Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂಪುರ್ ಶರ್ಮ ಪ್ರಕರಣ: ಟಿವಿ ಚರ್ಚಾ...

ನೂಪುರ್ ಶರ್ಮ ಪ್ರಕರಣ: ಟಿವಿ ಚರ್ಚಾ ಕಾರ್ಯಕ್ರಮದ ಅಜೆಂಡಾ, ದಿಲ್ಲಿ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

"ಕಾನೂನಿಗೆ ಗೌರವ ನೀಡದೆ ಏನು ಬೇಕಾದರೂ ಹೇಳಬಹುದು ಎಂದು ಅಂದುಕೊಂಡಿದ್ದರೇ?"

ವಾರ್ತಾಭಾರತಿವಾರ್ತಾಭಾರತಿ1 July 2022 12:59 PM IST
share
ನೂಪುರ್ ಶರ್ಮ ಪ್ರಕರಣ: ಟಿವಿ ಚರ್ಚಾ ಕಾರ್ಯಕ್ರಮದ ಅಜೆಂಡಾ, ದಿಲ್ಲಿ ಪೊಲೀಸರನ್ನು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ಹೊಸದಿಲ್ಲಿ: ಪ್ರವಾದಿ ಮುಹಮ್ಮದ್ ಅವರ ವಿರುದ್ಧ ಇದೀಗ ಉಚ್ಛಾಟಿತ ಬಿಜೆಪಿ ವಕ್ತಾರೆ ನೂಪುರ್ ಶರ್ಮ ನೀಡಿದ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದ ಜನರ ವಿರುದ್ಧ ಕ್ರಮ ಕೈಗೊಳ್ಳದೇ ಇರುವುದನ್ನು ಸುಪ್ರೀಂ ಕೋರ್ಟ್ ಇಂದು ಬಲವಾಗಿ ಖಂಡಿಸಿದೆ.

"ನೀವು ಇತರರ ವಿರುದ್ಧ ಎಫ್‍ಐಆರ್ ದಾಖಲಿಸಿದಾಗ ಅವರನ್ನು ತಕ್ಷಣ ಬಂಧಿಸಲಾಗುತ್ತದೆ ಆದರೆ ನಿಮ್ಮ ವಿರುದ್ಧ ದಾಖಲಾದಾಗ ನಿಮ್ಮನ್ನು ಮುಟ್ಟುವ ಧೈರ್ಯ ಯಾರಿಗೂ ಇಲ್ಲ,'' ಎಂದು ಜಸ್ಟಿಸ್ ಸೂರ್ಯಕಾಂತ್ ಹೇಳಿದರು.

ನೂಪುರ್ ಶರ್ಮ ಅವರು ಟಿವಿ ವಾಹಿನಿಯಲ್ಲಿ ಹೇಳಿಕೆ ನೀಡಿದ ನಂತರ ದಿಲ್ಲಿ ಪೊಲೀಸರು ಆಕೆಯ ವಿರುದ್ಧ ಮೊದಲು ಪ್ರಕರಣ ದಾಖಲಿಸಿದ್ದರು ಎಂದು ಶರ್ಮ ಅವರ ವಕೀಲರಾದ ಮಣೀಂದರ್ ಸಿಂಗ್ ಹೇಳಿದರು.

"ದಿಲ್ಲಿ ಪೊಲೀಸರೇನು ಮಾಡಿದ್ದಾರೆ?ನಮ್ಮ ಬಾಯಿ ತೆರೆಯುವಂತೆ ಮಾಡಬೇಡಿ. ಟಿವಿ ಚರ್ಚೆ ಯಾವ ವಿಚಾರ ಆಗಿತ್ತು? ಒಂದು ಅಜೆಂಡಾವನ್ನು ಬೆಂಬಲಿಸಲೆಂದೇ? ನ್ಯಾಯಾಲಯದಲ್ಲಿರುವ ವಿಚಾರವನ್ನು ಏಕೆ ಆಯ್ದುಕೊಳ್ಳಲಾಗಿತ್ತು? ಆಕೆ ಒಂದು ಪಕ್ಷದ ವಕ್ತಾರೆಯಾಗಿದ್ದರೆ ಏನು? ಆಕೆ ತನಗೆ ಅಧಿಕಾರದ ಬೆಂಬಲವಿದೆ ಹಾಗೂ ಕಾನೂನಿಗೆ ಗೌರವ ನೀಡದೆ ಏನು ಬೇಕಾದರೂ ಹೇಳಬಹುದು ಎಂದು ಅಂದುಕೊಂಡಿದ್ದರೇ?'' ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

