ಬೆಳಗಾವಿ | ಮುನ್ನೆಚ್ಚರಿಕೆ ಇಲ್ಲದೆ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ: ಆಯೋಜಕರ ವಿರುದ್ಧ ಪ್ರಕರಣ ದಾಖಲು
photo- twitter
ಬೆಳಗಾವಿ, ಜು.1: ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಯಾವುದೇ ಮುನ್ನೆಚ್ಚರಿಕೆ ಕ್ರಮ ವಹಿಸದೆ ಜೂ.29ರಂದು ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆ ನಡೆದಿದ್ದು, ಇದರ ವಿಡಿಯೋಗಳು ಜು.1ರಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿವೆ. ಈ ಹಿನ್ನೆಲೆಯಲ್ಲಿ ಆಯೋಜಕರ ವಿರುದ್ಧ ಐಗಳಿ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಚಮಕೇರಿ ಗ್ರಾಮದ ರಸ್ತೆಯಲ್ಲಿ ಬೀರಲಿಂಗೇಶ್ವರ ಜಾತ್ರೆ ಪ್ರಯುಕ್ತ ಬುಧವಾರ ಟ್ರ್ಯಾಕ್ಟರ್ ಹಗ್ಗಜಗ್ಗಾಟ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಅಪಾಯವನ್ನೂ ಲೆಕ್ಕಿಸದೆ ಸ್ಪರ್ಧಾಳುಗಳು ಭಾಗವಹಿಸಿದ್ದರು. ಈ ವಿಷಯ ಗಮನಕ್ಕೆ ಬರುತ್ತಿದ್ದಂತೆ ಪೆÇಲೀಸರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಸಾರ್ವಜನಿಕ ವಲಯದಲ್ಲಿ ಅಪಾಯಕಾರಿಯಾಗಿ ಟ್ರ್ಯಾಕ್ಟರ್ ಸ್ಪರ್ಧೆ ಆಯೋಜಿಸಿದ ಆರೋಪದಡಿ ಆಯೋಜಕರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
Next Story