Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೇರ ಪಾವತಿ ಪೌರಕಾರ್ಮಿಕರ ಸೇವೆ ಖಾಯಂಗೆ...

ನೇರ ಪಾವತಿ ಪೌರಕಾರ್ಮಿಕರ ಸೇವೆ ಖಾಯಂಗೆ ಸರ್ಕಾರದ ಒಪ್ಪಿಗೆ, ಅನುಷ್ಠಾನಕ್ಕೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ1 July 2022 9:27 PM IST
share
ನೇರ ಪಾವತಿ ಪೌರಕಾರ್ಮಿಕರ ಸೇವೆ ಖಾಯಂಗೆ ಸರ್ಕಾರದ ಒಪ್ಪಿಗೆ, ಅನುಷ್ಠಾನಕ್ಕೆ ಸಮಿತಿ ರಚನೆ: ಸಿಎಂ ಬೊಮ್ಮಾಯಿ

ಬೆಂಗಳೂರು, ಜುಲೈ 1- ರಾಜ್ಯದಲ್ಲಿ ಬಿಬಿಎಂಪಿ ಹಾಗೂ ಇತರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇರ ಪಾವತಿ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸರ್ಕಾರದ ತಾತ್ವಿಕ ಒಪ್ಪಿಗೆ ಇದೆ. ಇದನ್ನು ಕಾನೂನುಬದ್ಧವಾಗಿ ಜಾರಿಗೊಳಿಸಲು ಸರ್ಕಾರದ ಹಿರಿಯ ಅಧಿಕಾರಿಗಳು, ಕಾನೂನು ಇಲಾಖೆ ಹಾಗೂ ಪೌರ ಕಾರ್ಮಿಕರ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಪೌರಕಾರ್ಮಿಕರ ಸಮಸ್ಯೆಗಳನ್ನು ಚರ್ಚಿಸಲು ಏರ್ಪಡಿಸಿದ್ದ ಸಭೆಯಲ್ಲಿ ಮಾತನಾಡಿ, ಈ ಸಮಿತಿಯು ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಸೂಚಿಸಿದರು.

ಪೌರಕಾರ್ಮಿಕರಿಗೆ ಸಾಮಾಜಿಕವಾಗಿ ಗೌರವ, ಸೌಲಭ್ಯ ಹಾಗೂ ಸುರಕ್ಷತೆ ಅಗತ್ಯ ಎನ್ನುವುದು ಸರ್ಕಾರಕ್ಕೆ ಮನವರಿಕೆಯಾಗಿದೆ. ಸರ್ಕಾರವು ಪೌರಕಾರ್ಮಿಕರ ಸಮಸ್ಯೆಗಳಿಗೆ ಮಾನವೀಯತೆಯಿಂದ ಸ್ಪಂದಿಸಲಿದೆ. ಈ ಉದ್ದೇಶದಿಂದಲೇ ಆಯವ್ಯಯದಲ್ಲಿ ಪೌರಕಾರ್ಮಿಕರಿಗೆ ಮಾಸಿಕ 2000 ರೂ. ಸಂಕಷ್ಟ ಭತ್ಯೆ ಘೋಷಿಸಿದ್ದು, ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಇದರೊಂದಿಗೆ ಪೌರಕಾರ್ಮಿಕರ ನೇಮಕಾತಿ ಸರಳೀಕರಣಗೊಳಿಸಲು ವಿಶೇಷ ನೇಮಕಾತಿ ನಿಯಮಗಳನ್ನು ರೂಪಿಸಲಾಗುವುದು ಹಾಗೂ ನೇಮಕಾತಿ ನೀತಿಯನ್ನೂ ಜಾರಿಗೆ ತರಲಾಗುವುದು. ಈ ಸಂದರ್ಭದಲ್ಲಿ ಐ.ಪಿ.ಡಿ. ಸಾಲಪ್ಪ ವರದಿ, ಚಂದ್ರಶೇಖರ್ ಸಮಿತಿ ವರದಿ ಹಾಗೂ ರಾಷ್ಟ್ರೀಯ ಕಾನೂನು ಶಾಲೆಯ ವರದಿಗಳನ್ನು ಪರಿಗಣಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜೊತೆಗೆ ಬೇರೆ ರಾಜ್ಯಗಳಲ್ಲಿ ನೀಡಲಾಗುತ್ತಿರುವ ಸೌಲಭ್ಯಗಳ ಮಾಹಿತಿಯನ್ನೂ ಪಡೆಯಲು ಸೂಚಿಸಿದರು.

ಇದರೊಂದಿಗೆ ಪೌರಕಾರ್ಮಿಕರಿಗೆ ಪ್ರತ್ಯೇಕವಾಗಿ ಗೃಹಭಾಗ್ಯ ಯೋಜನೆ ಜಾರಿಗೊಳಿಸಲು ಹೊಸದಾಗಿ ಮಂಜೂರಾತಿ ನೀಡಲಾಗುವುದು. ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ರೈತವಿದ್ಯಾನಿಧಿ ಮಾದರಿಯಲ್ಲಿ ವಿದ್ಯಾರ್ಥಿ ವೇತನ ನೀಡಲಾಗುವುದು. ಪೌರಕಾರ್ಮಿಕ ಮಹಿಳೆಯರಿಗೆ ಸರ್ಕಾರಿ ನೌಕರರಿಗೆ ನೀಡುವಂತೆ ಹೆರಿಗೆ ಸೌಲಭ್ಯಗಳನ್ನು ವಿಸ್ತರಿಸಲಾಗುವುದು.

ಎಲ್ಲ ನಗರ ಸ್ಥಳೀಯ ಸಂಸ್ಥೆಗಳು ಪೌರಕಾರ್ಮಿಕರಿಗೆ ವಿಶ್ರಾಂತಿ ಕೊಠಡಿ, ಶೌಚಾಲಯ ಸೌಲಭ್ಯ ಒದಗಿಸಬೇಕು. ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರತಿ ವಾರ್ಡ್‍ನಲ್ಲಿ ಒಂದು ಅಥವಾ ಎರಡು ವಿಶ್ರಾಂತಿ ಕೊಠಡಿಗಳನ್ನು ನಿರ್ಮಿಸಲು ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಎಂ.ಟಿ.ಬಿ.ನಾಗರಾಜ್, ಬಿ.ಎ. ಬಸವರಾಜ, ಮುನಿರತ್ನ, ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಎಂ.ಶಿವಣ್ಣ, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹೆಚ್. ಹನುಮಂತಪ್ಪ, ಅಖಿಲ ಕರ್ನಾಟಕ ಪೌರಕಾರ್ಮಿಕರ ಮಹಾಸಭೆಯ ಅಧ್ಯಕ್ಷ ನಾರಾಯಣ ಮತ್ತು ಇತರ ಸಂಘಟನೆಗಳ ಪ್ರತಿನಿಧಿಗಳು, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್, ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಮತ್ತು ಇತರ ಹಿರಿಯ ಅಧಿಕಾರಿಗಳು  ಸಭೆಯಲ್ಲಿ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X