"ನಿರೂಪಕರು ಕೇಳಿದ ಒಂದು ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದ್ದರು,'' ಎಂದು ನೂಪುರ್ ಅವರ ವಕೀಲರು ಹೇಳಿದಾಗ "ಹಾಗಿದ್ದರೆ ನಿರೂಪಕರ ವಿರುದ್ಧ ಕೇಸ್ ದಾಖಲಿಸಬೇಕು,''ಎಂದು ಜಸ್ಟಿಸ್ ಸೂರ್ಯಕಾಂತ್ ಹೇಳಿದರು.

ನೂಪುರ್ ಶರ್ಮ ತಮ್ಮ ಸುರಕ್ಷತೆಯ ನೆಪವೊಡ್ಡಿ ತಮ್ಮ ವಿರುದ್ಧ ಹಲವು ರಾಜ್ಯಗಳಲ್ಲಿ ದಾಖಲಾಗಿರುವ ಪ್ರಕರಣಗಳನ್ನು ದಿಲ್ಲಿಗೆ ವರ್ಗಾಯಿಸುವಂತೆ ಬೇಡಿಕೆಯಿಟ್ಟಿರುವುದನ್ನು ಇಂದಿನ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಬಲವಾಗಿ ಖಂಡಿಸಿದೆ. ಆಕೆಯ ಅರ್ಜಿಯ ವಿಚಾರಣೆ ನಡೆಸಲು ನ್ಯಾಯಾಲಯ ನಿರಾಕರಿಸಿದ ನಂತರ ವಕೀಲರು ಅದನ್ನು ವಾಪಸ್ ಪಡೆದರು.

"ಆಕೆ ದೇಶಾದ್ಯಂತ ಭಾವನೆಗಳನ್ನು ಕೆರಳಿಸಿದ್ದಾರೆ. ಆಕೆ ಬೆದರಿಕೆ ಎದುರಿಸುತ್ತಿದ್ದಾರೆಯೇ ಅಥವಾ ಆಕೆಯೇ ಭದ್ರತೆಗೆ ಅಪಾಯವೊಡ್ಡುತ್ತಿದ್ದಾರೆಯೇ? ದೇಶದಲ್ಲಿ ನಡೆಯುತ್ತಿರುವುದಕ್ಕೆ ಆಕೆಯೇ ಕಾರಣ. ನಾವು ಚರ್ಚಾ ಕಾರ್ಯಕ್ರಮ ನೋಡಿದ್ದೇವೆ ಹಾಗೂ ಆಕೆಯನ್ನು ಹೇಗೆ ಪ್ರಚೋದಿಸಲಾಯಿತೆಂಬುದನ್ನು ನೋಡಿದ್ದೇವೆ. ಆದರೆ ಆಕೆ  ಹೀಗೆಲ್ಲ ಹೇಳಿದ್ದು ನೋಡಿದಾಗ ಹಾಗೂ ನಂತರ ತಾನೊಬ್ಬ ವಕೀಲೆ ಎಂದು ಹೇಳಿದಾಗ, ನಿಜಕ್ಕೂ ನಾಚಿಕೆಗೇಡು. ಆಕೆ ಇಡೀ ದೇಶದ ಕ್ಷಮೆಯಾಚಿಸಬೇಕು,'' ಎಂದು ಜಸ್ಟಿಸ್ ಸೂರ್ಯಕಾಂತ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X