ಮಹಾರಾಷ್ಟ್ರ: ನೂತನ ಸ್ಪೀಕರ್ ಆಗಿ ಬಿಜೆಪಿ ಶಾಸಕ ರಾಹುಲ್ ನಾರ್ವೇಕರ್ ಆಯ್ಕೆ

Photo: MLA Rahul Narvekar | Facebook
ಮುಂಬೈ: ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ಬಿಜೆಪಿಯ ಶಾಸಕ ರಾಹುಲ್ ನಾರ್ವೇಕರ್ ಅವರು ಆಯ್ಕೆಯಾಗಿದ್ದಾರೆ.
ಗುರುವಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಏಕನಾಥ್ ಶಿಂಧೆ ನೇತೃತ್ವದ ಶಾಸಕರ ಗುಂಪು ನಾರ್ವೇಕರ್ ಅವರನ್ನು ನಾಮನಿರ್ದೇಶನ ಮಾಡಿದೆ.
288 ಸದಸ್ಯ ಬಲದ ವಿಧಾನಸಭೆಯಲ್ಲಿ ನಾರ್ವೇಕರ್ ಅವರು 164 ಮತಗಳನ್ನು ಪಡೆದರೆ, 107 ಶಾಸಕರು ಅವರ ವಿರುದ್ಧ ಸ್ಪರ್ಧಿಸಿದ್ದ ಶಿವಸೇನಾ ಶಾಸಕ ರಾಜನ್ ಸಾಲ್ವಿ ಅವರಿಗೆ ಮತ ಚಲಾಯಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಸಮಾಜವಾದಿ ಪಕ್ಷ ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಶಾಸಕರು ಮತದಾನದಿಂದ ದೂರ ಉಳಿದಿದ್ದಾರೆ.
ಫೆಬ್ರವರಿ 2021 ರಲ್ಲಿ ಕಾಂಗ್ರೆಸ್ನ ನಾನಾ ಪಟೋಲೆ ಅವರು ಪಕ್ಷದ ರಾಜ್ಯ ಘಟಕದ ಮುಖ್ಯಸ್ಥರಾಗಲು ಸ್ಪೀಕರ್ ಹುದ್ದೆ ತೊರೆದಿದ್ದರು. ಬಳಿಕ ಉಪಸಭಾಪತಿ ನರಹರಿ ಜಿರ್ವಾಲ್ ಸ್ಪೀಕರ್ ಕಾರ್ಯಗಳನ್ನು ನಿರ್ವಹಿಸುತ್ತಿದ್ದರು.
Next Story