ ಇರುವ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಎಡಿಜಿಪಿ ಹುದ್ದೆಯನ್ನು ಪ್ರಭಾರಿಯಾಗಿ ಇರಿಸಲಾಗಿದೆ.
ಪೊಲೀಸ್ ನೇಮಕಾತಿ ವಿಭಾಗದ ಡಿಐಜಿಪಿ ಡಾ.ಕೆ.ತ್ಯಾಗರಾಜನ್ ಅವರನ್ನು ದಾವಣಗೆರೆಯ ಪೂರ್ವ ವಲಯದ ಡಿಐಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.
Next Story





