Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ 10 ಸಾವಿರ ಮಂದಿಯಿಂದ...

ಉಡುಪಿ ಜಿಲ್ಲೆಯಲ್ಲಿ 10 ಸಾವಿರ ಮಂದಿಯಿಂದ ಯೋಗಾಭ್ಯಾಸ: ಜಿಲ್ಲಾಧಿಕಾರಿ ಕೂರ್ಮಾರಾವ್

ವಾರ್ತಾಭಾರತಿವಾರ್ತಾಭಾರತಿ1 July 2022 8:05 PM IST
share
ಉಡುಪಿ ಜಿಲ್ಲೆಯಲ್ಲಿ 10 ಸಾವಿರ ಮಂದಿಯಿಂದ ಯೋಗಾಭ್ಯಾಸ: ಜಿಲ್ಲಾಧಿಕಾರಿ ಕೂರ್ಮಾರಾವ್

ಉಡುಪಿ, ಜು.೧: ಜನಸಾಮಾನ್ಯರಲ್ಲಿ ಯೋಗದ ಮಹತ್ವ ಹಾಗೂ ಅದರಿಂದ ದೇಹಕ್ಕೆ ಆಗುವ ಪ್ರಯೋಜನ ಕುರಿತು ಅರಿವು ಮೂಡಿಸುವುದು ಸೇರಿದಂತೆ ಯೋಗವನ್ನು ನಿತ್ಯ ಜೀವನದ ಒಂದು ಭಾಗವಾಗಿ ಅಳವಡಿಸಿ ಕೊಳ್ಳಲು ಆಗಸ್ಟ್ ೧೨, ೧೩ ಮತ್ತು ೧೪ರಂದು ಯೋಗಾಥಾನ್ ಕಾರ್ಯಕ್ರಮವನ್ನು ಜಿಲ್ಲಾಮಟ್ಟ ದಲ್ಲಿ ಆಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.

ಶುಕ್ರವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಕೋರ್ಟ್‌ಹಾಲ್‌ನಲ್ಲಿ, ಜಿಲ್ಲೆಯಲ್ಲಿ ಯೋಗಾಥಾನ್ ಕಾರ್ಯಕ್ರಮ ಏರ್ಪಡಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.  

ಜಿಲ್ಲೆಯಲ್ಲಿ ನಡೆಯುವ ಯೋಗಾಥಾನ್ ಕಾರ್ಯಕ್ರಮಕ್ಕೆ ೧೦,೦೦೦ ಜನರಿಗೆ  ಏಕಕಾಲದಲ್ಲಿ ಒಂದೆಡೆ ತರಬೇತಿ ನೀಡಿ, ಯೋಗವನ್ನು ತಮ್ಮ ದೈನಂದಿನ ಚಟುವಟಿಕೆಗಳನ್ನಾಗಿಸಿಕೊಳ್ಳುವುದರೊಂದಿಗೆ ಉತ್ತಮ ಮಾನಸಿಕ ಮತ್ತು ದೈಹಿಕ ಆರೋಗ್ಯವಂತರನ್ನಾಗಿಸುವುದು ಕಾರ್ಯಕ್ರಮದ ಪ್ರಮುಖ ಉದ್ದೇಶವಾಗಿದೆ.  ಈ ಕಾರ್ಯಕ್ರಮ ದಲ್ಲಿ ಭಾಗವಹಿಸುವ ಪ್ರತಿಯೊಬ್ಬರಿಗೂ  ಪ್ರಮಾಣಪತ್ರ ನೀಡಲಾಗುವುದು ಎಂದರು.

ಯೋಗಾಭ್ಯಾಸಕ್ಕೆ  ಸಾರ್ವಜನಿಕರು ಸೇರಲು ಅನುಕೂಲವಾಗುವ ಸೂಕ್ತ ಸ್ಥಳ ವನ್ನು ಗುರುತಿಸಿ,  ಅಲ್ಲಿ ಎಲ್ಲಾ ಅಗತ್ಯ ಮೂಲ ಸೌಕರ್ಯಗಳನ್ನು ಕೈಗೊಳ್ಳಬೇಕು. ಕಾರ್ಯಕ್ರಮದಲ್ಲಿ ಜಿಲ್ಲೆಯ ಯೋಗ ಸಂಸ್ಥೆಗಳು, ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಭಾಗವಹಿಸಲು ಅನುಕೂಲವಾಗುವಂತೆ ವಿವಿಧ ಸ್ವಯಂ ಸೇವಾ ಸಂಘಟನೆಗಳ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಸಹಕಾರವನ್ನು ಪಡೆಯುವಂತೆ ಅವರು ಸೂಚಿಸಿದರು.

ಜಿಲ್ಲೆಯ ಎಲ್ಲಾ ಸಾರ್ವಜನಿಕರು ಈ ಯೋಗಾಥಾನ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಹೆಸರು ನೊಂದಣಿ ಮಾಡಲು, ಆನ್‌ಲೈನ್ ನೊಂದಣಿಯನ್ನು - register@yogathon2022.com-ಹಾಗೂ ಆಫ್‌ಲೈನ್ ನೊಂದಣಿಯನ್ನು  ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮಾಡಬಹುದಾಗಿದೆ ಎಂದರು.

ಯುವಜನರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಕಾಲೇಜುಗಳ ಪ್ರಾಂಶುಪಾಲರ ಸಹಕಾರ ಪಡೆಯ ಬೇಕು. ಯೋಗ ತರಬೇತಿ ನೀಡಲು ಯೋಗ ಶಿಕ್ಷಕರನ್ನು ಗುರುತಿಸಬೇಕು. ಕಾರ್ಯಕ್ರಮಕ್ಕೆ ಶಿಬಿರಾರ್ಥಿಗಳು ಭಾಗವಹಿಸಲು ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆ ಮಾಡಬೇಕು ಎಂದು ಸೂಚನೆ ನೀಡಿದರು.

ಉಡುಪಿ ಜಿಲ್ಲೆ ಘೋಷಣೆಯಾಗಿ ೨೫ ವರ್ಷಗಳು ಪೂರ್ಣವಾಗುತ್ತಿದ್ದು, ಇದರ ಅಂಗವಾಗಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಷನ್ ಕುಮಾರ್ ಶೆಟ್ಟಿ, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X