ಅಗ್ನಿಪಥ್ ಯೋಜನೆಯಡಿ ವಾಯುಸೇನೆ ನೇಮಕಾತಿಗೆ ಪ್ರವೇಶ ಪರೀಕ್ಷೆ: ಅರ್ಜಿ ಆಹ್ವಾನ
ಉಡುಪಿ, ಜು.೧:ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಸೇನೆಯ ತಾಂತ್ರಿಕ ಮತ್ತು ತಾಂತ್ರಿಕೇತರ ಕ್ಷೇತ್ರದಲ್ಲಿ ಸೇವೆ ಸಲ್ಲಿಸಲು ಜುಲೈ ೨೪ರಂದು ನಡೆಯುವ ಆನ್ಲೈನ್ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.
೧೯೯೯ರ ಡಿಸೆಂಬರ್ ೨೯ರಿಂದ ೨೦೦೫ ಜೂನ್ ೨೯ರೊಳಗೆ ಜನಿಸಿರುವ, ದ್ವಿತೀಯ ಪಿಯುಸಿಯ ಕಲಾ, ವಾಣಿಜ್ಯ, ವಿಜ್ಞಾನ ವಿಭಾಗದಲ್ಲಿ ಶೇ.೫೦ ಅಂಕಗಳೊಂದಿಗೆ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳು ಜುಲೈ ೫ರ ಒಳಗೆ ವೆಬ್ಸೈಟ್ -http://agnipathvayu.cdac.in- ಮೂಲಕ ಹೆಸರು ನೋಂದಣಿ ಮಾಡಿಕೊಳ್ಳಬಹು ದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ಮೊಬೈಲ್ ನಂ.: ೯೯೪೫೮೫೬೬೭೦, ೮೧೯೭೪೪೦೧೫೫ ಮತ್ತು ೮೧೦೫೬೧೮೨೯೧ನ್ನು ಸಂಪರ್ಕಿಸ ಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story