Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉತ್ತಮ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಪ್ರಮುಖ: ರಶ್ಮಿ ಎಸ್.ಆರ್.

ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ1 July 2022 6:12 PM IST
share
ಉತ್ತಮ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರ ಪಾತ್ರ ಪ್ರಮುಖ: ರಶ್ಮಿ ಎಸ್.ಆರ್.

ಮಂಗಳೂರು: ಬ್ರಿಟಿಷರನ್ನು ಭಾರತದಿಂದ ಹೊರಗಟ್ಟುವಲ್ಲಿ ಬ್ರಿಟಿಷರೇ ಹೊರತಂದ ಬಂಗಾಲಿ ಗೆಝೆಟ್ ಪತ್ರಿಕೆ ಆ ಸಮಯದಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಇಂದು ಕೂಡಾ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಪತ್ರಿಕಾ ಮಾಧ್ಯಮ ಹಾಗೂ ಪತ್ರಕರ್ತರ ಪಾತ್ರ ಪ್ರಮುಖ ಎಂದು ದ.ಕ. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರಶ್ಮಿ ಎಸ್.ಆರ್. ಅಭಿಪ್ರಾಯಿಸಿದ್ದಾರೆ.

ಪತ್ರಿಕಾ ದಿನಾಚರಣೆಯ ಅಂಗವಾಗಿ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬ್ರಾಂಡ್ ಮಂಗಳೂರು ಪ್ರಶಸ್ತಿ ವಿಜೇತ  ನಾ. ಕಾರಂತ ಪೆರಾಜೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು.

ಖಾಸಗಿ ದೃಶ್ಯ ಮಾಧ್ಯಮಗಳ ಉಗಮದ ಬಳಿಕ ಸಮಾಜದಲ್ಲಿ ಸಾಕಷ್ಟು ಬದಲಾವಣೆ ಬೆಳವಣಿಗೆಯಾಗಿದ್ದು, ಇದೀಗ ಮೊಬೈಲ್ ಜರ್ನಲಿಸಂ ಕೂಡಾ ಜನರಿಗೆ ಹತ್ತಿರವಾಗುತ್ತಿದೆ. ಏನೇ ಬದಲಾವಣೆಯಾದರೂ ಪತ್ರಕರ್ತರು ಸತ್ಯದ ಪರವಾಗಿ ವರದಿ ಮಾಡಿ ಜನರಿಗೆ ನೈಜ ವಿಷಯಗಳನ್ನು ತಿಳಿಸಿದಾಗ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದು ಅವರು ಹೇಳಿದರು.

ತನಗೆ ದೊರಕಿರುವ ಪ್ರಶಸ್ತಿ ಹಳ್ಳಿಗೆ ಸಂದ ಮಾನ. ಹಳ್ಳಿಗಳಲ್ಲಿ ಇಂದಿಗೂ ಮಾನವೀಯ ಮೌಲ್ಯ, ಸೌಹಾರ್ದತೆ ವಿಭಿನ್ನ ರೀತಿಯಲ್ಲಿ ವ್ಯಕ್ತವಾಗುತ್ತಿದ್ದು, ಆ ನಿಟ್ಟಿನಲ್ಲಿ ಬರೆಯಲ್ಪಟ್ಟ ಲೇಖನಕ್ಕೆ ಈ ಗೌರವ ಸಂದಿರುವುದು ಸಂತಸ ನೀಡಿದೆ ಎಂದು ಬ್ರಾಂಡ್ ಮಂಗಳೂರು ಪ್ರಶಸ್ತಿ ಸ್ವೀಕರಿಸಿದ ಅಡಿಕೆ ಪತ್ರಿಕೆಯ ಸಹಾಯಕ ಸಂಪಾದಕ ನಾ. ಕಾರಂತ ಪೆರಾಜೆ ಅಭಿಪ್ರಾಯಿಸಿದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಪ್ರೆಸ್‌ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಿಕಾ ಭವನ ಟ್ರಸ್ಟ್‌ನ ಅಧ್ಯಕ್ಷ ರಾಮಕೃಷ್ಣ ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಕಾರ್ಯಕ್ರಮ ನಿರೂಪಿಸಿದರು. ಪುಷ್ಪರಾಜ್ ಬಿ.ಎನ್. ವಂದಿಸಿದರು.

ಬಹುಕೌಶಲ್ಯ ಇಂದಿನ ಮಾಧ್ಯಮದ ಅಗತ್ಯ

ಆರ್ಥಿಕ ಬಿಕ್ಕಟ್ಟು, ಕೊರೋನ ಸಾಂಕ್ರಾಮಿಕದ ನಂತರ ಸಾಕಷ್ಟು ಸಂದಿಗ್ಧತೆಗೆ ಪತ್ರಿಕಾ ರಂಗ ಒಳಗಾಗಿದ್ದರೂ ನವ ಮಾಧ್ಯಮವು ಸಾಕಷ್ಟು ಅವಕಾಶಗಳನ್ನು ಕಲ್ಪಿಸಿದೆ. ಪತ್ರಕರ್ತರಲ್ಲಿ ಇಂದು ಕೌಶಲ್ಯ ಅತೀ ಪ್ರಮುಖ ಪಾತ್ರ ವಹಿಸುತ್ತಿದೆ. ಬಹುಕೌಶಲ್ಯ ಇಂದಿನ ಮಾಧ್ಯಮದ ಅಗತ್ಯವಾಗಿದೆ ಎಂದು ‘‘ಕೋವಿಡ್ ನಂತರ ಮಾಧ್ಯಮದ ಸ್ಥಿತ್ಯಂತರ’ದ ಕುರಿತು ಮಾತನಾಡಿದ ಹಿರಿಯ ಪತ್ರಕರ್ತ ಯು.ಕೆ. ಕುಮಾರನಾಥ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X